51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಸ್ಕ್ವೇರ್ ಮಾಲ್​ಗೆ ಮತ್ತೆ ಬೀಗ ಹಾಕಲಾಗಿದೆ. 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್​ನ ಪ್ರಮುಖ ದ್ವಾರಕ್ಕೆ ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್​ರಿಂದ ಲಾಕ್​ ಮಾಡಲಾಗಿದೆ

51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ
ಮಂತ್ರಿ ಮಾಲ್ (ಸಂಗ್ರಹ ಚಿತ್ರ)
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on:Dec 27, 2023 | 8:00 PM

ಬೆಂಗಳೂರು, ಡಿಸೆಂಬರ್​ 27: ನಗರದ ಪ್ರತಿಷ್ಠಿತ ಮಂತ್ರಿ ಸ್ಕ್ವೇರ್ ಮಾಲ್ (Mantri Square Mall) ​ಗೆ ಮತ್ತೆ ಬೀಗ ಹಾಕಲಾಗಿದೆ. 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್​ನ ಪ್ರಮುಖ ದ್ವಾರಕ್ಕೆ ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್​ರಿಂದ ಲಾಕ್​ ಮಾಡಲಾಗಿದೆ. 2019-20ರವರೆಗಿನ ತೆರಿಗೆ ಬಾಕಿಯಿದ್ದ ಹಿನ್ನೆಲೆ ಬೀಗ ಹಾಕಲಾಗಿದೆ.

2020ರ ಆಗಸ್ಟ್​​​ನಲ್ಲೇ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರು ಕೂಡ ಮಾಲ್​ನ ಆಡಳಿತ ಮಂಡಳಿ ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ.

ಇದನ್ನೂ ಓದಿ: Mantri Square Mall: ತೆರಿಗೆ ಪಾವತಿಸದ ಮಂತ್ರಿ ಮಾಲ್​ಗೆ ಶಾಕ್; ಕಚೇರಿ ವಸ್ತುಗಳನ್ನು ಮುಟ್ಟುಗೋಲು ಹಾಕಿ ಬೀಗ ಹಾಕಲಿದೆ ಬಿಬಿಎಂಪಿ

ಈ ಹಿಂದೆ ಮಂತ್ರಿ ಮಾಲ್ ಸುಮಾರು 42,63,40,874 ರೂ. ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಆ ವೇಳೆ ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು.

ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಸ್ಕ್ವೇರ್ ಮಾಲ್​​ಗೆ ಬಿಬಿಎಂಪಿ ಬೀಗ ಜಡಿಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಬೀಗ ಹಾಕಲಾಗಿತ್ತು. ಈ ಹಿಂದೆ 2021ರಲ್ಲಿಯೂ ಬಿಬಿಎಂಪಿ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಬಳಿಕ ಮಂತ್ರಿ ಮಾಲ್ ಬೀಗ ಮುದ್ರೆ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ ನೀಡಿತ್ತು.

ಇದನ್ನೂ ಓದಿ: ತಡೆಯಾಜ್ಞೆ ತೋರಿಸಿದ ಮಂತ್ರಿಮಾಲ್; ಚರಾಸ್ತಿಗಳನ್ನು ವಾಪಸ್ ಕಚೇರಿಯಲ್ಲಿ ಇಡುತ್ತಿರುವ ಬಿಬಿಎಂಪಿ

ಮಂತ್ರಿ ಮಾಲ್, ಬಿಬಿಎಂಪಿ ಎರಡೂ ನಿಯಮಗಳನ್ನು ಉಲ್ಲಂಘಿಸಿವೆ. ನಿಗದಿತ ಅವಧಿಯಲ್ಲಿ ಮಂತ್ರಿ ಮಾಲ್ ತೆರಿಗೆ ಪಾವತಿಸಿಲ್ಲ. ಸೀಲ್ ಮಾಡಿ ಬಿಬಿಎಂಪಿಯೂ ನಿಯಮಾವಳಿ ಉಲ್ಲಂಘಿಸಿದೆ ಎಂದು ಹೈಕೋರ್ಟ್ ಹೇಳಿತ್ತು. ತೆರಿಗೆ ಬಾಕಿಯ ಸ್ವಲ್ಪ ಭಾಗವನ್ನು ತಕ್ಷಣ ಪಾವತಿಸುವಂತೆ ಹೈಕೋರ್ಟ್​ನ ಏಕಸದಸ್ಯ ಪೀಠ 2021ರ ಡಿಸೆಂಬರ್​​​ನಲ್ಲಿ ಸೂಚನೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:53 pm, Wed, 27 December 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ