ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ದೇಶದ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಜೂನ್ 20) ರಾಜ್ಯಕ್ಕೆ ಆಗಮಿಸುತ್ತಾರೆ. ನಾಳೆ ಮೈಸೂರಿನಲ್ಲಿ ನಡೆಯುವ ಯೋಗ ಶಿಬಿರದಲ್ಲಿ ಮೋದಿ ಭಾಗಿಯಾಗುತ್ತಾರೆ. ಇಂದು ಬೆಂಗಳೂರಿಗೆ ಬಂದಿಳಿಯುವ ಪ್ರಧಾನಿ ಕೆಲ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾರೆ. ಇನ್ನು ಮೋದಿಗೆ ಸ್ವಾಗತ ಕೋರಲು ಬೆಂಗಳೂರು ವಿಶ್ವವಿದ್ಯಾಲಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬಗೆಬಗೆಯ ಹೂವುಗಳಿಂದ ವಿವಿ ಪ್ರವೇಶ ದ್ವಾರಕ್ಕೆ ಅಲಂಕಾರ ಮಾಡಲಾಗಿದೆ. ಮೋದಿ, ಸಿಎಂ ಬೊಮ್ಮಾಯಿ, ಸಚಿವ ಮುನಿರತ್ನ ಭಾವಚಿತ್ರವಿರುವ ಬ್ಯಾನರ್ ಹಾಕಿದ್ದು, ಪ್ರವೇಶ ದ್ವಾರದ ಬಳಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ನರೇಂದ್ರ ಮೋದಿ ಇಂದು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಅಪ್ ಎಕಾನಾಮಿಕ್ಸ್ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನೆ ಮಾಡಿ, ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣ ಮಾಡಿಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸಂವಾದ ಇರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕ್ಯಾಂಪಸ್ ಐಡಿ ಇದ್ದವರಿಗೆ ಮಾತ್ರ ಒಳಗೆ ಪ್ರವೇಶ ನೀಡಲಾಗುವುದು.
ಇದನ್ನೂ ಓದಿ: ಇನ್ನು ಮುಂದೆ ಅಪರಾಧ ಕೃತ್ಯಗಳನ್ನ ಎಸಗಿ ತಪ್ಪಿಸಿಕೊಳ್ಳಲು ಸಾಧ್ಯನೇ ಇಲ್ಲ; ರಾಯಚೂರು ಪೊಲೀಸರ ಮಾಸ್ಟರ್ ಪ್ಲಾನ್ ಏನು?
ಪ್ರಧಾನಿ ಮೋದಿ ಸಂಚರಿಸುವ ಮಾರ್ಗಗಲ್ಲಿ ಬಾರಿ ಬಿಗಿ ಭದ್ರತೆ ನೀಡಲಾಗಿದೆ. ಮೇಖ್ರಿ ಸರ್ಕಲ್ ಬಳಿ ಸುಮಾರು 1 ಸಾವಿರ ಪೊಲೀಸರ ನಿಯೋಜನೆಗೊಂಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಧಾನಿ ಪ್ರಯಾಣದ ವೇಳೆ ಒಟ್ಟು ಮೂರು ಹೆಲಿಕಾಫ್ಟರ್ ಹಾರಾಟ:
ಪ್ರಧಾನಿ ಜೊತೆ ಮೈಸೂರಿಗೆ ಹೆಲಿಕಾಫ್ಟರ್ನಲ್ಲಿ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಮತ್ತು 5 ಅಧಿಕಾರಿಗಳು ತೆರಳುತ್ತಾರೆ. ಎರಡನೇ ಹೆಲಿಕಾಫ್ಟರ್ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪಿಎಂ ಓಎಸ್ಡಿ ಸಂಜಯ್ ಭವ್ಸರ್, 5 ಅಧಿಕಾರಿಗಳು, 2 ತಜ್ಞ ವೈದ್ಯರು ಪ್ರಯಾಣಿಸುತ್ತಾರೆ. ಮೂರನೇ ಹೆಲಿಕಾಫ್ಟರ್ನಲ್ಲಿ ಪ್ರಧಾನಿ ಕಚೇರಿಯ 15 ಸಿಬ್ಬಂದಿ ತೆರಳುತ್ತಾರೆ.
ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:27 am, Mon, 20 June 22