ಬೆಂಗಳೂರು ವಿವಿಯ 58ನೇ ಘಟಿಕೋತ್ಸವ: ಹೆಚ್ಡಿ ದೇವೇಗೌಡ, ಇಸ್ರೋದ ಅಧ್ಯಕ್ಷ ಸೋಮನಾಥ್ಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನ
ರಾಜ್ಯದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಇಸ್ರೋದ ಅಧ್ಯಕ್ಷ ಎಸ್ ಸೋಮನಾಥ್ಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ. 58ನೇ ವಾರ್ಷಿಕ ಘಟಿಕೋತ್ಸವದಲ್ಲಿ 28,871 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಎಂದು ಬೆಂಗಳೂರು ವಿವಿ ಕುಲಪತಿ ಜಯಕರ ಶೆಟ್ಟಿ ಪತ್ರಿಕಾಗೊಷ್ಠಿ ನಡೆಸಿ ತಿಳಿಸಿದರು.
ಬೆಂಗಳೂರು, ಅ.16: ಅ.17ರ ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ (Bangalore University) ಕಾರ್ಯಕ್ರಮ ಹಿನ್ನೆಲೆ ಬೆಂಗಳೂರು ವಿವಿ ಕುಲಪತಿ ಜಯಕರ ಶೆಟ್ಟಿ ಪತ್ರಿಕಾಗೊಷ್ಠಿ ನಡೆಸಿದ್ದಾರೆ. ಸೆಂಟ್ರಲ್ ಕಾಲೇಜ್ ಅವರಣದ ಜ್ಯಾನಜ್ಯೋತಿ ಸಭಾಂಗಣದ ಬೋರ್ಡ್ ರೂಮ್ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷ ಇಬ್ಬರು ಸಾಧಕರಿಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತೆ ಎಂದು ತಿಳಿಸಿದರು
ರಾಜ್ಯದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಇಸ್ರೋದ ಅಧ್ಯಕ್ಷ ಎಸ್ ಸೋಮನಾಥ್ಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ. 58ನೇ ಘಟಿಕೋತ್ಸವದಲ್ಲಿ ಒಟ್ಟು 28,871 ಅಭ್ಯರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, ಅವರಲ್ಲಿ 13707 ವಿದ್ಯಾರ್ಥಿಗಳು ಹಾಗೂ 15164 ವಿಧ್ಯಾರ್ಥಿನಿಯರಿದ್ದಾರೆ. ಈ ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಗುವುದು ಅಂತ ಕುಲಪತಿ ಮಾಹಿತಿ ನೀಡಿದ್ರು ಇನ್ನು ಇದೇ ವೇಳೆ 204 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುತ್ತಿದ್ದು. 20 ಗ್ರಾಂ ಬೆಳ್ಳಿಯ ನಾಣ್ಯಕ್ಕೆ 18 ಕ್ಯಾರೆಟ್‌ನ 1.3 ಗ್ರಾಂ ಚಿನ್ನದ ಎಂಬೋಜ್ ಮಾಡಿರುವ ಚಿನ್ನದ ಪದಕಗಳನ್ನು ಈ ಬಾರಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಸ್ನಾತಕೋತ್ತರ ವಿಭಾಗದಲ್ಲಿ ಆಕ್ಸ್‌ಫರ್ಡ್ ವಿಜ್ಞಾನ ಮತ್ತು ಕಲಾ ಕಾಲೇಜಿನರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ವಿನುತಾ, ಜೆ.ಅತಿಹೆಚ್ಚು ಅಂದರೆ 8 ಚಿನ್ನದ ಪದಕ ಹಾಗೂ 3 ನಗದು ಬಹುಮಾನ, ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ಉದಯ ಕುಮಾರ ಮುರಗೋಡ ಅವರು 8 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದರೆ ಎಂದು ಬೆಂಗಳೂರು ವಿವಿ ಕುಲಪತಿ ಜಯಕರ ಶೆಟ್ಟಿ ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಅಸ್ಮಾ ಬಾನು ಡಬ್ಲ್ಯೂ, ಗಣಿತಶಾಸ್ತ್ರ ವಿಭಾಗದ ದಿವ್ಯ ಟಿ.ಎಂ., ಪ್ರಾಣಿಶಾಸ್ತ್ರ ವಿಭಾಗದ ನಮ್ರತಾ ಎ. ಸಂಸ್ಕೃತ ವಿಭಾಗದ ಭವಿಷ್ಯ ತಲಾ ಆರು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಇನ್ನೂ, ಸ್ನಾತಕ ವಿಭಾಗದಲ್ಲಿ ಎಎಸ್‌ಸಿ ಪದವಿ ಕಾಲೇಜಿನ ದೀಕ್ಷಿತ ಆರ್. ನಾಯಕ್ ಹಾಗೂ ವಿಶ್ವಚೇತನ ಪದವಿ ಕಾಲೇಜಿನ ರವಿಕುಮಾರ ಎಸ್.ಎಂ., ವಿಸಿಇಯಮೆಕ್ಯಾನಿಕಲ್ ಯೋಗೇಶ್ವರನ್ ತಲಾ 5 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದು ಜಿಂದಾಲ್ ಮಹಿಳಾ ಕಾಲೇಜಿನ ಚೈತ್ರ ಎಸ್, ಬೆಂಗಳೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ದಿವ್ಯ, ಟಿ.ಎಂ. ಹಾಗೂ ವಿಜಯನಗರಸಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ವೇತಾ ಉದಯ ಕುಮಾ ಮುರಗೋಡ ಅವರು ಬಾಬಾ ಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು ವಿವಿ ಹಾಸ್ಟೆಲ್ನಲ್ಲೂ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಊಟ, ವಾರ್ಡನ್ ವಿರುದ್ಧ ಪ್ರತಿಭಟನೆ!
ಬೆಂಗಳೂರು ವಿಶ್ವವಿದ್ಯಾಲಯವು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಹಾಗೂ ಶಿಕ್ಷಣದಲ್ಲಿ ಹೊಸ ವಿಧಾನಗಳನ್ನು ಜಾರಿಗೆ ತರುವಲ್ಲಿ ಸದಾ ಮುಂದಿದ್ದು. ಈ ಪರಂಪರೆಯ ಮುಂದುವರೆದ ಭಾಗವಾಗಿ ಈ ಬಾರಿ ಪದವಿ ಪ್ರಮಾಣ ಪತ್ರ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವ 28871 ವಿದ್ಯಾರ್ಥಿಗಳೂ ಘಟಿಕೋತ್ಸವದ ನಂತರ ತಮ್ಮ ಪ್ರಮಾಣ ಪತ್ರಗಳನ್ನು ಮಾಡಿಕೊಳ್ಳಬಹುದಾಗಿದೆ. ಡಿಜಿಲಾಕರ್ ಮತ್ತು ನ್ಯಾಡ್ ನಿಂದ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗವು ಸಂಪೂರ್ಣ ಡಿಜಿಟಲೀಕರಣಗೊಂಡಿದ್ದು, ಪರೀಕ್ಷೆ ಮುಗಿದ ಒಂದು ವಾರದೊಳಗೆ ಫಲಿತಾಂಶವನ್ನು ನೀಡಲಾಗಿದೆ. ಇದರಿಂದ ಸ್ನಾತಕೋತ್ತರ ವಿಭಾಗದ ಪ್ರವೇಶ ಪ್ರಕ್ರಿಯೆಗೆ ಇದು ಅನುಕೂಲವಾಗಲಿದೆ.
ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವವನ್ನು ಅಕ್ಟೋಬರ್ 17ರ ಮಂಗಳವಾರ ಬೆಳಗ್ಗೆ 10.30ಕ್ಕೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಯುವ ಉದ್ಯಮಿ, ಝರೋದಾ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೆಂಗಳೂರು ವಿವಿ ಕುಲಪತಿ ಜಯಕರ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:50 pm, Mon, 16 October 23