Bangalore Water Crisis: ಕುಡಿಯಲು ಯೋಗ್ಯ ನೀರಿನ ದುರ್ಬಳಕೆ, 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹಿಸಿದ ಜಲ ಮಂಡಳಿ

ಕುಡಿಯಲು ಯೋಗ್ಯ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಬೆಂಗಳೂರು ಜಲಮಂಡಳಿ ಇದೀಗ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಬೆಂಗಳೂರು ನಗರದ 22 ಮನೆಗಳಿಂದ 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹ ಮಾಡಲಾಗಿದೆ. ಈ ಮೂಲಕ ಕುಡಿಯಲು ಯೋಗ್ಯ ನೀರನ್ನು ನಿರ್ಮಾಣ, ಕಾರು ತೊಳೆಯುವುದು, ಉದ್ಯಾನಗಳಿಗೆ ಬಳಸುವವರ ವಿರುದ್ಧ ಕಠಿಣ ಕ್ರಮವನ್ನು ಮಂಡಳಿ ಆರಂಭಿಸಿದೆ.

Bangalore Water Crisis: ಕುಡಿಯಲು ಯೋಗ್ಯ ನೀರಿನ ದುರ್ಬಳಕೆ, 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹಿಸಿದ ಜಲ ಮಂಡಳಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Mar 25, 2024 | 6:58 AM

ಬೆಂಗಳೂರು, ಮಾರ್ಚ್​ 25: ನಿರ್ಬಂಧ ವಿಧಿಸಿರುವ ಹೊರತಾಗಿಯೂ ಕುಡಿಯುವ ಬಳಕೆ ಹೊರತು ಅನ್ಯ ಉದ್ದೇಶಗಳಿಗೆ ಕುಡಿಯಲು ಯೋಗ್ಯ ನೀರಿನ (Drinking Water) ಬಳಕೆ, ಪೋಲು ಮಾಡಿದ ಬೆಂಗಳೂರಿನ (Bangalore) 22 ಕುಟುಂಬಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) 5,000 ರೂ. ದಂಡ ವಿಧಿಸಿರುವುದಾಗಿ ವರದಿಯಾಗಿದೆ. ಕಾರು ತೊಳೆಯಲು ಅಥವಾ ಗಿಡಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಿರುವ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ 22 ಮನೆಗಳಿಂದ ರೂ 1.1 ಲಕ್ಷ ದಂಡವನ್ನು ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ತಿಳಿಸಿದೆ.

ತಪ್ಪಿತಸ್ಥರ ವಿರುದ್ಧ ಹೆಚ್ಚಿನ ದೂರುಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಬಂದಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದಲ್ಲಿ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿರುವುದು ಬಹಿರಂಗಗೊಂಡಿದೆ. ಮಧ್ಯ, ಉತ್ತರ ಮತ್ತು ಪಶ್ಚಿಮ ವಿಭಾಗಗಳಲ್ಲಿ ನಿರ್ಬಂಧ ಕಠಿಣವಾಗಿ ಪಾಲನೆಯಾಗುತ್ತಿಲ್ಲ ಎನ್ನಲಾಗಿದೆ.

ವಾಹನಗಳನ್ನು ತೊಳೆಯುವುದು, ತೋಟಗಾರಿಕೆ, ಮನರಂಜನೆ ಅಥವಾ ರಸ್ತೆಗಳನ್ನು ಸ್ವಚ್ಛಗೊಳಿಸುವುದರ ಜೊತೆಗೆ ನಿರ್ಮಾಣ ಚಟುವಟಿಕೆಗಳಿಗೆ ಕುಡಿಯಲು ಯೋಗ್ಯ ನೀರನ್ನು ಬಳಸುವುದನ್ನು ಜಲ ಮಂಡಳಿಯು ಮಾರ್ಚ್ 7 ರಂದು ಹೊರಡಿಸಿದ್ದ ಆದೇಶದಲ್ಲಿ ನಿಷೇಧಿಸಿತ್ತು. ಶುದ್ಧೀಕರಿಸಿದ ನೀರನ್ನು ಬಳಸಲು ಬಿಲ್ಡರ್‌ಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಯ್ದೆಯ ಸೆಕ್ಷನ್ 109 ರ ಅಡಿಯಲ್ಲಿ 5,000 ರೂ. ದಂಡವನ್ನು ವಿಧಿಸಲಾಗುತ್ತಿದೆ. ಮರಳಿ ಮರಳಿ ನಿರ್ಬಂಧ ಉಲ್ಲಂಘಿಸಿದಲ್ಲಿ ದಿನಕ್ಕೆ 500 ರೂ.ನಂತೆ ದಂಡದ ಮೊತ್ತ ಹೆಚ್ಚಾಗುತ್ತಾ ಹೋಗುತ್ತದೆ.

ನೀರಿನ ದುರ್ಬಳಕೆ ಬಗ್ಗೆ ದೂರು ನೀಡಲು ಟೋಲ್​ ಫ್ರೀ ಸಂಖ್ಯೆ

ನಗರದಲ್ಲಿ ನೀರಿನ ದುರ್ಬಳಕೆಯ ಬಗ್ಗೆ ದೂರು ನೀಡಲು ಮಂಡಳಿಯು ಕಾಲ್ ಸೆಂಟರ್ (ಟೋಲ್-ಫ್ರೀ ಸಂಖ್ಯೆ 1916) ಸಹ ಸ್ಥಾಪಿಸಿದೆ. ಕೆರೆಗಳಲ್ಲಿ ನೀರು ಇಲ್ಲದಿರುವುದು ಕೂಡ ಅಂತರ್ಜಲದ ಕುಸಿತಕ್ಕೆ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟ ನಂತರ ಮಂಡಳಿಯು ಸಂಸ್ಕರಿಸಿದ ನೀರಿನಿಂದ ಕೆರೆಗಳನ್ನು ತುಂಬುವ ಕೆಲಸವನ್ನೂ ಆರಂಭಿಸಿದೆ.

ಬತ್ತಿ ಹೋದ ಕೆರೆಗಳಿಗೆ ಸಂಸ್ಕರಿಸಿದ ನೀರು

ವೃಷಭಾವತಿ ಕಣಿವೆಯ ಉದ್ದಕ್ಕೂ ಇರುವ ಒಳಚರಂಡಿ ಸಂಸ್ಕರಣಾ ಘಟಕಕ್ಕೆ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿ, ಈ ಘಟಕದಿಂದ ಸಂಸ್ಕರಿಸಿದ ನೀರನ್ನು ನಾಯಂಡಹಳ್ಳಿ ಮತ್ತು ಕೆಂಗೇರಿ ಕೆರೆಗಳನ್ನು ತುಂಬಿಸಲು ಬಳಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Water Crisis: ನೀರಿನ ಬಿಕ್ಕಟ್ಟು ಪರಿಹರಿಸಲು ಬಂದಿವೆ 4 ಆ್ಯಪ್! ಇದರಿಂದೇನು ಪ್ರಯೋಜನ? ಇಲ್ಲಿದೆ ನೋಡಿ

ಆರ್.ಆರ್.ನಗರದ ದುಬಾಸಿಪಾಳ್ಯ, ಹೊಸಕೆರೆಹಳ್ಳಿ, ಹಲಗೆವಡೇರಹಳ್ಳಿ ಸೇರಿದಂತೆ ಮೂರು ಕೆರೆಗಳಿಗೂ ಸಂಸ್ಕರಿಸಿದ ನೀರನ್ನು ಕಳುಹಿಸಲು ಜಲಮಂಡಳಿ ಮುಂದಾಗಿದೆ. ಆದರೆ, ವರ್ತೂರು ಮತ್ತು ಬೆಳ್ಳಂದೂರು ಕೆರೆಗಳನ್ನು ತುಂಬಿಸಲು ಇದೇ ಕ್ರಮ ಕೈಗೊಂಡಿಲ್ಲ. ಒಟ್ಟಾರೆಯಾಗಿ, ಬತ್ತಿ ಹೋಗಿರುವ 14 ಕೆರೆಗಳಿಗೆ ನೀರು ತುಂಬಿಸಲು ಮಂಡಳಿ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 am, Mon, 25 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ