AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ: ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತ

ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಮೆಟ್ರೋ ಹಳಿ ಮೇಲೆ ಜಿಗಿದಿರುವಂತಹ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್​ನಲ್ಲಿ ನಡೆದಿದೆ. ಘಟನೆ ಹಿನ್ನೆಲೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನರು ಪರದಾಡಿದ್ದಾರೆ.

ಮೆಟ್ರೋ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ: ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತ
ನಮ್ಮ ಮೆಟ್ರೋ
Kiran HV
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 05, 2024 | 10:01 PM

Share

ಬೆಂಗಳೂರು, ಜನವರಿ 05: ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಮೆಟ್ರೋ (Namma Metro) ಹಳಿ ಮೇಲೆ ಜಿಗಿದಿರುವಂತಹ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್​ನಲ್ಲಿ ನಡೆದಿದೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಮೆಟ್ರೋ ಸಿಬ್ಬಂದಿಗಳು ಆ್ಯಂಬುಲೆನ್ಸ್​ನಲ್ಲಿ ಕರೆದೊಯ್ದು ಯಶವಂತಪುರದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಹಿನ್ನೆಲೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನರು ಪರದಾಡಿದ್ದಾರೆ.

ಸದ್ಯ ಮೆಜಸ್ಟಿಕ್​ನಿಂದ ಯಶವಂತಪುರವರೆಗೆ ಮಾತ್ರ ಮೆಟ್ರೋ ರೈಲು ಸಂಚಾರ ಮಾಡುತ್ತಿವೆ. ಯಶವಂತಪುರದಿಂದ ನಾಗಸಂದ್ರವರೆಗೆ ಮೆಟ್ರೋ ರೈಲು ಸಂಚಾರ ಮಾಡುತ್ತಿಲ್ಲ. ಅರ್ಧ ಗಂಟೆಯಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ ಎಂದು ಟಿವಿ9ಗೆ ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ರೈಲಿನಲ್ಲಿ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ: ಕಿಡಿಗೇಡಿ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಮೆಟ್ರೋ ಹಳಿಗಳ ಪಕ್ಕದಲ್ಲಿ 750 ವೋಲ್ಟ್ ಹೆವಿ ಪವರ್ ಲೈನ್ ಹಾದು ಹೋಗಿರುತ್ತದೆ. ಹಾಗಾಗಿ ಮತ್ತೆ ಪವರ್ ಜನರೇಟ್ ಮಾಡಲು ಅರ್ಧ ಗಂಟೆ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೊ ಹಳಿಗೆ ಧುಮುಕಿದ ಯುವಕನ ಹೆಸರು ಶ್ಯಾರೊನ್ (23). ಕೇರಳ ಮೂಲದವನು. ಸ್ನೇಹಿತನ ಜೊತೆ ಜಾಲಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ. ಮೆಜೆಸ್ಟಿಕ್​ಗೆ ಹೋಗಲು ಟಿಕೆಟ್ ಸಹ ಪಡೆದುಕೊಂಡಿದ್ದ. ಮೆಟ್ರೊ ಟ್ರೈನ್ ಬಂದಾಗ ಏಕಾಏಕಿ ಹಳಿಗೆ ಶ್ಯಾರೊನ್ ಧುಮುಕಿದ್ದು, ಈ ವೇಳೆ ಮೆಟ್ರೋ ಟ್ರೈನ್ ಡಿಕ್ಕಿ ಹೊಡೆದಿದೆ.

ಅಬ್ಬಿಗೆರೆ ಬಳಿ ಐಟಿಐ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕಂಪನಿಯವರೇ ರೂಂ ಸಹ ಮಾಡಿಕೊಟ್ಟಿದ್ದರು. ಇಂದು ಸಂಜೆ ಸ್ನೇಹಿತನ ಜೊತೆ ಬಂದು ಉದ್ದೇಶಪೂರ್ವಕವಾಗಿ ಹಳಿಗೆ ಧುಮುಕಿದ್ದಾನೆ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದ್ದು, ಸಪ್ತಗಿರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೀಣ್ಯ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru Metro: ಏರ್​ಪೋರ್ಟ್ ಆಯ್ತು, ಬೆಂಗಳೂರು ಮೆಟ್ರೋ ಕಂಡು ಚಕಿತಗೊಂಡ ವಿಶ್ವಖ್ಯಾತ ಹೂಡಿಕೆದಾರ ಮಾರ್ಕ್ ಮೋಬಿಯಸ್

ಪ್ಲಾಟ್‌ಫಾರ್ಮ್ ಕೊನೆಯಲ್ಲಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಬರುವ ರೈಲಿನ ಮುಂದೆ ಸುಮಾರು 07.12 ಗಂಟೆಗೆ ಜಿಗಿದಿದ್ದಾರೆ. ಘಟನೆಯ ಸಮಯದಲ್ಲಿ ನಾಲ್ಕು ರೈಲುಗಳನ್ನು ಇತರೆ ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಸ್ಥಗಿತಗೊಂಡ ರೈಲುಗಳಿಂದ ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಹೊರಗಿಳಿಸಲಾಗಿದೆ.

ಮೇಲಿನ ಅವಧಿಯಲ್ಲಿ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಗಿದ್ದು, ರಾತ್ರಿ 8 .00 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:12 pm, Fri, 5 January 24

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ