Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇನ್ನೂ ಕೆಲವು ದಿನ ಇರಲಿದೆ ಫೆಂಗಲ್ ಚಂಡಮಾರುತ ಪ್ರಭಾವ: ಹವಾಮಾನ ಮುನ್ಸೂಚನೆ ಇಲ್ಲಿದೆ

Bengaluru Weather: ಫೆಂಗಲ್ ಚಂಡಮಾರುತದ ಪ್ರಭಾವದಿಂದ ನವೆಂಬರ್ 30 ರಿಂದ ಡಿಸೆಂಬರ್ 5 ರವರೆಗೆ ಬೆಂಗಳೂರಿನಲ್ಲಿ ಕೆಲವೊಮ್ಮೆ ಗುಡುಗು ಸಹಿತ ಮಳೆ ಮತ್ತು ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.ಇಂದು 30 ನವೆಂಬರ್ 2024 ಮತ್ತು ಮುಂದಿನ 7 ದಿನಗಳ ಕಾಲ ಬೆಂಗಳೂರು ನಗರದ ಹವಾಮಾನ ಮುನ್ಸೂಚನೆ ಇಲ್ಲಿದೆ.

ಬೆಂಗಳೂರಿನಲ್ಲಿ ಇನ್ನೂ ಕೆಲವು ದಿನ ಇರಲಿದೆ ಫೆಂಗಲ್ ಚಂಡಮಾರುತ ಪ್ರಭಾವ: ಹವಾಮಾನ ಮುನ್ಸೂಚನೆ ಇಲ್ಲಿದೆ
ಫೆಂಗಲ್ ಚಂಡಮಾರುತದ ಚಲನೆ ಮತ್ತು ತಮಿಳುನಾಡಿನ ತಾಂಜಾವೂರಿನಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ
Follow us
Ganapathi Sharma
|

Updated on: Nov 30, 2024 | 12:44 PM

ಬೆಂಗಳೂರು, ನವೆಂಬರ್ 30: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಶನಿವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರು ನಗರದ ಕೆಲವಡೆಗಳಲ್ಲಿ ಹನಿ ಹನಿ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದೆ. ಚಂಡಮಾರುತದ ಪ್ರಭಾವ ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಶನಿವಾರ) ಕನಿಷ್ಠ ತಾಪಮಾನವು ಸುಮಾರು 18 ಡಿಗ್ರಿ ಸೆಲ್ಶಿಯಸ್ ಆಗಿರಬಹುದು, ಇದು ಸಂಜೆ ಮತ್ತಷ್ಟು ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮೋಡ ಕವಿದ ವಾತಾವರಣ ಮತ್ತು ಹನಿ ಮಳೆಯಿಂದಾಗಿ ನಗರದಲ್ಲಿ ಚಳಿಯ ವಾತಾವರಣ ಇರುತ್ತದೆ. ಮನೆಯಿಂದ ಹೊರಗೆ ಹೋಗುವಾಗ ನಿವಾಸಿಗಳು ಛತ್ರಿ ಅಥವಾ ರೈನ್‌ಕೋಟ್‌ಗಳನ್ನು ಒಯ್ಯಲು ಸಲಹೆ ನೀಡಲಾಗಿದೆ. ಮಳೆಯಿಂದಾಗಿ ಸಂಜೆ ವೇಳೆಗೆ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಮುನ್ಸೂಚನೆಗಳ ಪ್ರಕಾರ, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಲಘು ಮಳೆಯಾಗುವ ನಿರೀಕ್ಷೆಯಿದೆ. ತಾಪಮಾನವು 18 ಡಿಗ್ರಿ ಸೆಲ್ಶಿಯಸ್ ಮತ್ತು 26 ಡಿಗ್ರಿ ಸೆಲ್ಶಿಯಸ್ ನಡುವೆ ಇರಬಹುದು ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರು ಹವಾಮಾನ ಮುನ್ಸೂಚನೆ

ಡಿಸೆಂಬರ್ 1 ರಂದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಇರಲಿದೆ. ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.

Bangalore Weather Today to December 5th: Cyclone Fengal causes showers, chilly weather, See IMD predictions

ಬೆಂಗಳೂರಿನಲ್ಲಿ ಶನಿವಾರ ಮೋಡ ಕವಿದ ವಾತಾವರಣ

ಡಿಸೆಂಬರ್ 2 ರಂದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಇರಲಿದೆ. ಮೋಡ ಕವಿದ ಆಕಾಶ ಇರಲಿದ್ದು, ಹನಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ತಮಿಳುನಾಡು ಕರಾವಳಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ಹೈ ಅಲರ್ಟ್

ಡಿಸೆಂಬರ್ 3 ರಂದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ಡಿಸೆಂಬರ್ 4 ಹಾಗೂ 5ರಂದು ಕೂಡ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಇರಲಿದೆ. ಮೋಡ ಕವಿದ ವಾತಾವರಣ ಹಾಗೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಫೆಂಗಲ್ ಚಂಡಮಾರುತ ಪ್ರಭಾವ

ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಮತ್ತು ಕರ್ನಾಟಕದ ಇತರ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಮುಂದಿನ ಕೆಲವು ದಿನಗಳು ಇದರ ಪ್ರಭಾವ ಇರಲಿದ್ದು, ಮಳೆಯ ಮುನ್ಸೂಚನೆ ನೀಡಲಾಗಿದೆ. ಚಂಡಮಾರುತದ ಪರಿಣಾಮವಾಗಿ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಾರ್ವಜನಿಕ ಉದ್ಯಾನವನಗಳು ಮತ್ತು ಬೀಚ್‌ಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!