ಬೆಂಗಳೂರಿನಲ್ಲಿ ಮೋದಿ ಓಡಾಡುವ ರಸ್ತೆಗಳ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಜೂ. 20, 21ರಂದು ಎರಡು ದಿನಗಳ ಕಾಲ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳಲ್ಲಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ.

ಬೆಂಗಳೂರಿನಲ್ಲಿ ಮೋದಿ ಓಡಾಡುವ ರಸ್ತೆಗಳ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಬೆಂಗಳೂರು ವಿಶ್ವವಿದ್ಯಾಲಯ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 20, 2022 | 6:50 AM

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೈಸೂರಿಗೆ ಆಗಮಿಸುತ್ತಿದ್ದಾರೆ. ಜೂನ್ 21ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗುತ್ತಾರೆ. ನಾಡಿದ್ದು ನಡೆಯುವ ಕಾರ್ಯಕ್ರಮಕ್ಕೆ ಮೋದಿ ಸೋಮವಾರವೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಮೋದಿ ಓಡಾಡುವ ರಸ್ತೆಗಳ ಕಾಲೇಜಿಗೆ ಬೆಂಗಳೂರು ವಿಶ್ವವಿದ್ಯಾಲಯ (Bengaluru University) ರಜೆ ಘೋಷಣೆ ಮಾಡಿದೆ. ಬೆಂಗಳೂರು ವಿವಿ ಸಂಯೋಜನೆಗೆ ಒಳಪಟ್ಟ ಒಟ್ಟು 64 ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ವಿವಿ ಆದೇಶ ಹೊರಡಿಸಿದೆ.

ಮೋದಿ ಭಾಗಿಯಾಗುವ ಕಾರ್ಯಕ್ರಮಗಳ ಪಟ್ಟಿ: ಜೂ. 20, 21ರಂದು ಎರಡು ದಿನಗಳ ಕಾಲ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳಲ್ಲಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಜೂ.20ರ ಮಧ್ಯಾಹ್ನ 11.55ಕ್ಕೆ ಬೆಂಗಳೂರು ಯಲಹಂಕ ವಾಯುನೆಲೆಗೆ ಪ್ರಧಾನಿ ಆಗಮಿಸುತ್ತಾರೆ. ಮಧ್ಯಾಹ್ನ 12.30ಕ್ಕೆ ಇಂಡಿಯನ್ ಇನ್ಸ್​ಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾರೆ.

ಇದನ್ನೂ ಓದಿ: IND vs SA 5thT20 Weather Report: ಫೈನಲ್ ಫೈಟ್​ಗೆ ಮಳೆ ಕಾಟ! ಟಾಸ್ ವೇಳೆಗೆ ವರುಣನ ಎಂಟ್ರಿ?

ಇದನ್ನೂ ಓದಿ
Image
Redmi Note 10S: ಬಜೆಟ್ ಬೆಲೆಯ ಈ ಫೋನಿನ ದರದಲ್ಲಿ ಮತ್ತಷ್ಟು ಕಡಿತ: ರೆಡ್ಮಿಯಿಂದ ಬಂಫರ್ ಆಫರ್
Image
IND vs SA 5thT20 Weather Report: ಫೈನಲ್ ಫೈಟ್​ಗೆ ಮಳೆ ಕಾಟ! ಟಾಸ್ ವೇಳೆಗೆ ವರುಣನ ಎಂಟ್ರಿ?
Image
Dinesh Karthik: 16 ವರ್ಷಗಳಲ್ಲಿ ಸಿಕ್ಕಿದ್ದು ಮೂರೇ ಮೂರು ಪಂದ್ಯಶ್ರೇಷ್ಠ ಪ್ರಶಸ್ತಿ…ಆದರೆ
Image
Indian Army Recruitment 2022: ಎಸ್​ಎಸ್​ಎಲ್​ಸಿ ಪಾಸ್ ಆದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

ಮಧ್ಯಾಹ್ನ 3.35ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಲಿರುವ ಮೋದಿ, ಸಂಜೆ 5ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್‌ನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸುತ್ತಾರೆ. ಸಂ5. 50ಕ್ಕೆ ಮೈಸೂರಿಗೆ ಆಗಮಿಸುತ್ತಾರೆ. ಸಂಜೆ 6ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಯೋಜನಗಳ ಫಲಾನುವಿಗಳೊಂದಿಗೆ ಸಂವಾದ ಮಾಡುತ್ತಾರೆ. ಬಳಿಕ ಸಂಜೆ 7.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಾರೆ.

ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡುತ್ತಾರೆ. ನಂತರ ರಾತ್ರಿ 8.15ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ಬೆಳೆಸುತ್ತಾರೆ. ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜೂ.21ರ ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸುವ ಪ್ರಧಾನಿ, ಯೋಗ ಶಿಬಿರದಲ್ಲಿ ಪಾಲ್ಗೊಳುತ್ತಾರೆ. ಸ್ವತಃ ಯೋಗಾಭ್ಯಾಸ ಮಾಡುತ್ತಾರೆ. ಅಂತರಾಷ್ಟ್ರೀಯ ಯೋಗ ದಿನದ ಕುರಿತು ಸಂದೇಶ ಸಾರುತ್ತಾರೆ. ಅರಮನೆಯಲ್ಲಿ ರಾಜ ಮನೆತನದವರ ಜೊತೆ ಉಪಹಾರ ಸೇವಿಸುತ್ತಾರೆ. ಬಳಿಕ ಬೆಳಿಗ್ಗೆ 9.25ಕ್ಕೆ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸುತ್ತಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Sun, 19 June 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ