ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೈಸೂರಿಗೆ ಆಗಮಿಸುತ್ತಿದ್ದಾರೆ. ಜೂನ್ 21ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗುತ್ತಾರೆ. ನಾಡಿದ್ದು ನಡೆಯುವ ಕಾರ್ಯಕ್ರಮಕ್ಕೆ ಮೋದಿ ಸೋಮವಾರವೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಮೋದಿ ಓಡಾಡುವ ರಸ್ತೆಗಳ ಕಾಲೇಜಿಗೆ ಬೆಂಗಳೂರು ವಿಶ್ವವಿದ್ಯಾಲಯ (Bengaluru University) ರಜೆ ಘೋಷಣೆ ಮಾಡಿದೆ. ಬೆಂಗಳೂರು ವಿವಿ ಸಂಯೋಜನೆಗೆ ಒಳಪಟ್ಟ ಒಟ್ಟು 64 ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ವಿವಿ ಆದೇಶ ಹೊರಡಿಸಿದೆ.
ಮೋದಿ ಭಾಗಿಯಾಗುವ ಕಾರ್ಯಕ್ರಮಗಳ ಪಟ್ಟಿ:
ಜೂ. 20, 21ರಂದು ಎರಡು ದಿನಗಳ ಕಾಲ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳಲ್ಲಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಜೂ.20ರ ಮಧ್ಯಾಹ್ನ 11.55ಕ್ಕೆ ಬೆಂಗಳೂರು ಯಲಹಂಕ ವಾಯುನೆಲೆಗೆ ಪ್ರಧಾನಿ ಆಗಮಿಸುತ್ತಾರೆ. ಮಧ್ಯಾಹ್ನ 12.30ಕ್ಕೆ ಇಂಡಿಯನ್ ಇನ್ಸ್ಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾರೆ.
ಇದನ್ನೂ ಓದಿ: IND vs SA 5thT20 Weather Report: ಫೈನಲ್ ಫೈಟ್ಗೆ ಮಳೆ ಕಾಟ! ಟಾಸ್ ವೇಳೆಗೆ ವರುಣನ ಎಂಟ್ರಿ?
ಮಧ್ಯಾಹ್ನ 3.35ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಲಿರುವ ಮೋದಿ, ಸಂಜೆ 5ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್ನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸುತ್ತಾರೆ. ಸಂ5. 50ಕ್ಕೆ ಮೈಸೂರಿಗೆ ಆಗಮಿಸುತ್ತಾರೆ. ಸಂಜೆ 6ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಯೋಜನಗಳ ಫಲಾನುವಿಗಳೊಂದಿಗೆ ಸಂವಾದ ಮಾಡುತ್ತಾರೆ. ಬಳಿಕ ಸಂಜೆ 7.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಾರೆ.
ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡುತ್ತಾರೆ. ನಂತರ ರಾತ್ರಿ 8.15ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ಬೆಳೆಸುತ್ತಾರೆ. ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜೂ.21ರ ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸುವ ಪ್ರಧಾನಿ, ಯೋಗ ಶಿಬಿರದಲ್ಲಿ ಪಾಲ್ಗೊಳುತ್ತಾರೆ. ಸ್ವತಃ ಯೋಗಾಭ್ಯಾಸ ಮಾಡುತ್ತಾರೆ. ಅಂತರಾಷ್ಟ್ರೀಯ ಯೋಗ ದಿನದ ಕುರಿತು ಸಂದೇಶ ಸಾರುತ್ತಾರೆ. ಅರಮನೆಯಲ್ಲಿ ರಾಜ ಮನೆತನದವರ ಜೊತೆ ಉಪಹಾರ ಸೇವಿಸುತ್ತಾರೆ. ಬಳಿಕ ಬೆಳಿಗ್ಗೆ 9.25ಕ್ಕೆ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸುತ್ತಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:15 pm, Sun, 19 June 22