ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 29, 2021 | 10:13 PM

ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳೂ ಶನಿವಾರ ತೆರೆದಿರುತ್ತವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ
ಬೆಂಗಳೂರು ವಿಶ್ವವಿದ್ಯಾಲಯ
Follow us on

ಬೆಂಗಳೂರು: ನಿಗದಿತ ವೇಳಾಪಟ್ಟಿಯಂತೆಯೇ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ನಡೆಯಲಿವೆ. ಪದವಿಯ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಈ ಮೊದಲು ನಿಗದಿಯಾಗಿದ್ದಂತೆ ಶನಿವಾರವೇ ಕೊನೆಯ ಪರೀಕ್ಷೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ದೇವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳೂ ನಾಳೆ ತೆರೆದಿರುತ್ತವೆ ಎಂದು ಅವರು ಹೇಳಿದ್ದಾರೆ.

ನೃಪತುಂಗ ವಿವಿ ಪರೀಕ್ಷೆಗಳು ಮುಂದೂಡಿಕೆ
ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ನಿಧನ ಹಿನ್ನೆಲೆಯಲ್ಲಿ ಬೆಂಗಳೂರಿನ ನೃಪತುಂಗ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅ.30ರಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಯ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ವಿವಿ ಮೌಲ್ಯಮಾಪನ ಕುಲಸಚಿವ ರಾಮಕೃಷ್ಣ ರೆಡ್ಡಿ ಮಾಹಿತಿ ನೀಡಿದ್ದಾರೆ.

ಭಾನುವಾರ ಕಂಠೀರವ ಸ್ಟುಡಿಯೊದಲ್ಲಿ ಪುನೀತ್ ರಾಜ್​​ಕುಮಾರ್ ಅಂತ್ಯಕ್ರಿಯೆ
ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ಭಾನುವಾರ ಕಂಠೀರವ ಸ್ಟುಡಿಯೊದಲ್ಲಿ ನಡೆಯಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಪುನೀತ್​ ಪುತ್ರಿ ಅಮೆರಿಕದಿಂದ ಆಗಮಿಸಬೇಕಿರುವ ಹಿನ್ನೆಲೆಯಲ್ಲಿ ಭಾನುವಾರವೇ ಅಂತ್ಯಕ್ರಿಯೆ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ರಜೆ: ಪುನೀತ್ ರಾಜ್​ಕುಮಾರ್ ನಿಧನಕ್ಕೆ ಶೋಕ
ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ