AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಾಹನ ಸವಾರರೇ ಗಮನಿಸಿ, ಈ ರಸ್ತೆಯಲ್ಲಿ ಭಾನುವಾರದ ವರೆಗೆ ಸಂಚಾರ ನಿರ್ಬಂಧ

ಭಾನುವಾರದ ವರೆಗೆ ಬೆಂಗಳೂರಿನ ಪ್ರಮುಖ ರಸ್ತೆಯೊಂದರಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಅದೇ ರೀತಿ ಪ್ರಮುಖ ಜಂಕ್ಷನ್​​ವೊಂದರಲ್ಲಿ ಅಂತಾರಾಜ್ಯ ಖಾಸಗಿ ಬಸ್‌ಗಳು ಪ್ರಯಾಣಿಕರನ್ನು ಹತ್ತಿಸಲು ಮತ್ತು ಇಳಿಸಲು ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ. ಆ ಕುರಿತು ವಿವರ ಇಲ್ಲಿದೆ.

ಬೆಂಗಳೂರು: ವಾಹನ ಸವಾರರೇ ಗಮನಿಸಿ, ಈ ರಸ್ತೆಯಲ್ಲಿ ಭಾನುವಾರದ ವರೆಗೆ ಸಂಚಾರ ನಿರ್ಬಂಧ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Aug 15, 2024 | 11:06 AM

Share

ಬೆಂಗಳೂರು, ಆಗಸ್ಟ್ 15: ರೈಲ್ವೇ ಯು ಗಾರ್ಡ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 14 ರಿಂದ 18 ರವರೆಗೆ ಬೆಂಗಳೂರಿನ ದೊಡ್ಡಾನೆಕುಂದಿ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಹೊರ ವರ್ತುಲ ರಸ್ತೆಯಿಂದ ಎಚ್‌ಎಎಲ್ ಅಥವಾ ದೊಡ್ಡಾನೆಕುಂದಿ ಕಡೆಗೆ ಪ್ರಯಾಣಿಸುವ ವಾಹನ ಸವಾರರು ಕಾರ್ತಿಕ್ ನಗರ ಜಂಕ್ಷನ್‌ನಲ್ಲಿ ಯು-ಟರ್ನ್ ತೆಗೆದುಕೊಳ್ಳಬಹುದು. ದೊಡ್ಡಾನೆಕುಂದಿ ಅಥವಾ ಎಚ್‌ಎಎಲ್​ನಿಂದ ಹೊರ ವರ್ತುಲ ರಸ್ತೆ ಕಡೆಗೆ ಹೋಗುವವರು ಇಸ್ರೋ ರಸ್ತೆಯನ್ನು ಬಳಸಿಕೊಂಡು ಕಾರ್ತಿಕ್ ನಗರ ಜಂಕ್ಷನ್‌ನಲ್ಲಿ ಎಡಕ್ಕೆ ಚಲಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 19 ರಿಂದ ಆರಂಭವಾಗಿ ನಗರದಿಂದ ಹೊರಹೋಗುವ ಎಲ್ಲಾ ಅಂತಾರಾಜ್ಯ ಖಾಸಗಿ ಬಸ್‌ಗಳು ಹೆಬ್ಬಾಳ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಲು ಮತ್ತು ಇಳಿಸಲು ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.

ಪ್ರಯಾಣಿಕರು ಜಕ್ಕೂರು ಏರೋಡ್ರೋಮ್ ಬಳಿಯ ಬಳ್ಳಾರಿ ರಸ್ತೆಯ ಸರ್ವೀಸ್ ರಸ್ತೆಗೆ ಪ್ರಯಾಣಿಸಬೇಕು, ಅಲ್ಲಿಂದ ಅಲ್ಲಾಳಸಂದ್ರ ಎನ್‌ಇಎಸ್ ಕಡೆಗೆ ತೆರಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ನಿರ್ಮಾಣ ಕಾರ್ಯಗಳು ಮತ್ತು ಕಿರಿದಾದ ರಸ್ತೆಯ ಕಾರಣದಿಂದಾಗಿ ಹೆಬ್ಬಾಳ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡಲು ಈ ಕ್ರಮ ಅನಿವಾರ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರತಿ ದಿನ ರಸ್ತೆಗಿಳಿಯುತ್ತಿವೆ 2000 ಹೊಸ ವಾಹನ! ವಾಯು ಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಈ ಕ್ರಮದಿಂದ ಜನರಿಗೆ ತಾತ್ಕಾಲಿಕವಾಗಿ ತೊಂದರೆಯಾಗಲಿದೆ. ಆದರೆ, ಸ್ಥಳೀಯ ನಿವಾಸಿಗಳ ಬೇಡಿಕೆಯ ಕಾರಣ ಈ ಕ್ರಮ ಕೈಗೊಳ್ಳದೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?