ಬೆಂಗಳೂರು: ಇಂದು ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿನ JNCASR ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆವಿಷ್ಕಾರ ಮತ್ತು ಅಭಿವೃದ್ಧಿ ಕೇಂದ್ರಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಭೂಮಿ ಪೂಜೆಯ ಬಳಿಕ ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದಾರೆ.
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್ (JNCASR) ತನ್ನ ಸಾಧನೆಗಳಿಂದ ವಿಶ್ವದ ಗಮನ ಸೆಳೆದಿದೆ. ವಿಭಿನ್ನ ವೈಜ್ಞಾನಿಕ ಸಂಶೋಧನೆಗಳಿಂದ ಈ ಸಂಸ್ಥೆ 300 ಪೇಟೆಂಟ್‌ಗಳನ್ನು ತನ್ನದಾಗಿಸಿಕೊಂಡಿದೆ. ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಆ ನಿಟ್ಟಿನಲ್ಲಿ ಈ ಸಂಸ್ಥೆ ಉತ್ತಮ ಸೇವೆ ಸಲ್ಲಿಸುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು JNCASR ಸಂಸ್ಥೆಯನ್ನು ಹೊಗಳಿದ್ದಾರೆ.
ಬೆಂಗಳೂರು ಕೆರೆಗಳ ಊರು, ಆದರೆ ಕೆರೆಗಳು ಮರೆಯಾಗಿವೆ. ಕೆರೆಗಳನ್ನು ಪುನಶ್ಚೇತನ ಮಾಡುವ ಮೂಲಕ ಸಂರಕ್ಷಿಸಬೇಕು. ಜನರ ನಿರ್ಲಕ್ಷ್ಯದಿಂದ ಬೆಂಗಳೂರಿನ ಕೆರೆಗಳು ಮರೆಯಾಗಿವೆ. ಸಿಎಂ ಬಸವರಾಜ ಬೊಮ್ಮಾಯಿ ಡೈನಾಮಿಕ್ ಆಗಿದ್ದಾರೆ. ಕೆರೆ ಸಂರಕ್ಷಣೆಗೆ ಸಕಾಲದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ತಾರೆ. ಸಿಎಂ ಸಕಾಲದಲ್ಲಿ ನಿರ್ಧಾರ ಕೈಗೊಳ್ಳುವ ವಿಶ್ವಾಸ ಇದೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹೇಳಿದ್ರು.
ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು(Venkaiah Naidu) ಆಗಮನಿಸಿದ್ದು ದೇವನಹಳ್ಳಿ ಬಳಿಯ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ತಾವರ ಚಂದ್ ಗೆಹ್ಲೋಟ್(Thawar Chand Gehlot), ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಹಾರ ಹಾಕಿ, ಪುಸ್ತಕ ನೀಡಿ ಸ್ವಾಗತಿಸಿ ಬರ ಮಾಡಿಕೊಂಡ್ರು. ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ , ಸಂಸದರಾದ ಪಿಸಿ ಮೋಹನ್ ಸೇರಿದಂತೆ ಕೆಲ ಸಚಿವರು, ಅಧಿಕಾರಿಗಳು ಕೂಡ ಭಾಗಿಯಾಗಿದ್ದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರ ಕಾರ್ಯಕ್ರಮ ಪಟ್ಟಿ
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 6 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 16- ಜಕ್ಕೂರಿನ ಜವಹರಲಾಲ್ ನೆಹರು ಅಡ್ವಾನ್ಸ್ಡ್ ಸೈಂಟಿಫಿಕ್ ಸೆಂಟರ್ ರಿಸರ್ಚ್ ಕಾಲೇಜು ಕಾರ್ಯಕ್ರಮದಲ್ಲಿ ಭಾಗಿ
ಆಗಸ್ಟ್ 18-ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ನಡೆಯುವ ಎಫ್ಕೆಸಿಸಿ ಕಾರ್ಯಕ್ರಮದಲ್ಲಿ ಭಾಗಿ
ಆಗಸ್ಟ್ 20-ತುಂಗಭದ್ರಾ ಡ್ಯಾಂ ವೀಕ್ಷಣೆ
ಆಗಸ್ಟ್ 21- ಹಂಪಿಯಲ್ಲಿ ವಿಶ್ವ ಪರಂಪರೆಯ ತಾಣಗಳ ವೀಕ್ಷಣೆ
ಆಗಸ್ಟ್ 22- ಹುಬ್ಬಳ್ಳಿಯಿಂದ ವಾಪಸ್ ದೆಹಲಿಗೆ ತೆರಳಲಿದ್ದಾರೆ.
ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಾರ ಹಾಕಿ, ಪುಸ್ತಕ ನೀಡಿ ಸಿಎಂ ಸ್ವಾಗತ
Published On - 2:15 pm, Mon, 16 August 21