AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ‌ ಬಿಲ್ ಬಾಕಿ ಉಳಿಸಿಕೊಂಡವರಿಗೆ ಬೆಂಗಳೂರು ಜಲಮಂಡಳಿ ಗುಡ್ ನ್ಯೂಸ್: ವನ್ ಟೈಮ್ ಸೆಟಲ್​ಮೆಂಟ್​ಗೆ ಅವಕಾಶ

ಟ್ರಾಫಿಕ್ ಪೊಲೀಸರು ಟ್ರಾಫಿಕ್ ಫೈನ್ ಬಾಕಿ ಪಾವತಿಗೆ ಡಿಸ್ಕೌಂಟ್ ನೀಡಿದ್ದ ರೀತಿ ಇದೀಗ ಬೆಂಗಳೂರು ಜಲಮಂಡಳಿ ನೀರಿನ‌ ಬಿಲ್ ಉಳಿಸಿಕೊಂಡವರಿಗೆ ವಿನಾಯಿತಿ ನೀಡಲು ಮುಂದಾಗಿದೆ. ಒನ್ ಟೈಮ್‌ ಸೆಟಲ್ ಮೆಂಟ್ ನೀಡಲು ಮುಂದಾಗಿದ್ದು, ಜನವರಿಯಿಂದ ಈ ವಿನಾಯಿತಿ ಜಾರಿಯಾಗಲಿದೆ. ಇದರಿಂದ ಹಳೆ ಬಾಕಿಯನ್ನು ಕ್ಲಿಯರ್ ಮಾಡಿಕೊಳ್ಳಲು ಜಲಮಂಡಳಿ ಸುವರ್ಣ ಅವಕಾಶ ನೀಡಿದಂತಾಗಿದೆ.

ನೀರಿನ‌ ಬಿಲ್ ಬಾಕಿ ಉಳಿಸಿಕೊಂಡವರಿಗೆ ಬೆಂಗಳೂರು ಜಲಮಂಡಳಿ ಗುಡ್ ನ್ಯೂಸ್: ವನ್ ಟೈಮ್ ಸೆಟಲ್​ಮೆಂಟ್​ಗೆ ಅವಕಾಶ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Dec 15, 2025 | 6:51 AM

Share

ಬೆಂಗಳೂರು, ಡಿಸೆಂಬರ್ 15: ಬೆಂಗಳೂರು (Bengaluru) ಸಂಚಾರ ಪೊಲೀಸರು ಬಾಕಿ ಇರುವ ಫೈನ್ ಪಾವತಿ ಮಾಡಲು ಡಿಸ್ಕೌಂಟ್ ನೀಡಿದ್ದ ರೀತಿಯಲ್ಲಿ ಜಲಮಂಡಳಿ ಕೂಡ ನೀರಿನ ಬಿಲ್ ಬಾಕಿ ಉಳಿಸಿಕೊಂಡವರಿಗೆ One time settlement ವಿನಾಯಿತಿ‌ ಕೊಡಲು ಮುಂದಾಗಿದೆ. ಕಾವೇರಿ ನೀರಿನ ವಿಳಂಬ ಶುಲ್ಕ ಮತ್ತು ಬಡ್ಡಿ ಮೇಲೆ ಸಂಪೂರ್ಣ ವಿನಾಯಿತಿ ನೀಡಲಿದೆ. ಆದರೆ ಅಸಲು ಹಣದಲ್ಲಿ ಯಾವುದೇ ವಿನಾಯಿತಿ ಇಲ್ಲ. ಮೂರು ತಿಂಗಳ ಕಾಲ ಬಾಕಿ ಮೊತ್ತ ವಿನಾಯಿತಿಗೆ ಅವಕಾಶ ನೀಡಲಿದೆ. ಜಲಮಂಡಳಿ ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಜನವರಿ ತಿಂಗಳಿನಿಂದ OTS ಜಾರಿಯಾಗುವ ಸಾಧ್ಯತೆ ಇದೆ.

ನೀರಿನ ಬಿಲ್: 700 ಕೋಟಿ ರೂ. ಬಾಕಿ!

ವಿಶ್ವದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿನಲ್ಲಿ, ಜಲಮಂಡಳಿಯು 11.14 ಲಕ್ಷ ನೀರಿನ ಸಂಪರ್ಕಗಳನ್ನು ಕಲ್ಪಿಸಿದೆ. ನಗರದ 1.55 ಕೋಟಿ ಜನರ ಬಾಯಾರಿಕೆ ನೀಗಿಸುತ್ತಿದೆ. ನೂರು ಕಿ.ಮೀ. ದೂರದ ಕಾವೇರಿಯಿಂದ ನೀರು ತರುತ್ತಿರುವ ಜಲಮಂಡಳಿಗೆ ನೀರು ಮತ್ತು ಒಳಚರಂಡಿ ಶುಲ್ಕವೇ ಆದಾಯದ ಪ್ರಮುಖ ಮೂಲವಾಗಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು, ವಸತಿ ಮತ್ತು ವಾಣಿಜ್ಯ ಕಟ್ಟಡಗಳಿಗೆ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಸಮರ್ಪಕವಾಗಿ ಶುಲ್ಕ ಪಾವತಿಸುತ್ತಿಲ್ಲ. ಇದರಿಂದ ಜಲಮಂಡಳಿಯು ದೈನಂದಿನ ನಿರ್ವಹಣೆಗೆ ಹಣ ಹೊಂದಿಸಲು ಪರದಾಡುತ್ತಿದೆ. ಹಲವು ವರ್ಷಗಳಿಂದ ಗ್ರಾಹಕರು 700 ಕೋಟಿ ರೂ. ಶುಲ್ಕ ಬಾಕಿ ಉಳಿಸಿಕೊಂಡಿದ್ದು, ಅಸಲು 450 ಕೋಟಿ ಹಣ ಬರುವ ನಿರೀಕ್ಷೆಯಿದೆ.

ಬೆಂಗಳೂರು ಜಲಮಂಡಳಿಯ ವನ್ ಟೈಮ್ ಸೆಟಲ್​ಮೆಂಟ್ ನಿರ್ಧಾರದ ಬಗ್ಗೆ ಬೆಂಗಳೂರಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಇದು ತುಂಬಾ ಒಳ್ಳೆಯ ನಿರ್ಧಾರ. ನಮ್ಮ ಕಚೇರಿಯ ನೀರಿನ ಬಿಲ್ ಎರಡೂವರೆ ಲಕ್ಷ ರೂ. ಇತ್ತು. ಬಡ್ಡಿ ಮತ್ತು ಫೈನ್ ಸೇರಿ ಲಕ್ಷಾಂತರ ರುಪಾಯಿ ಆಗಿದೆ. ಇದೀಗ ವನ್ ಟೈಮ್ ಸೆಟಲ್​ಮೆಂಟ್ ಅವಕಾಶದಿಂದ ನಮಗೆ ಅನುಕೂಲ ಆಗಲಿದೆ ಎಂದಿದ್ದಾರೆ.

ನೀರಿನ ಬಾಕಿ ಬಿಲ್ ಹೇಗೆ ಪಾವತಿ ಮಾಡಬಹುದು?

ಬಾಕಿ ಬಿಲ್ ಹಣ ಪಾವತಿ ಮಾಡಲು ಬಿಡಬ್ಲೂಎಸ್ಎಸ್ಬಿ ಆನ್‌ಲೈನ್, ಆಫ್‌ಲೈನ್ (ಜಲಮಂಡಳಿ ಕಚೇರಿ) ಮತ್ತು ಇತರ ಬ್ಯಾಂಕಿಂಗ್ ಪಾವತಿ ವ್ಯವಸ್ಥೆಗಳ ಮೂಲಕ ಪಾವತಿಗೆ ಅವಕಾಶ ನೀಡಲದೆ. ಮಾರ್ಚ್ ಅಂತ್ಯದ ವರೆಗೆ ಈ ಓಟಿಎಸ್ ಸಿಸ್ಟಮ್ ಜಾರಿಯಲ್ಲಿರುವ ನಿರೀಕ್ಷೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?