AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಸ್ಟಮರ್ ಕೇರ್​ನಲ್ಲಿ ಪರಿಚಯವಾದ ಯುವತಿಗೆ ಮತ್ತು ಬರಿಸಿ ಯುವಕನಿಂದ ನೀಚ ಕೃತ್ಯ

ಖಾಸಗಿ ಬ್ಯಾಂಕ್​ವೊಂದರಲ್ಲಿ ಕಸ್ಟಮರ್ ಕೇರ್ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ಕ್ರೆಡಿಟ್ ಕಾರ್ಡ್ ಬೇಕು ಎಂದು ಬಂದ ಯುವಕನ ಜೊತೆ ಸ್ನೇಹ ಬೆಳೆದಿತ್ತು. ಕಸ್ಟಮರ್ ಕೇರ್ ಸ್ನೇಹವನ್ನೇ ದುರುಪಯೋಗ ಪಡಿಸಿಕೊಂಡ ಆಂಧ್ರ ಪ್ರದೇಶದ ಕಡಪ ಮೂಲಕ ಆ ಯುವಕ ಮಾಡಬಾರದ್ದನ್ನು ಮಾಡಿ ಈಗ ನಾಪತ್ತೆಯಾಗಿದ್ದಾನೆ.

ಬೆಂಗಳೂರು: ಕಸ್ಟಮರ್ ಕೇರ್​ನಲ್ಲಿ ಪರಿಚಯವಾದ ಯುವತಿಗೆ ಮತ್ತು ಬರಿಸಿ ಯುವಕನಿಂದ ನೀಚ ಕೃತ್ಯ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 09, 2024 | 7:33 AM

Share

ಬೆಂಗಳೂರು, ಡಿಸೆಂಬರ್ 9: ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರ ಪ್ರದೇಶದ ಕಡಪ ಮೂಲದ ಯುವಕ ಇತ್ತೀಚೆಗೆ ಕ್ರೆಡಿಟ್ ಕಾರ್ಡ್ ಮಾಡಿಸಲು ಬ್ಯಾಂಕ್​ವೊಂದಕ್ಕೆ ತೆರಳಿದ್ದ. ಈ ವೇಳೆ ಕಸ್ಟಮರ್ ಕೇರ್ ಆಗಿದ್ದ ಯುವತಿ ಜೊತೆ ಸ್ನೇಹ ಬೆಳೆಸಿದ ಆಸಾಮಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಾಪತ್ತೆಯಾಗಿದ್ದಾನೆ.

ಕಸ್ಟಮರ್ ಕೇರ್ ಯುವತಿ ಮೇಲೆ ದೌರ್ಜನ್ಯ ಎಸಗಿದ ಆಸಾಮಿ ಕಡಪ ಮೂಲದ ಲಕ್ಷ್ಮೀ ರೆಡ್ಡಿ ಎಂಬುದು ಗೊತ್ತಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯ ವಿವರ

ಲಕ್ಷ್ಮೀ ರೆಡ್ಡಿ 2019 ರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಬೇಕು ಎಂದು ಖಾಸಗಿ ಬ್ಯಾಂಕ್​ಗೆ ತೆರಳಿದ್ದ. ಈ ವೇಳೆ ಬ್ಯಾಂಕ್​ನಲ್ಲಿ ಕಸ್ಟಮರ್ ಕೇರ್ ಆಗಿದ್ದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಇಬ್ಬರ ನಡುವೆ ಸ್ನೇಹ ಮೂಡಿದೆ. ಇದಾಗಿ ಕೆಲವು ಸಮಯದ ಬಳಿಕ, ತನ್ನ ಅಕ್ಕನ ಹುಟ್ಟುಹಬ್ಬ ಇದೆ ಎಂದು ಯುವತಿಯನ್ನು ಆರ್​ಟಿ ನಗರದ ಹೊಟೇಲ್​ವೊಂದಕ್ಕೆ ಕರೆದಿದ್ದನಂತೆ. ಈ ವೇಳೆ ಜ್ಯೂಸ್​ನಲ್ಲಿ ಮತ್ತು ಬರುವ ಡ್ರಗ್ಸ್ ಹಾಕಿ ಯುವತಿಗೆ ಮತ್ತು ಬರಿಸಿದ್ದಾನೆ. ಅಲ್ಲದೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ವಿಡಿಯೋ ಮಾಡಿಟ್ಟು ಬೆದರಿಕೆ ಹಾಕಲು ಮುಂದಾಗಿದ್ದ ಎಂದು ಆರೋಪಿಸಲಾಗಿದೆ.

ಸದ್ಯ ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಆರೋಪಿ ಲಕ್ಷ್ಮೀ ರೆಡ್ಡಿ ವಿಡಿಯೋ ತೋರಿಸಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಜಾತಿ ಹೆಸರಿನಲ್ಲಿ ನಿಂದಿಸಿ ಅವಮಾನ ಎಂದೂ ಆರೋಪಿಸಿರುವ ಯುವತಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ನಾದಿನಿ ಮೇಲೆ ಕಣ್ಣಾಕಿ ಹೆಣವಾದ ಬಾವ: ಮಂಡ್ಯದಲ್ಲೊಂದು ಭಯಾನಕ ಕ್ರೈಂ ಸ್ಟೋರಿ

ಸದ್ಯ ಸಂತ್ರಸ್ತೆ ನೀಡಿದ ದೂರಿನ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಪೊಲೀಸರು ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಲಕ್ಷ್ಮೀ ರೆಡ್ಡಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾನೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ