AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಲ್ ಇಲ್ಲದೆ ಚಾಲನೆ, ಡ್ರಂಕ್ ಆ್ಯಂಡ್ ಡ್ರೈವ್: ಬೆಂಗಳೂರಿನಲ್ಲಿ ದಾಖಲಾಯ್ತು ಮೊದಲ ಕ್ರಿಮಿನಲ್ ಕೇಸ್

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮತ್ತು ಚಾಲನಾ ಪರವಾನಗಿ ಇಲ್ಲದೆ ವಾಹನ ಚಾಲನೆ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ. ಭಾನುವಾರ ಕುಮಾರಸ್ವಾಮಿ ಲೇಔಟ್‌ನಲ್ಲಿ ಒಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಡಿಎಲ್ ಇಲ್ಲದೆ ಚಾಲನೆ, ಡ್ರಂಕ್ ಆ್ಯಂಡ್ ಡ್ರೈವ್: ಬೆಂಗಳೂರಿನಲ್ಲಿ ದಾಖಲಾಯ್ತು ಮೊದಲ ಕ್ರಿಮಿನಲ್ ಕೇಸ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 11, 2024 | 2:07 PM

Share

ಬೆಂಗಳೂರು, ನವೆಂಬರ್ 11: ಬೆಂಗಳೂರು ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ವಿರುದ್ಧ ಬಿರುಸಿನ ಕಾರ್ಯಾಚರಣೆ ಆರಂಭಿಸಿರುವ ಟ್ರಾಫಿಕ್ ಪೊಲೀಸರು ಹಲವಾರು ಪ್ರಕರಣಗಳನ್ನು ಪತ್ತೆಮಾಡಿದ್ದಾರೆ. ಅದರಲ್ಲೂ ವಿಶೇಷವಾಗಿ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ. ಅದರಂತೆ, ಚಾಲನಾ ಪರವಾನಗಿ ಕೂಡ ಇಲ್ಲದೆ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ವ್ಯಕ್ತಿಯೊಬ್ಬರ ವಿರುದ್ಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ಡಿಎಲ್ ಇಲ್ಲದೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಟ್ರಾಫಿಕ್ ಪೊಲೀಸರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಅದರಂತೆ, ಇದೀಗ ಮೊದಲ ಪ್ರಕರಣ ದಾಖಲಾಗಿದೆ.

53 ಸಾವಿರ ವಾಹನಗಳ ತಪಾಸಣೆ

ಕಳೆದ ವಾರ ಬೆಂಗಳೂರು ನಗರದಲ್ಲಿ ರಾತ್ರಿ ವೇಳೆ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಲಾಗಿದೆ. ನಗರದಾದ್ಯಂತ ಸುಮಾರು 53 ಸಾವಿರ ವಾಹನಗಳನ್ನ ತಪಾಸಣೆ ಮಾಡಲಾಗಿದೆ ಎಂದು ಸಂಚಾರ ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಮಾಹಿತಿ ನೀಡಿದ್ದಾರೆ.

ವಿಶೇಷ ಕಾರ್ಯಾಚರಣೆ ವೇಳೆ, 294 ಜನರು ಮದ್ಯಪಾನ ಮಾಡಿ ಚಾಲನೆ ಮಾಡಿರುವುದು ಪತ್ತೆಯಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ, ಅವರ ಚಾಲನಾ ಪರವಾನಗಿ ರದ್ದತಿಗೆ ಮನವಿ ಮಾಡಲಾಗಿದೆ. ಪ್ರಕರಣಗಳ ಸಂಬಂಧ ಮುಂದಿನ ವಿಚಾರಗಳು ನ್ಯಾಯಾಲಯದಲ್ಲಿ ನಿರ್ಧಾರ ಆಗಲಿವೆ ಎಂದು ಅವರು ತಿಳಿಸಿದ್ದಾರೆ.

ಈಗ ಡಿಎಲ್ ಇಲ್ಲದೇ ಚಾಹನ ಚಲಾಯಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. ಭಾನುವಾರ ಕೆಎಸ್ ಲೇಔಟ್ ಟ್ರಾಫಿಕ್ ಠಾಣೆಯಲ್ಲಿ ಒಂದು ಕೇಸ್ ದಾಖಲಾಗಿದೆ. ಯಾರೇ ಆಗಲಿ ಡಿಎಲ್ ಕೂಡ ಇಲ್ಲದೆ, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. BNS 281 ಅಡಿ ಕೇಸ್ ದಾಖಲಿಸುವ ಕೆಲಸ ಆಗುತ್ತಿದೆ ಎಂದು ಅನುಚೇತ್ ಹೇಳಿದ್ದಾರೆ.

ಇದನ್ನೂ ಓದಿ: ಡ್ರಂಕ್ ಡ್ರೈವ್: ಬೆಂಗಳೂರಿನ 118 ಶಾಲಾ ಬಸ್ ಚಾಲಕರ ವಿರುದ್ಧ ಕೇಸ್​, ಪರವಾನಗಿ ರದ್ದು

ಬೆಂಗಳೂರಿನ ಶಾಲೆ ಬಸ್​​ಗಳ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಬಗ್ಗೆಯೂ ವಿಶೇಷ ನಿಗಾ ಇಟ್ಟಿರುವ ಸಂಚಾರ ಪೊಲೀಸರು, ಕಳೆದ ಕೆಲವು ದಿನಗಳಿಂದ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಕಳೆದ 10 ತಿಂಗಳ ಅವಧಿಯಲ್ಲಿ 118 ಶಾಲಾ ವಾಹನ ಚಾಲಕರ ವಿರುದ್ಧ ಡ್ರಂಕ್​ ಆ್ಯಂಡ್ ಡ್ರೈವ್ ಕೇಸ್ ದಾಖಲಾಗಿದೆ ಎಂದು ಸಂಚಾರ ಪೊಲೀಸರು ಈಗಾಗಲೇ ತಿಳಿಸಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, ‘ಟಿವಿ9’

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು