ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ಏರೋಸ್ಪೇಸ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಕಾಲೇಜಿನ ನಾಲ್ಕನೇ ವರ್ಷದ ಏರೋಸ್ಪೇಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿಯ ಆತ್ಮಹತ್ಯೆ ಘಟನೆಯಿಂದ ಆತಂಕ ಮೂಡಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಬೆಂಗಳೂರು, ಜನವರಿ 18: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ (Student) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ನಡೆದಿದೆ. ಆಕರ್ಷ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. 4ನೇ ವರ್ಷದ ಏರೋಸ್ಪೇಸ್ ಓದುತ್ತಿದ್ದರು. ಘಟನಾ ಸ್ಥಳಕ್ಕೆ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕುಡಿಯಬೇಡವೆಂದು ಬುದ್ಧಿವಾದ ಹೇಳಿದ್ದಕ್ಕೆ ಮಗನಿಂದಲೇ ತಂದೆ ಕೊಲೆ
ಕುಡಿಯಬೇಡವೆಂದು ಬುದ್ಧಿವಾದ ಹೇಳಿದ್ದಕ್ಕೆ ಮಗನಿಂದಲೇ ತಂದೆಯನ್ನು ಕೊಲೆ ಮಾಡಿರುವಂತಹ ಘಟನೆ ಬೆಂಗಳೂರಿನ ರಾಜಾಜಿನಗರ 4ನೇ ಬ್ಲಾಕ್ನ 7ನೇ ಮುಖ್ಯರಸ್ತೆಯಲ್ಲಿ ಕೃತ್ಯವೆಸಗಲಾಗಿದೆ. ಜನವರಿ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮಚಂದ್ರ(59) ತಲೆಗೆ ರಾಡ್ನಿಂದ ಹೊಡೆದು ಪುತ್ರ ರಘು ಹತ್ಯೆಗೈದಿದ್ದಾರೆ.
ಇದನ್ನೂ ಓದಿ: ಸುಂದರಿಯ ಬಲೆಗೆ ಬಿದ್ದ 57ರ ವ್ಯಕ್ತಿ: ಪೊಲೀಸರ ಸೋಗಿನಲ್ಲಿ ಹನಿಟ್ರ್ಯಾಪ್, ಪ್ರಮುಖ ಆರೋಪಿ ಸೇರಿ ಗ್ಯಾಂಗ್ ಅರೆಸ್ಟ್
ಲಾರಿ ಚಾಲಕನಾಗಿದ್ದ ರಾಮಚಂದ್ರಗೆ ನಿತ್ಯ ಕಿರುಕುಳ ನೀಡುತ್ತಿದ್ದ ಪುತ್ರ, ಕೆಲಸಕ್ಕೆ ಹೋಗದಿದ್ದರೂ ಮದ್ಯ ಸೇವಿಸಲು ಹಣ ನೀಡುವಂತೆ ಕಿರುಕುಳ ನೀಡಿದ್ದ. ಜನವರಿ 10ರಂದು ರಾತ್ರಿ 8 ಗಂಟೆ ಸುಮಾರಿಗೆ ಕುಡಿದು ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ಬುದ್ಧಿವಾದ ಹೇಳಿದ್ದಕ್ಕೆ ಸಿಟ್ಟಿಗೆದ್ದು ರಾಡ್ನಿಂದ ತಂದೆ ತಲೆಗೆ ಹೊಡೆದಿದ್ದಾನೆ.
ರಘು ಹಲ್ಲೆಯಿಂದ ಕುಸಿದುಬಿದ್ದು ರಾಮಚಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ರಾಮಚಂದ್ರರನ್ನು ಕಳೆದುಕೊಂಡು ಮನೋರೋಗಿ ಪತ್ನಿ ಅನಾಥವಾಗಿದ್ದಾರೆ. ಇತ್ತ ಕೊಲೆಗೈದಿದ್ದ ರಘು ನನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಕೇಸ್ ದಾಖಲಿಸಿ ರಾಜಾಜಿನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟ್ರ್ಯಾಕ್ಟರ್ ಡಿಕ್ಕಿ: ಕಾರಿನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವು
ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾರಂದೂರು ಬಳಿ ನಡೆದಿದೆ. ಕೃತಿ(21) ಮೃತ ವೈದ್ಯಕೀಯ ವಿದ್ಯಾರ್ಥಿನಿ. ನಾಲ್ವರು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: ಮೈಸೂರು: ಎಟಿಎಂ ಮಷಿನ್ಗೆ ಹಣ ತುಂಬದೆ ಲಕ್ಷಾಂತರ ರೂ ವಂಚನೆ, ಆಡಿಟ್ ವೇಳೆ ಬಯಲು
ಶಿವಮೊಗ್ಗದ ಖಾಸಗಿ ಕಾಲೇಜಿನ ಅಂತಿಮ ವರ್ಷದ MBBS ವಿದ್ಯಾರ್ಥಿನಿ ಆಗಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದ ನಿವಾಸಿ. ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.