AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು !

ಬೆಂಗಳೂರು ನಮ್ಮ ಮೆಟ್ರೋದ ಯೆಲ್ಲೋ ಲೈನ್‌ಗೆ ಎಂಟನೇ ಚಾಲಕರಹಿತ ಮೆಟ್ರೋ ರೈಲು ಆಗಮಿಸಿದೆ. ಕೋಲ್ಕತ್ತಾದಿಂದ ಬಂದಿರುವ ಈ ರೈಲು, ಹೆಬ್ಬಗೊಡಿ ಡಿಪೋದಲ್ಲಿ ತಾಂತ್ರಿಕ ಪರಿಶೀಲನೆಗೆ ಒಳಗಾಗಲಿದೆ. ಪ್ರಸ್ತುತ ಏಳು ರೈಲುಗಳು ಸಂಚರಿಸುತ್ತಿದ್ದು, ಹೊಸ ರೈಲು ಕಾರ್ಯಾರಂಭಿಸಿದ ನಂತರ ಯೆಲ್ಲೋ ಲೈನ್‌ನಲ್ಲಿ ಮೆಟ್ರೋ ಟ್ರಿಪ್ ನಡುವಿನ ಸಮಯ ಕಡಿಮೆಯಾಗಲಿದೆ. ಇದು ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಒದಗಿಸಲಿದೆ.

Namma Metro: ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು !
ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು !
ಕಿರಣ್​ ಸೂರ್ಯ
| Edited By: |

Updated on:Jan 19, 2026 | 2:10 PM

Share

ಬೆಂಗಳೂರು, ಜನವರಿ 19: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದ ಟಿಟಾಘರ್‌ನಿಂದ ಹೊರಟಿದ್ದ ಎಂಟನೇ ಚಾಲಕರಹಿತ ಮೆಟ್ರೋ ರೈಲು ಇಂದು ಬೆಳಗ್ಗೆ ಬೆಂಗಳೂರಿನ ಹೆಬ್ಬಗೊಡಿ ಮೆಟ್ರೋ ಡಿಪೋಗೆ ಸುರಕ್ಷಿತವಾಗಿ ಆಗಮಿಸಿದೆ. ಆರು ಕೋಚ್‌ಗಳನ್ನು ಒಳಗೊಂಡ ಈ ಮೆಟ್ರೋ ರೈಲು ಜನವರಿ 10ರಂದು ಟಿಟಾಘರ್‌ನಿಂದ ಹೊರಟಿದ್ದು, ಇದೀಗ ಯೆಲ್ಲೋ ಲೈನ್ ಕಾರ್ಯಾಚರಣೆಗೆ ಸಿದ್ಧಗೊಳ್ಳುತ್ತಿದೆ.

ನಾಳೆಯಿಂದ ಟೆಸ್ಟಿಂಗ್ ಆರಂಭ

ಸದ್ಯ ಬೆಂಗಳೂರು ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಏಳು ಮೆಟ್ರೋ ರೈಲುಗಳು ಸಂಚರಿಸುತ್ತಿವೆ. ಹೊಸದಾಗಿ ಆಗಮಿಸಿದ ಎಂಟನೇ ರೈಲಿನ ತಾಂತ್ರಿಕ ಪರಿಶೀಲನೆಗಳನ್ನು ನಾಳೆಯಿಂದ (ಜನವರಿ 20) ಆರಂಭಿಸಲಾಗುತ್ತದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಸುರಕ್ಷತಾ ಹಾಗೂ ತಾಂತ್ರಿಕ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡ ಬಳಿಕ ವಾಣಿಜ್ಯ ಸಂಚಾರಕ್ಕೆ ಅನುಮತಿ ನೀಡಲಾಗುವುದು.

16 ಚಾಲಕರಹಿತ ಮೆಟ್ರೋ ರೈಲುಗಳ ನಿರೀಕ್ಷೆ

ಆರ್.ವಿ. ರಸ್ತೆದಿಂದ ಬೊಮ್ಮಸಂದ್ರದವರೆಗೆ 19.15 ಕಿಲೋಮೀಟರ್ ವ್ಯಾಪ್ತಿಯ ಯೆಲ್ಲೋ ಲೈನ್‌ನಲ್ಲಿ ಒಟ್ಟು 16 ನಿಲ್ದಾಣಗಳಿವೆ. ಈ ಮಾರ್ಗದ ಸಮರ್ಪಕ ಕಾರ್ಯಾಚರಣೆಗೆ ಒಟ್ಟು 16 ಚಾಲಕರಹಿತ ಮೆಟ್ರೋ ರೈಲುಗಳನ್ನು ಆರ್ಡರ್ ಮಾಡಲಾಗಿದ್ದು, ಈಗಾಗಲೇ ಎಂಟು ರೈಲುಗಳು ಬೆಂಗಳೂರು ತಲುಪಿವೆ. ಉಳಿದ ಎಂಟು ರೈಲುಗಳು ಪ್ರತಿ 10ರಿಂದ 20 ದಿನಗಳಿಗೊಮ್ಮೆ ಹಂತ ಹಂತವಾಗಿ ನಗರಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ

ಪ್ರಸ್ತುತ ಯೆಲ್ಲೋ ಲೈನ್‌ನಲ್ಲಿ 10ರಿಂದ 12 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚಾರ ನಡೆಯುತ್ತಿದ್ದು, ಹೊಸ ರೈಲಿನ ಪರೀಕ್ಷೆ ಮುಗಿಸಿ ವಾಣಿಜ್ಯ ಸಂಚಾರ ಆರಂಭವಾದ ಬಳಿಕ 8ರಿಂದ 10 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುವ ಸಾಧ್ಯತೆ ಇದೆ. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:36 pm, Mon, 19 January 26

Follow Us
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​