ಬೆಂಗಳೂರು, ನವೆಂಬರ್ 30: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಶನಿವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರು ನಗರದ ಕೆಲವಡೆಗಳಲ್ಲಿ ಹನಿ ಹನಿ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದೆ. ಚಂಡಮಾರುತದ ಪ್ರಭಾವ ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಶನಿವಾರ) ಕನಿಷ್ಠ ತಾಪಮಾನವು ಸುಮಾರು 18 ಡಿಗ್ರಿ ಸೆಲ್ಶಿಯಸ್ ಆಗಿರಬಹುದು, ಇದು ಸಂಜೆ ಮತ್ತಷ್ಟು ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಮೋಡ ಕವಿದ ವಾತಾವರಣ ಮತ್ತು ಹನಿ ಮಳೆಯಿಂದಾಗಿ ನಗರದಲ್ಲಿ ಚಳಿಯ ವಾತಾವರಣ ಇರುತ್ತದೆ. ಮನೆಯಿಂದ ಹೊರಗೆ ಹೋಗುವಾಗ ನಿವಾಸಿಗಳು ಛತ್ರಿ ಅಥವಾ ರೈನ್‌ಕೋಟ್‌ಗಳನ್ನು ಒಯ್ಯಲು ಸಲಹೆ ನೀಡಲಾಗಿದೆ. ಮಳೆಯಿಂದಾಗಿ ಸಂಜೆ ವೇಳೆಗೆ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಮುನ್ಸೂಚನೆಗಳ ಪ್ರಕಾರ, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಲಘು ಮಳೆಯಾಗುವ ನಿರೀಕ್ಷೆಯಿದೆ. ತಾಪಮಾನವು 18 ಡಿಗ್ರಿ ಸೆಲ್ಶಿಯಸ್ ಮತ್ತು 26 ಡಿಗ್ರಿ ಸೆಲ್ಶಿಯಸ್ ನಡುವೆ ಇರಬಹುದು ಎಂದು ನಿರೀಕ್ಷಿಸಲಾಗಿದೆ.
ಡಿಸೆಂಬರ್ 1 ರಂದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಇರಲಿದೆ. ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 2 ರಂದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಇರಲಿದೆ. ಮೋಡ ಕವಿದ ಆಕಾಶ ಇರಲಿದ್ದು, ಹನಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ತಮಿಳುನಾಡು ಕರಾವಳಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ಹೈ ಅಲರ್ಟ್
ಡಿಸೆಂಬರ್ 3 ರಂದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ಡಿಸೆಂಬರ್ 4 ಹಾಗೂ 5ರಂದು ಕೂಡ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಇರಲಿದೆ. ಮೋಡ ಕವಿದ ವಾತಾವರಣ ಹಾಗೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಮತ್ತು ಕರ್ನಾಟಕದ ಇತರ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಮುಂದಿನ ಕೆಲವು ದಿನಗಳು ಇದರ ಪ್ರಭಾವ ಇರಲಿದ್ದು, ಮಳೆಯ ಮುನ್ಸೂಚನೆ ನೀಡಲಾಗಿದೆ. ಚಂಡಮಾರುತದ ಪರಿಣಾಮವಾಗಿ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಾರ್ವಜನಿಕ ಉದ್ಯಾನವನಗಳು ಮತ್ತು ಬೀಚ್‌ಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ