AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎ ಖಾತಾ ವರ್ಗಾವಣೆಗೆ ಆನ್​ಲೈನ್​​ನಲ್ಲಿ ಹಣ ಪಾವತಿಸುವ ಮುನ್ನ ಎಚ್ಚರ: ಎ ಖಾತಾ ಮಾಡಿಸುವವರು ಇದನ್ನ ಓದಲೇಬೇಕು

ಬೆಂಗಳೂರಿನಲ್ಲಿ ಬಿ-ಖಾತಾ ಆಸ್ತಿಗಳನ್ನು ಎ-ಖಾತಾಗೆ ಪರಿವರ್ತಿಸುವ ಆನ್‌ಲೈನ್ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿವೆ ಎನ್ನಲಾಗುತ್ತಿದೆ. ಲಕ್ಷಾಂತರ ರೂಪಾಯಿ ಶುಲ್ಕ ಪಾವತಿಸಿದ್ದರೂ, ವೆಬ್‌ಸೈಟ್‌ನಲ್ಲಿ ಮಾತ್ರ ಪೇಮೆಂಟ್ ಪೆಂಡಿಂಗ್ ಎಂದು ತೋರಿಸುತ್ತಿದೆ. ಇತ್ತ ಬ್ಯಾಂಕ್​ ಖಾತೆಯಿಂದ ಹಣ ಕಟ್​​ ಆಗಿದೆ. ಇನ್ನು ಜಿಬಿಎಯಿಂದ ರಸೀದಿ ಕೂಡ ಸಿಕ್ಕಿಲ್ಲ. ಇದರಿಂದ ಆಸ್ತಿ ಮಾಲೀಕರು ಆತಂಕಗೊಂಡಿದ್ದಾರೆ. ಇನ್ನು ಈ ಬಗ್ಗೆ ವ್ಯಕ್ತಿಯೊಬ್ಬರು ತಮಗಾದ ಸಮಸ್ಯೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಎ ಖಾತಾ ವರ್ಗಾವಣೆಗೆ ಆನ್​ಲೈನ್​​ನಲ್ಲಿ ಹಣ ಪಾವತಿಸುವ ಮುನ್ನ ಎಚ್ಚರ: ಎ ಖಾತಾ ಮಾಡಿಸುವವರು ಇದನ್ನ ಓದಲೇಬೇಕು
ಜಿಬಿಎ, ಪೇಮೆಂಟ್ ಪೆಂಡಿಂಗ್
TV9 Web
| Edited By: |

Updated on:Feb 18, 2026 | 10:42 PM

Share

ಬೆಂಗಳೂರು, ಫೆಬ್ರವರಿ 18: ಸಾರ್ವಜನಿಕರು ಪಾಲಿಕೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇತ್ತೀಚೆಗೆ ಬಿ ಖಾತಾ (B Khata) ಹೊಂದಿರುವ ಆಸ್ತಿ ಮಾಲೀಕರು ಎ ಖಾತಾಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಆನ್‌ಲೈನ್‌ ವ್ಯವಸ್ಥೆ ಕಲ್ಪಿಸಿದೆ. ಆದರೆ ಇದೇ ಆನ್​​​ಲೈನ್​​ ವ್ಯವಸ್ಥೆಯಲ್ಲಿ ಸಮಸ್ಯೆಗಳು ಉಂಟಾಗಿವೆ. ಆಸ್ತಿ ಮಾಲೀಕರು ಖಾತಾ ವರ್ಗಾವಣೆಗೆ ಲಕ್ಷಾಂತರ ರೂ ಹಣ ಪಾವತಿಸಿದ ಬಳಿಕವೂ ವೆಬ್​​ಸೈಟ್​ನಲ್ಲಿ ಮಾತ್ರ ಪೆಂಡಿಂಗ್​ ತೋರಿಸುತ್ತಿದೆ. ಹೀಗಾಗಿ ಆಸ್ತಿ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರಿಗೆ ಜಿಬಿಎ ದೋಖಾ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಬಗ್ಗೆ ಟಿವಿ9 ಡಿಜಿಟಲ್​ ಕನ್ನಡಗೆ ಬೆಂಗಳೂರಿನ ಆಸ್ತಿ ಮಾಲೀಕರಾದ ಎಮ್. ಶ್ರೀನಿವಾಸ ಎಂಬುವವರು ತಮಗಾದ ಸಮಸ್ಯೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಗರದ ವಾರ್ಡ್ 161ರ ವ್ಯಾಪ್ತಿಗೆ ಬರುವ ಹೊಸಕೆರೆಹಳ್ಳಿಯಲ್ಲಿ ವಾಸವಾಗಿರುವ ಎಮ್. ಶ್ರೀನಿವಾಸ ಅವರು, ಅಲ್ಲಿ ಇರುವಂತಹ ಬಿ ಖಾತಾ ಸ್ವತ್ತಿನ ಮನೆಗೆ ಎ ಖಾತಾಗೆ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು.

ಆಸ್ತಿ ಮಾಲೀಕರಾದ ಎಮ್. ಶ್ರೀನಿವಾಸ ಟ್ವೀಟ್​​

ಈ ಸ್ವತ್ತು ಅವರ ಪತ್ನಿ ಸ್ವಾತಿ ಎನ್.ಕೆ. ಹೆಸರಿನಲ್ಲಿದ್ದು, ಕಳೆದ ಶುಕ್ರವಾರ ಅಂದರೆ ಫೆಬ್ರವರಿ 12ರಂದು ಒಟ್ಟು ಮೊತ್ತ ಒಂದು ಲಕ್ಷದ ಅರವತ್ತೇಳು ಸಾವಿರದ ಏಳು ನೂರಾ ಎಪ್ಪತ್ತೊಂದು ರೂಪಾಯಿ ಆನ್​​ಲೈನ್ ಮೂಲಕ ಪಾವತಿ ಮಾಡಿದ್ದಾರೆ. ಆದರೆ ಏಳು ದಿನಗಳ ನಂತರವೂ ಆ ಪಾವತಿಯು ಪೆಂಡಿಂಗ್ ಎಂಬ ಸ್ಟೇಟಸ್​ನಲ್ಲಿಯೇ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎಮ್. ಶ್ರೀನಿವಾಸ ಅವರಿಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

ಇದನ್ನೂ ಓದಿ: ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ!

ಇನ್ನು ಲಕ್ಷಾಂತರ ರೂ ಹಣ ಮಾತ್ರ ಖಾತೆಯಿಂದ ಡೆಬಿಟ್ ಆಗಿದೆ. ಆದರೆ ಆ ಮೊತ್ತಕ್ಕೆ ಜಿಬಿಎ ಕಡೆಯಿಂದ ಯಾವುದೇ ರಸೀದಿ ಕೂಡ ಇವರಿಗೆ ತಲುಪಿಲ್ಲ. ಇಷ್ಟು ದೊಡ್ಡ ಮೊತ್ತ ಹೀಗೆ ಒಂದು ವಾರ ಕಳೆದರೂ ಯಾವ ಸ್ಥಿತಿಯಲ್ಲಿದೆ ಎಂಬುದು ಗೊತ್ತಾಗದೇ ಪರದಾಡಿದ್ದಾರೆ. ಇನ್ನು ಈ ಸಮಸ್ಯೆಯನ್ನು ಯಾರು ಬಗೆಹರಿಸುತ್ತಾರೆ ಎಂಬುವುದು ತಿಳಿಯದೇ ಕಂಗಾಲಾಗಿದ್ದಾರೆ.

ಇದನ್ನೂ ಓದಿ: BBMP Khata Services: ಎಲ್ಲ ಬಿ ಖಾತಾದಾರರಿಗೆ ಸಿಗಲಿದೆ ಎ ಖಾತಾ ಮಾನ್ಯತೆ: ಆಸ್ತಿ ಮಾಲೀಕರಿಗೆ ಸಂಪುಟ ಭರ್ಜರಿ ಗುಡ್ ನ್ಯೂಸ್

ಅವರ ವಾರ್ಡ್ ವ್ಯಾಪ್ತಿಯ ಎಆರ್​ಒ ಹಿಡಿದು, ಜಿಬಿಎ ಕೇಂದ್ರ ಕಚೇರಿ ತನಕ ಹೋದರೂ ಯಾವುದೇ ಪ್ರಯೋಜನವಾಗಿಲ್ಲ. ಪಾವತಿ ಮಾಡಿರುವ ಮೊತ್ತದ ಬಗ್ಗೆ ಆತಂಕಗೊಂಡಿದ್ದು, ದಯವಿಟ್ಟು ಸಮಸ್ಯೆಗೆ ಪರಿಹಾರ ತಿಳಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:38 pm, Wed, 18 February 26

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ