ರಾಜಕೀಯ ಪ್ರೇರಿತ ವಿದ್ಯಾರ್ಥಿ ಸಂಘಟನೆಗಳಿಗೆ ಬ್ರೇಕ್ ಹಾಕಿದ ಬೆಂಗಳೂರು ವಿಶ್ವವಿದ್ಯಾಲಯ

ರಾಜಕೀಯ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳ ಫ್ಲೆಕ್ಸ್, ಬ್ಯಾನರ್​ಗಳು ಹಾಕದಂತೆ ವಿಶ್ವವಿದ್ಯಾಲಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ. ಸದ್ಯ ಕೊರೊನಾ ಕಾರಣಕ್ಕೆ ಯಾರಿಗೂ ಪ್ರತಿಭಟನೆಗೆ ಅವಕಾಶ ಇಲ್ಲ.

ರಾಜಕೀಯ ಪ್ರೇರಿತ ವಿದ್ಯಾರ್ಥಿ ಸಂಘಟನೆಗಳಿಗೆ ಬ್ರೇಕ್ ಹಾಕಿದ ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು ವಿಶ್ವವಿದ್ಯಾಲಯ
Follow us
TV9 Web
| Updated By: sandhya thejappa

Updated on:Feb 02, 2022 | 1:04 PM

ಬೆಂಗಳೂರು: ರಾಜಕೀಯ ಪ್ರೇರಿತ ವಿದ್ಯಾರ್ಥಿ ಸಂಘಟನೆಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ (Bengaluru Universit) ಬ್ರೇಕ್ ಹಾಕಿದೆ. ಬೆಂಗಳೂರು ವಿವಿಯಲ್ಲಿ ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಯಾವುದೇ ಬಾಹ್ಯ ಸಂಘಟನೆಗಳಿಂದ ಧರಣಿಗೆ (Protest) ಅವಕಾಶವಿಲ್ಲ. ರಾಜಕೀಯ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳ ಫ್ಲೆಕ್ಸ್, ಬ್ಯಾನರ್​ಗಳು ಹಾಕದಂತೆ ವಿಶ್ವವಿದ್ಯಾಲಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ. ಸದ್ಯ ಕೊರೊನಾ ಕಾರಣಕ್ಕೆ ಯಾರಿಗೂ ಪ್ರತಿಭಟನೆಗೆ ಅವಕಾಶ ಇಲ್ಲ. ಬಳಿಕ ಏನೇ ಸಮಸ್ಯೆ ಇದ್ದರೂ, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಇದನ್ನು ಹೊರತು ಪಡಿಸಿ ರಾಜಕೀಯ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳ ಫ್ಲೆಕ್ಸ್, ಬ್ಯಾನರ್ ಹಾಕದಂತೆ ನಿರ್ಬಂಧ ಹೇರಲಾಗಿದೆ.

ರಾಜಕೀಯ ವಿದ್ಯಾರ್ಥಿ ಸಂಘಟನೆ ದೂರವಿಡಲು ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ರಚನೆ ಮಾಡಲಾಗಿದ್ದು, ಎಬಿವಿಪಿ (ABVP), (ಎನ್ಎಸ್ಯುಐ) NSUI, (ಎಸ್ಎಫ್ಐ) SFI ಹಾಗೂ (ಸಿಎಫ್ಐ) CFI ರಾಜಕೀಯ ಪ್ರೇರಿತ ವಿದ್ಯಾರ್ಥಿ ಸಂಘಟನೆಗಳಿಗೆ ವಿವಿ ಆವರಣದಲ್ಲಿ ನಿರ್ಬಂಧ ಹಾಕಲಾಗಿದೆ. ನಿನ್ನೆ ನಡೆದ ABVP ಹಾಗೂ NSUI ಪ್ರತಿಭಟನೆಯಲ್ಲಿ ಫ್ಲೆಕ್ಸ್, ಬ್ಯಾನರ್ ಪ್ರದರ್ಶನ ನಿಷೇಧಿಸಲಾಗಿತ್ತು. ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳು ಇನ್ನು ಮುಂದೆ ರಾಜಕೀಯ ಪಕ್ಷಕ್ಕೆ ಸೇರಿದರೆ ಅಂತ ಸಂಘಟನೆಗಳಿಗೆ ಪ್ರತಿಭಟನೆಗೆ ಅವಕಾಶ ಇಲ್ಲ.

ವಿವಿ ವಿದ್ಯಾರ್ಥಿಗಳೇ ನೇರವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಹಕಾರವಾಗುವಂತೆ ವಿವಿ ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ರಚನೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿವಿ ಸಂಶೋಧನಾ ವಿದ್ಯಾರ್ಥಿಗಳು ವಿವಿ ಕುಲಪತಿಗಳಿಗೆ ಪತ್ರ ನೀಡಿದ್ದಾರೆ.

ವಿದ್ಯಾರ್ಥಿ ಸಂಘಟನೆಗಳ ನಡುವೆ ಮಾರಾಮಾರಿ: ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿದ್ದು, ಧರಣಿ ನಿರತ ಎಬಿವಿಪಿ ಕಾಯರ್ಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದರು. ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ನಿನ್ನೆ (ಜನವರಿ 31) ಎಬಿವಿಪಿ ಪ್ರತಿಭಟನೆ ನಡೆಸಿತ್ತು.  ಪರೀಕ್ಷೆ ಮೌಲ್ಯಮಾಪನ, ಫಲಿತಾಂಶಕ್ಕೆ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಹಲವರು ಗಾಯಗೊಂಡಿದ್ದರು.

ವಿವಿ ಮುತ್ತಿಗೆ ಹಾಕಲು ಮುಂದಾಗಿದ್ದ ಅಖಿಲಾ ಭಾರತೀಯ ವಿದ್ಯಾರ್ಥಿ ಪರಿಷತ್  ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಹಾಸ್ಟೆಲ್ ಸಮಸ್ಯೆ, ವಿದ್ಯಾರ್ಥಿ ವೇತನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ವಿವಿಗೆ ವಿದ್ಯಾರ್ಥಿಗಳು ಮುಂದಾಗಿದ್ದರು. ಈ ವೇಳೆ ವಿದ್ಯಾರ್ಥಿ ಸಂಘಟನೆಗಳು ನಡವೆಯೇ ಮಾರಾಮಾರಿಯಾಗಿತ್ತು.

ಇದನ್ನೂ ಓದಿ

ಚಿತ್ತಾಪುರ: ಶಂಕಿತ ಚಿಕನ್ ಪಾಕ್ಸ್ ಗೆ ಇಬ್ಬರು ಮಕ್ಕಳು ಸಾವು, ಕುಟುಂಬದವರಿಗೂ ಚಿಕನ್ ಪಾಕ್ಸ್!

ನಾಳೆ ದೆಹಲಿಗೆ ಹಾರಲಿರುವ ಸಿಎಂ ಬೊಮ್ಮಾಯಿ; ಬಜೆಟ್ ಕುರಿತು ವರಿಷ್ಠರ ಜೊತೆ ಚರ್ಚೆ

Published On - 12:58 pm, Wed, 2 February 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ