ಬೆಂಗಳೂರು ಬಂದ್: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ಮೆಟ್ರೋ ಓಡಾಟ ಹೆಚ್ಚಳ; 5 ನಿಮಿಷಕ್ಕೊಂದು ಟ್ರೈನ್
ಮೆಟ್ರೋದಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ ಜನದಟ್ಟಣೆಗೆ ಅನುಸಾರ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಿದೆ. ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ.
ಬೆಂಗಳೂರು: ನಗರದಲ್ಲಿ ಇಂದು (ಸೆ.11) ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದೆ. ಇದರಿಂದ ರಾಜಧಾನಿಯಲ್ಲಿ ಖಾಸಗಿ ಬಸ್, ಆಟೋ, ಓಲಾ, ಊಬರ್ ಸಂಚಾರ ಸ್ಥಗಿತವಾಗಿವೆ. ಇದರಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಪರ್ಯಾಯ ಮಾರ್ಗ ಕಂಡುಕೊಂಡಿದ್ದು, ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಓಡಾಟ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ (BMRCL) ಜನದಟ್ಟಣೆಗೆ ಅನುಸಾರ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಿದೆ. ಈ ಹಿಂದೆ ಪೀಕ್ ಹವರ್ಸ್ನಲ್ಲಿ ಮಾತ್ರ ಐದು ನಿಮಿಷಕ್ಕೊಂದು ಮೆಟ್ರೋ ಓಡಾಡುತ್ತಿದ್ದವು. ಇಂದು ಇಂದು ನಾನ್ ಪೀಕ್ ಅವರ್ಸ್ನಲ್ಲೂ ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ.
ಇನ್ನು ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನಗರದಲ್ಲಿ 500 ಶೆಡ್ಯೂಲ್, 4 ಸಾವಿರ ಹೆಚ್ಚುವರಿ ಬಸ್ ಟ್ರಿಪ್ಗೆ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್ನಿಂದ ನಗರದ ವಿವಿಧೆಡೆ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರ ಮಾಡಲಿವೆ. ಮೆಜೆಸ್ಟಿಕ್ನಿಂದ ವಿಮಾನ ನಿಲ್ದಾಣ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:14 am, Mon, 11 September 23