ಕೊನೆಗೂ ವಿಧಾನಸೌಧ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್
ಕರ್ನಾಟಕ ರಾಜ್ಯದ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ, 23 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 25 ಅಡಿ ಎತ್ತರದ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಜನವರಿ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಪ್ರತಿಮೆಯ ನಿರ್ಮಾಣ ಕಾರ್ಯದಲ್ಲಿ ವಿಳಂಬ ಉಂಟಾಗಿತ್ತು.
ಬೆಂಗಳೂರು, ಜನವರಿ 23: ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿ ದೇವಿ ಕಂಚಿನ ಪ್ರತಿಮೆ (Bhuvaneshwari Devi statue) ಸಿದ್ದವಾಗಿದ್ದು, ಇದೀಗ ಜನವರಿ 27 ರಂದು ಲೋಕಾರ್ಪಣೆಗೊಳ್ಳಲಿದೆ. ಸಾಕಷ್ಟು ವಿಳಂಬದ ಬಳಿಕ ಸೋಮವಾರದಂದು ಸಿಎಂ ಸಿದ್ದರಾಮಯ್ಯ ಭುವನೇಶ್ವರಿ ದೇವಿ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಈ ಕುರಿಯತಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದ್ದು, ನಾಡದೇವಿ ಭುವನೇಶ್ವರಿದೇವಿಯ ಕಂಚಿನ ಪ್ರತಿಮೆಯನ್ನು ಜನವರಿ 27ರಂದು ಸಂಜೆ 4.00ಗಂಟೆಗೆ ವಿಧಾನಸೌಧ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ತಾವು ಹಾಗೂ ಕೆಎಸ್ ನರಸಿಂಹಸ್ವಾಮಿ ಟ್ರಸ್ಟ್ನ ಎಲ್ಲಾ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಇದನ್ನೂ ಓದಿ: ಸಿಎಂ ಆಸೆ ಈಡೇರಲಿಲ್ಲ: ಭುವನೇಶ್ವರಿ ಪ್ರತಿಮೆ ನಿರ್ಮಾಣ ವಿಳಂಬಕ್ಕೆ ಕಾರಣವೇನು ಗೊತ್ತಾ?
24ರ ಜನವರಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಯ ಸಂಕೇತವಾದ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಕರ್ನಾಟಕ ಎಂಬ ಹೆಸರು ನಾಮಕರಣವಾಗಿ 50 ವರ್ಷವಾದ ಸಂದರ್ಭದಲ್ಲಿ ಕನ್ನಡದ ಪ್ರತೀಕದ ಗುರುತು ಸರ್ಕಾರದ ಆವರಣದಲ್ಲಿರಬೇಕೆಂಬ ಉದ್ದೇಶದಿಂದ ಈ ನಿರ್ಧಾರ ಕೈ ಕೈಗೊಳ್ಳಾಗಿತ್ತು.
ಇದನ್ನೂ ಓದಿ: ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ: 3ನೇ ಹಂತದ ಮೆಟ್ರೋ ಮಾರ್ಗ ಕೈಗೆತ್ತಿಕೊಳ್ಳಲು ಸಂಪುಟ ಒಪ್ಪಿಗೆ
ಬರೋಬ್ಬರಿ 23 ಕೋಟಿ ರೂ. ವೆಚ್ಚದಲ್ಲಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿ 25 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಇತ್ತೀಚೆಗೆ ಗ್ರೀನ್ ಸಿಗ್ನಲ್ ಕೂಡ ನೀಡಿತ್ತು. ಅಂದುಕೊಂಡಂತೆ ಆಗಿದ್ದರೆ ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವದಂದು ನಾಡದೇವತೆ ಭುವನೇಶ್ವರಿ ದೇವಿ ಪ್ರತಿಮೆ ಅನಾವರಣಗೊಳ್ಳಬೇಕಿತ್ತು. ಆದರೆ ಪ್ರತಿಮೆ ನಿರ್ಮಾಣ ಕಾರ್ಯ ವಿಳಂಬವಾಗಿದ್ದರಿಂದ ಅದು ಸಾಧ್ಯವಾಗಿರಲಿಲ್ಲ. ಆದಷ್ಟು ಬೇಗನೆ ನಾಡದೇವತೆ ಭುವನೇಶ್ವರಿ ದೇವಿ ಪ್ರತಿಮೆ ಅನಾವರಣಗೊಳ್ಳಲಿ ಎಂದು ಕೂಗು ಕೂಡ ಕೇಳಿಬಂದಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.