ಜಯನಗರ: ಬೀದಿಬದಿ ಅಂಗಡಿಗಳ ತೆರವು: ಬಿಬಿಎಂಪಿ ವಿರುದ್ಧ ವ್ಯಾಪಾರಸ್ಥರ ಆಕ್ರೋಶ

Jayanagar: ಮತ್ತೆ ಬೆಂಗಳೂರಿನ ಶಾಪಿಂಗ್ ಹಾಟ್​ಸ್ಪಾಟ್​ಗಳಲ್ಲಿ ಜೆಸಿಬಿ ಸದ್ದು ಮಾಡಿದ್ದು, ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳ ತೆರವು ಮಾಡಲಾಗಿದೆ. ಫುಟ್​​ಪಾತ್​​ನಲ್ಲಿದ್ದ ಅಕ್ರಮ ಶೆಡ್​, ಬಟ್ಟೆ ಅಂಡಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರವುಗೊಳಿಸಿದೆ. ಅಂಗಡಿಗಳ ತೆರವು ಕಾರ್ಯಕ್ಕೆ ಬಿಬಿಎಂಪಿ ಅಧಿಕಾರಿಗಳ ವಿರುದ್ದ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಯನಗರ: ಬೀದಿಬದಿ ಅಂಗಡಿಗಳ ತೆರವು: ಬಿಬಿಎಂಪಿ ವಿರುದ್ಧ ವ್ಯಾಪಾರಸ್ಥರ ಆಕ್ರೋಶ
ಬೀದಿ ಬದಿ ವ್ಯಾಪಾರಿಗಳ ತೆರವು
Follow us
ಗಂಗಾಧರ​ ಬ. ಸಾಬೋಜಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 09, 2023 | 3:11 PM

ಬೆಂಗಳೂರು, ನವೆಂಬರ್​​​​​ 07: ಮತ್ತೆ ಬೆಂಗಳೂರಿನ ಶಾಪಿಂಗ್ ಹಾಟ್​ಸ್ಪಾಟ್​ಗಳಲ್ಲಿ ಜೆಸಿಬಿ ಸದ್ದು ಮಾಡಿದ್ದು, ಜಯನಗರದ (Jayanagar) ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳ ತೆರವು ಮಾಡಲಾಗಿದೆ. ಫುಟ್​​ಪಾತ್​​ನಲ್ಲಿದ್ದ ಅಕ್ರಮ ಶೆಡ್​, ಬಟ್ಟೆ ಅಂಡಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತೆರವುಗೊಳಿಸಿದೆ. ಬಿಬಿಎಂಪಿ ಮಾರ್ಷಲ್‌ಗಳ ತಂಡ ಸ್ಥಳಕ್ಕೆ ಆಗಮಿಸಿ, ಜೆಸಿಬಿ‌ ಮೂಲಕ ಅಂಗಡಿಗಳನ್ನ ಕೆಡವಲಾಗಿದೆ. ಆ ಮೂಲಕ ಪಾದಚಾರಿಗಳ ಮಾರ್ಗ ಸುಗಮಗೊಳಿಸಲಾಗಿದೆ. ಅಂಗಡಿಗಳ ತೆರವಿನಿಂದ ಬೀದಿಬದಿ ವ್ಯಾಪಾರಿಗಳು ಅತಂತ್ರಸ್ಥಿತಿಯಲ್ಲಿದ್ದಾರೆ.

ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ಅಂಗಡಿಗಳ ತೆರವು ಕಾರ್ಯಕ್ಕೆ ಬಿಬಿಎಂಪಿ ಅಧಿಕಾರಿಗಳ ವಿರುದ್ದ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ವ್ಯಾಪಾರಿ ಒಬ್ಬರು, ನಾನೊಬ್ಬ ಅಂಗವಿಕಲ. ಗಂಧದ ಕಟ್ಟಿ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದೆ. ಆದರೆ ಇವತ್ತು ನನ್ನ ಅಂಗಡಿಯನ್ನ ತೆರವು ಮಾಡಿದ್ದಾರೆ. ಮುಂದೆ ನನ್ನ ಜೀವನಕ್ಕೆ ಏನು ಮಾಡಲಿ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಆಸ್ತಿ ತೆರಿಗೆ ಕಟ್ಟುವಂತೆ ಮೊಬೈಲ್​ಗೆ ಸಂದೇಶ: ಇದು ಸೈಬರ್ ಕ್ರೈಂ ಅಲ್ಲ ಎಂದು ಸ್ಪಷ್ಟಪಡಿಸಿದ ಬಿಬಿಎಂಪಿ

ಉಸ್ತುವಾರಿ ಅಧಿಕಾರಿ ಸೋಮಶೇಖರ್​ ಮಾಧ್ಯಮಗಳೊಂದಿಗೆ ಮಾತನಾಡಿ, ಸುಮಾರು 200 ಅನಧಿಕೃತ ಮಳಿಗೆಗಳನ್ನು ತೆಗೆದುಹಾಕಲಾಗಿದೆ. ಈ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿ ಫುಟ್ ಪಾತ್ ತೆರವು ಮಾಡಬೇಕು ಎಂದು ಆರು ತಿಂಗಳ ಹಿಂದೆ ಹೇಳಲಾಗಿತ್ತು. ಬಳಿಕ ಸುಮಾರು ಮೂರು ತಿಂಗಳ ಹಿಂದೆ ಮತ್ತೆ ಎಚ್ಚರಿಕೆ ನೀಡಿಲಾಗಿತ್ತು.

ಇದನ್ನೂ ಓದಿ: ಜಯನಗರ ಶಾಪಿಂಗ್​ ಕಾಂಪ್ಲೆಕ್ಸ್ ಬಳಿ ಫುಟ್‌ಪಾತ್‌ ವ್ಯಾಪಾರ ಅಂಗಡಿಮುಂಗಟ್ಟು ತೆರವುಗೊಳಿಸಲಿರುವ ಬಿಬಿಎಂಪಿ, ಏನಿದೆ ಸದ್ಯದ ಚಿತ್ರಣ

ನವೆಂಬರ್ 4 ರಂದು, ನಾವು ಈ ಪ್ರದೇಶದಲ್ಲಿ ತೆರೆದ ಮೈಕ್ ಬಳಸಿ, ಅಕ್ರಮ ಮಳಿಗೆಗಳನ್ನು ತೆರವುಗೊಳಿಸುವುದಾಗಿ ನಾವು ಹೇಳಿದ್ದೇವು. ಆ ಹಿನ್ನೆಲೆ ಇಂದು ನಾವು ಫುಟ್‌ಪಾತ್‌ಗಳಲ್ಲಿನ ಅಕ್ರಮ ಅಂಗಡಿಗಳನ್ನು ನೆಲಸಮಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

ಇಲ್ಲಿನ ವ್ಯಾಪಾರಿಗಳಿಗೆ ಇನ್ನು ಯಾವುದೇ ಪರ್ಯಾಯ ಜಾಗಗಳನ್ನು ನೀಡಲಾಗಿಲ್ಲ ಎಂದು ಆರೋಪವಾಗಿದೆ. ಆದಾಗ್ಯೂ ಪೊಲೀಸರ ನೆರವಿನೊಂದಿಗೆ ಸಂಕೀರ್ಣದ ಸುತ್ತಲಿನ ಎಲ್ಲ ಅತಿಕ್ರಮಣ ಫುಟ್‌ಪಾತ್‌ ಅಂಗಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಹೆಚ್ಚಿನ ಮಾರಾಟಗಾರರು ಹತ್ತಾರು ವರ್ಷಗಳಿಂದ ಇಲ್ಲಿ ಅಂಗಡಿಗಳನ್ನು ಹಾಕಿಕೊಂಡಿದ್ದಾರೆ. ಅವುಗಳನ್ನು ಈಗ ತೆರವುಗೊಳಿಸುವುದು ಅವರ ಜೀವನೋಪಾಯವನ್ನು ಕಸಿದುಕೊಳ್ಳುವಂತಾಗುತ್ತದೆ ಎಮದು ಕೆಲವರು ಅಭಿಪ್ರಾಯಪಟ್ಟಿದ್ದಾರೆ ಎಂದು ಟೈಮ್ಸ್​ ಆಫ್​ ಇಂಡಿಯಾ ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Tue, 7 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್