ಬೆಂಗಳೂರು ಬಂದ್​​: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ಮೆಟ್ರೋ ಓಡಾಟ ಹೆಚ್ಚಳ; 5 ನಿಮಿಷಕ್ಕೊಂದು ಟ್ರೈನ್

| Updated By: ವಿವೇಕ ಬಿರಾದಾರ

Updated on: Sep 11, 2023 | 9:22 AM

ಮೆಟ್ರೋದಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್​ ಜನದಟ್ಟಣೆಗೆ ಅನುಸಾರ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಿದೆ. ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಬೆಂಗಳೂರು ಬಂದ್​​: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ಮೆಟ್ರೋ ಓಡಾಟ ಹೆಚ್ಚಳ; 5 ನಿಮಿಷಕ್ಕೊಂದು ಟ್ರೈನ್
ನಮ್ಮ ಮೆಟ್ರೋ
Follow us on

ಬೆಂಗಳೂರು: ನಗರದಲ್ಲಿ ಇಂದು (ಸೆ.11) ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದೆ. ಇದರಿಂದ ರಾಜಧಾನಿಯಲ್ಲಿ ಖಾಸಗಿ ಬಸ್​, ಆಟೋ, ಓಲಾ, ಊಬರ್​ ಸಂಚಾರ ಸ್ಥಗಿತವಾಗಿವೆ. ಇದರಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಪರ್ಯಾಯ ಮಾರ್ಗ ಕಂಡುಕೊಂಡಿದ್ದು, ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಓಡಾಟ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್​ (BMRCL) ಜನದಟ್ಟಣೆಗೆ ಅನುಸಾರ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಿದೆ. ಈ ಹಿಂದೆ ಪೀಕ್ ಹವರ್ಸ್​​ನಲ್ಲಿ ಮಾತ್ರ ಐದು ನಿಮಿಷಕ್ಕೊಂದು ಮೆಟ್ರೋ ಓಡಾಡುತ್ತಿದ್ದವು. ಇಂದು ಇಂದು ನಾನ್ ಪೀಕ್ ಅವರ್ಸ್​​ನಲ್ಲೂ ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಇನ್ನು ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನಗರದಲ್ಲಿ 500 ಶೆಡ್ಯೂಲ್​​, 4 ಸಾವಿರ ಹೆಚ್ಚುವರಿ ಬಸ್​ ಟ್ರಿಪ್​ಗೆ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್​ನಿಂದ ನಗರದ ವಿವಿಧೆಡೆ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರ ಮಾಡಲಿವೆ. ಮೆಜೆಸ್ಟಿಕ್​​​ನಿಂದ ವಿಮಾನ ನಿಲ್ದಾಣ,  ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Mon, 11 September 23