ಟ್ಯೂಷನ್​ಗೆ ತೆರಳಿದ್ದ 12 ವರ್ಷದ ಬಾಲಕ ನಾಪತ್ತೆ! ವೈಟ್​ಫೀಲ್ಡ್ ಠಾಣೆಯಲ್ಲಿ ಕೇಸ್ ದಾಖಲು

ಬೆಂಗಳೂರಿನ ಗುಂಜೂರಿನ ಡೆನ್ ಅಕಾಡೆಮಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಭಾನುವಾರ ಮಧ್ಯಾಹ್ನ 12.15ರ ಸುಮಾರಿಗೆ ನಾಪತ್ತೆ ಆಗಿರುವಂತಹ ಘಟನೆ ನಡೆದಿದೆ. ಟ್ಯೂಷನ್​ಗೆ ತೆರಳಿದ್ದ 12 ವರ್ಷದ ಬಾಲಕ ಪರಿನವ್ ನಿಗೂಢವಾಗಿ ನಾಪತ್ತೆ ಆಗಿದ್ದಾನೆ. ಸದ್ಯ ಬಾಲಕ ನಾಪತ್ತೆ ಬಗ್ಗೆ ವೈಟ್​ಫೀಲ್ಡ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಟ್ಯೂಷನ್​ಗೆ ತೆರಳಿದ್ದ 12 ವರ್ಷದ ಬಾಲಕ ನಾಪತ್ತೆ! ವೈಟ್​ಫೀಲ್ಡ್ ಠಾಣೆಯಲ್ಲಿ ಕೇಸ್ ದಾಖಲು
ನಾಪತ್ತೆ ಆದ ಬಾಲಕ ಪರಿನವ್
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:Jan 22, 2024 | 8:56 PM

ಬೆಂಗಳೂರು, ಜನವರಿ 22: ಟ್ಯೂಷನ್​ಗೆ ತೆರಳಿದ್ದ 12 ವರ್ಷದ ಬಾಲಕ ನಿಗೂಢವಾಗಿ ನಾಪತ್ತೆ (missing) ಆಗಿರುವಂತಹ ಘಟನೆ ನಗದರಲ್ಲಿ ನಡೆದಿದೆ. ವಿಜಯನಗರದ ಸುಖೇಶ್, ನಿವೇದಿತಾ ದಂಪತಿ ಪುತ್ರ ಪರಿನವ್​ ನಾಪತ್ತೆ ಆದ ಬಾಲಕ. ಗುಂಜೂರಿನ ಡೆನ್ ಅಕಾಡೆಮಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪರಿನವ್, ಭಾನುವಾರ ಮಧ್ಯಾಹ್ನ 12.15ರ ಸುಮಾರಿಗೆ ನಾಪತ್ತೆ ಆಗಿದ್ದಾನೆ. ವೈಟ್​ಫೀಲ್ಡ್​ನ ಅಲೆನ್ ಟೂಷನ್ ಸೆಂಟರ್​ಗೆ ತಂದೆ ಡ್ರಾಪ್ ಮಾಡಿದ್ದಾರೆ. ಮಧ್ಯಾಹ್ನ ಕರೆತರಲು ಹೋಗುವುದು ತಡವಾಗಿದ್ದರಿಂದ ನಾಪತ್ತೆ ಆಗಿದ್ದಾನೆ. ಟ್ಯೂಷನ್ ಸೆಂಟರ್​ನಿಂದ ಮಾರತ್ತಹಳ್ಳಿವರೆಗೆ ಬಾಲಕ ನಡೆದುಬಂದಿದ್ದು, ನಂತರ ಬಿಎಂಟಿಸಿ ಬಸ್ ಹತ್ತಿರುವ ಸಿಸಿಕ್ಯಾಮರಾ ದೃಶ್ಯ ಲಭ್ಯವಾಗಿದೆ.

ಆನಂತರ ಬಾಲಕ ಪರಿನವ್ ಎಲ್ಲಿ ಹೋದನೆಂದು ಈವರೆಗೂ ಪತ್ತೆಯಾಗಿಲ್ಲ. ಬಾಲಕ ನಾಪತ್ತೆ ಬಗ್ಗೆ ವೈಟ್​ಫೀಲ್ಡ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ನಾಪತ್ತೆಯಾದ ಪರಿನವ್​ಗಾಗಿ ವೈಟ್​ಫೀಲ್ಡ್ ಠಾಣೆ ಪೊಲೀಸರು ಶೋಧ ಆರಂಭಿಸಿದ್ದಾರೆ.

ದನ ಮೇಯಿಸಲು ಹೋಗಿದ್ದ ವ್ಯಕ್ತಿ ನಾಪತ್ತೆ

ಆನೇಕಲ್: ದನ ಮೇಯಿಸಲು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದು, ಚಿರತೆ ದಾಳಿ ನಡೆಸಿರುವ ಶಂಕೆ‌ ವ್ಯಕ್ತವಾಗಿತ್ತು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕುಲುಮೆಪಾಳ್ಯದ ವಾಸಿ ಪುಟ್ಟಸ್ವಾಮಿ (54) ಕಾಣೆಯಾಗಿದ್ದ ವ್ಯಕ್ತಿ. ಬನ್ನೇರುಘಟ್ಟದ ಕಾಡಂಚಿನ ಭಾಗಕ್ಕೆ ಎಂದಿನಂತೆ ಕಳೆದ ಬುಧವಾರವೂ ಸಹ ಪುಟ್ಟಸ್ವಾಮಿ ದನ ಮೇಯಿಸಲು ಹೋಗಿದ್ದರು. ಆದರೆ ಸಂಜೆಯಾಗುತ್ತಿದ್ದಂತೆ ದನಗಳು ಮನೆಗೆ ವಾಪಸ್‌ ಆಗಿದ್ದವು ಆದರೆ ಪುಟ್ಟಸ್ವಾಮಿ ಬಂದಿರಲಿಲ್ಲ.

ಇದನ್ನೂ ಓದಿ: ಬಿಎಂಟಿಸಿ ವೋಲ್ವೋ ಬಸ್​ಗಳ ಯುಗ ಅಂತ್ಯ; ಇನ್ಮುಂದೆ ಏರ್‌ಪೋರ್ಟ್‌ಗೆ ಸಂಚರಿಸಲಿದೆ ಎಲೆಕ್ಟಿಕ್ ಎಸಿ ಬಸ್

ಇದರಿಂದ ಆತಂಕಗೊಂಡ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಎಲ್ಲಿಯೂ ಪತ್ತೆಯಾಗದೆ ಇದ್ದಾಗ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರು. ಚಿರತೆ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿತ್ತು. ಕಾಡಂಚಿನ ಭಾಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರಿಂದ ಕಳೆದ ಎರಡು ದಿನಗಳಿಂದ ಶೋಧ ಮಾಡಲಾಗಿತ್ತು.

ಸುಡಾನ್​ಗೆ ಹೋದ ಶಿವಮೊಗ್ಗದ ವ್ಯಕ್ತಿ ಮಿಸ್ಸಿಂಗ್

ಶಿವಮೊಗ್ಗ: ಜಿಲ್ಲೆಯಿಂದ ಸುಡಾನ್​ಗೆಂದು ಸಣ್ಣ ಪುಟ್ಟ ವ್ಯಾಪಾರಕ್ಕೆಂದು ತೆರಳಿದ್ದ ವ್ಯಕ್ತಿ 20 ದಿನಗಳಿಂದ ಮಿಸ್ಸಿಂಗ್​ ಆಗಿದ್ದಂತಹ ಘಟನೆ ಇತ್ತೀಚೆಗೆ ಕಂಡುಬಂದಿತ್ತು. ಇತ್ತ ಶಿವಮೊಗ್ಗದಲ್ಲಿರುವ ಪತ್ನಿ ಮತ್ತು ಮಕ್ಕಳು ಸಂಬಂಧಿಕರು ಕಣ್ಣೀರು ಹಾಕಿದ್ದರು.

ಇದನ್ನೂ ಓದಿ: ಡಾ.ಸಿ.ಎನ್.ಮಂಜುನಾಥ್ ಅವಧಿ ಮುಕ್ತಾಯ, ಯಾರಾಗಲಿದ್ದಾರೆ ಮುಂದಿನ ಜಯದೇವ ಆಸ್ಪತ್ರೆ ನಿರ್ದೇಶಕ?

ಸುಡಾನ್ ದೇಶಕ್ಕೆ ಹೋಗಿರುವ ಭಾರತೀಯ ಪ್ರಜೆಗೆ ಏನಾಗಿದೆ ಎನ್ನುವ ಆತಂಕ ಕುಟುಂಬಸ್ಥರನ್ನು ಕಾಡಿತ್ತು. ಭದ್ರಾವತಿ ತಾಲೂಕಿನ ಹಕ್ಕಿಪಿಕ್ಕಿ ಕ್ಯಾಂಪ್ ಗ್ರಾಮದ ಗೌತಮ ನಗರದ ನಿವಾಸಿ ಸುಹೇಲ್ ನಾಪತ್ತೆ ಆಗಿದ್ದ ವ್ಯಕ್ತಿ. ಈ ನಡುವೆ ಸುಹೇಲ್ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎನ್ನುವ ಒಂದು ಫೋಟೋ ಅಲ್ಲಿಯವರು ಪತ್ನಿಗೆ ಕಳುಹಿಸಿದ್ದರು. ಅವರನ್ನು ಪತ್ತೆ ಮಾಡಲು ರಾಜ್ಯ ಮತ್ತು ಕೇಂದ್ರ ಸರಕಾರವು ಸಹಾಯ ಮಾಡಬೇಕೆಂದು ಒತ್ತಾಯಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:44 pm, Mon, 22 January 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್