ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್

ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ.

ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್
ಬೆಂಗಳೂರು ಜಲಮಂಡಳಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 03, 2023 | 10:54 PM

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ. ವಂಚನೆ ಮಾಡಿರುವವರು ಗುತ್ತಿಗೆ ನೌಕರರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದಕ್ಕೆ ಇವರು ವಿಫಲರಾಗಿದ್ದಾರೆ. ಈ ವೈಫಲ್ಯದಿಂದ ಜಲಮಂಡಳಿಗೆ ಆದಾಯದ ನಷ್ಟವಾಗಿದೆ. ಇನ್ನೂ ಈ ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ ಗೆಜೆಟೆಡ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜಲ ಮಂಡಳಿ ನೋಟ್ ಬ್ಯಾನ್ ಮತ್ತು ಕೋವಿಡ್ ವೇಳೆ ನಗದು ಪಾವತಿಗೆ ಅವಕಾಶ ನೀಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡು ಮಂಡಳಿಯ ಕೋಟಿ ಕೋಟಿ ಹಣ ವಂಚನೆ ಮಾಡಿದ್ದರು. ಮಂಡಳಿಯ 45 ಉಪ ವಿಭಾಗಗಳಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಮಂಡಳಿ ಹಲವು ಪೊಲೀಸ್ ಠಾಣೆಗಳಲ್ಲಿ‌ ದೂರು ನೀಡಿದ್ದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ, ಕೇಂದ್ರ ಚುನಾವಣಾಧಿಕಾರಿಗಳಿಂದ ಪೂರ್ವ ತಯಾರಿ ಪರಿವೀಕ್ಷಣೆ

ಅಧಿಕಾರಿಗಳು ಅಡಿಟ್​ನಲ್ಲಿ ಪತ್ತೆಯಾಗದಂತೆ ಹಣ ಗುಳುಂ ಮಾಡಿದ್ದರು. ಈ ಸಂಬಂಧ ಮಂಡಳಿ ಅಕ್ರಮ ಭೇದಿಸಲು 3 ತಂಡ ರಚನೆ ಮಾಡಿತ್ತು. ಈ ಮಂಡಳಿಯ ಆಂತರಿಕ ತನಿಖೆಯಲ್ಲಿ ಹಣ ದುರ್ಬಳಕೆ ಪತ್ತೆಯಾಗಿದೆ. ಈ ಹಿನ್ನೆಲೆ ಇಂಜಿನಿಯರ್, ಕಂದಾಯ ವ್ಯವಸ್ಥಾಪಕರು, ಸಹಾಯಕರ ಕಲ್ಯಾಣ ಅಧಿಕಾರಿಗಳು ಸೇರಿದಂತೆ 13 ಭ್ರಷ್ಟ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ.

ಯಾವೆಲ್ಲ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ ಗೊತ್ತಾ?

  1. ಭರತ್ ಕುಮಾರ್, ಸಹಾಯಕ
  2. ಶ್ರೀನಿವಾಸ್, ಕಾರ್ಯ ನಿರ್ವಾಹಕ ಅಭಿಯಂತರ
  3. ವಿಶ್ವನಾಥ್ ಕೆ. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  4. ಸಿ. ಸೋಮಶೇಖರ್, ಹಿರಿಯ ಸಹಾಯಕ
  5. ನಾಗೇಂದ್ರ, ಕಾರ್ಯ ನಿರ್ವಾಹಕ ಅಭಿಯಂತರ
  6. ನಾಗರಾಜ್, ಕಂದಾಯ ವ್ಯವಸ್ಥಾಪಕ
  7. ಸಚಿನ್ ಪಾಟೀಲ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  8. ರಾಮಪ್ಪ ಮಡಿವಾಳದ, ಸಹಾಯಕ
  9. ಸ್ನೇಹಾ. ವಿ, ಕಾರ್ಯ ನಿರ್ವಾಹಕ ಅಭಿಯಂತರ
  10. ಭೀಮಶಂಕರ್, ಕಂದಾಯ ವ್ಯವಸ್ಥಾಪಕ
  11. ಗೀತಾ.ಎಂ, ಹಿರಿಯ ಸಹಾಯಕಿ
  12. ಎನ್. ರುದ್ರೇಶ್, ಕಂದಾಯ ವ್ಯವಸ್ಥಾಪಕ
  13. ಯೋಗೇಶ್.ಎಸ್, ಸಹಾಯಕ ಕಲ್ಯಾಣ ಅಧಿಕಾರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:32 pm, Tue, 3 January 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ