ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ವೀಕೆಂಡ್ ಕೂಲ್ ಕೂಲ್
ರಾಜಧಾನಿ ಬೆಂಗಳೂರಲ್ಲಿ ಜೂ.20ರಂದು ವಾರಾಂತ್ಯದ ಮಜಾ ಹೆಚ್ಚಿಸುವ ತಂಪಾದ ವಾತಾವರಣ, ಮಳೆಯ ಮುನ್ಸೂಚನೆಯಿದೆ. ನೈಋತ್ಯ ಮುಂಗಾರು ಚುರುಕಾಗಿದ್ದು, ನಗರದಲ್ಲಿ ಹಗಲಿನಲ್ಲಿ ಶೇ.40, ರಾತ್ರಿಯಲ್ಲಿ ಶೇ.65ರಷ್ಟು ಮಳೆ ನಿರೀಕ್ಷಿಸಲಾಗಿದೆ. ಕರಾವಳಿಯಲ್ಲಿ ಜೂ.21ರಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ, ಗುಡುಗು ಸಹಿತ ಗಾಳಿ ಇರಲಿದೆ.

ಬೆಂಗಳೂರು, ಜೂ.20: ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾರಾಂತ್ಯದ ಮಜಾವನ್ನು ಹೆಚ್ಚಿಸುವಂತಹ ತಂಪಾದ ವಾತಾವರಣವಿರಲಿದೆ. ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ನಗರದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ಜತೆಗೆ ಇಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಅದೇ ರೀತಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 29°C ರಿಂದ 30°C (ಸಾಮಾನ್ಯಕ್ಕಿಂತ 1 ಡಿಗ್ರಿ ಕಡಿಮೆ) ಇರಲಿದೆ. 21°C ರಿಂದ 22°C (ರಾತ್ರಿಯ ವೇಳೆ ತಂಪು ಗಾಳಿ ಹೆಚ್ಚಿರಲಿದೆ). ಕನಿಷ್ಠ ತಾಪಮಾನ ಇದೆ. ಹಗಲಿನಲ್ಲಿ ಶೇ. 40 ರಷ್ಟು ಹಾಗೂ ಸಂಜೆ/ರಾತ್ರಿಯ ವೇಳೆ ಶೇ. 65 ರಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ. ಪಶ್ಚಿಮ ದಿಕ್ಕಿನಿಂದ ಗಂಟೆಗೆ ಸುಮಾರು 15 ರಿಂದ 25 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕೆಲವು ಸಂದರ್ಭಗಳಲ್ಲಿ ಗಾಳಿಯ ವೇಗ ಗಂಟೆಗೆ 40 ಕಿ.ಮೀ ತಲುಪಬಹುದು. ಆಕಾಶವು ಸಾಮಾನ್ಯವಾಗಿ ಮೋಡ ಕವಿದ ವಾತಾವರಣದಿಂದ ಕೂಡಿರಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗಬಹುದು. ಬಿಸಿಲಿನ ಬೇಗೆ ಇರುವುದಿಲ್ಲ. ಸಂಜೆಯಾಗುತ್ತಲೇ ನಗರದ ಹಲವು ಪ್ರದೇಶಗಳಲ್ಲಿ (ವಿಶೇಷವಾಗಿ ಎಂ.ಜಿ. ರಸ್ತೆ, ವೈಟ್‌ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ, ಜಯನಗರ, ಯಶವಂತಪುರ ಭಾಗಗಳಲ್ಲಿ) ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾತ್ರಿಯ ವೇಳೆಗೆ ಚಳಿ ಮತ್ತು ತಂಪಾದ ಗಾಳಿ ಹೆಚ್ಚಾಗಲಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಈ ಮೂರೂ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ನಾಳೆಯಿಂದ (ಜೂನ್ 21) ಕರಾವಳಿಯಲ್ಲಿ ‘ಭಾರೀ ಮಳೆ’ಯ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಲವಾದ ಗಾಳಿ ಹಾಗೂ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಾಪುರ ಜಿಲ್ಲೆಗಳಲ್ಲಿ ಒಣ ಹವಾಮಾನದೊಂದಿಗೆ ಕೆಲವು ಕಡೆಗಳಲ್ಲಿ ಹಗುರ ತುಂತುರು ಮಳೆಯಾಗಬಹುದು. ಜೊತೆಗೆ ಸೆಖೆಯ ವಾತಾವರಣ ಇದರಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:52 am, Sat, 20 June 26




