ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್

| Updated By: ಗಂಗಾಧರ​ ಬ. ಸಾಬೋಜಿ

Updated on: Dec 29, 2024 | 4:44 PM

ಮಡಕಶಿರದಲ್ಲಿ ಕೆಎಸ್ಆರ್​ಟಿಸಿ ಬಸ್ ಒಂದು ಸರಣಿ ಅಪಘಾತಕ್ಕೀಡಾಗಿದೆ. ಚಾಲಕನಿಗೆ ಫಿಟ್ಸ್ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಒಬ್ಬ ರೈತ ತೀವ್ರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಗಳು ಬೆಚ್ಚಿಬೀಳಿಸುವಂತಿವೆ. ಕೆಎಸ್​ಆರ್​ಟಿಸಿ ಇನ್ನೂ ಯಾವುದೇ ಪರಿಹಾರ ನೀಡಿಲ್ಲ ಎನ್ನಲಾಗುತ್ತಿದೆ.

ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್
ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್
Follow us on

ಬೆಂಗಳೂರು, ಡಿಸೆಂಬರ್​ 29: ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್​​ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ (accident) ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಡಕಶಿರದ ಮಾರುತಿ‌ನಗರದ ಬಳಿ ನಡೆದಿದೆ. ಬಸ್​​ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಸ್ಪಲ್ಪ ಯಾಮಾರಿದ್ದರೆ ಹತ್ತಾರು ಅಮಾಯಕರ ಪ್ರಾಣ ಹೋಗುತ್ತಿತ್ತು. ಘಟನೆಯಲ್ಲಿ ಓರ್ವ ರೈತನಿಗೆ ತೀವ್ರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನೆಲಮಂಗಲ ಡಿಪೋ, ಚಿತ್ರದುರ್ಗ ವಿಭಾಗಕ್ಕೆ ಸೇರಿದ KA-57F4409 ನಂಬರ್​ ಕೆಎಸ್​ಆರ್​ಟಿಸಿ ಬಸ್ ಪಾವಗಡ ಟು ಬೆಂಗಳೂರಿಗೆ ಸಂಚರಿಸುತ್ತಿತ್ತು. ಚಾಲಕ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದನಂತೆ. ಅಪಘಾತದ ವೇಳೆ ಚಾಲಕನಿಗೆ ಫಿಟ್ಸ್ ಬಂದಿತ್ತಂತೆ. ಈ ವೇಳೆ ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು, ಒಂದು ಗೂಡ್ಸ್ ಆಟೋ ಮತ್ತು ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ದೇವನಹಳ್ಳಿ: ಗೆಳೆಯನ ಹತ್ಯೆ ಮಾಡಿ ದೃಶ್ಯಂ ಸಿನಿಮಾ ರೀತಿ ಕಥೆ ಕಟ್ಟಿದ ವ್ಯಕ್ತಿ, ತನಿಖೆಯಲ್ಲಿ ಬಯಲಾಯ್ತು ಭಯಾನಕ ಸಂಗತಿ

ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರೈತ ನಾರಾಯಣ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಕೆಎಸ್​ಆರ್​ಟಿಸಿಯಿಂದ ಒಬ್ಬರೇ ಒಬ್ಬರು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿಲ್ಲ. ಒಂದು ರೂ ಕೂಡ ಪರಿಹಾರ ನೀಡಿಲ್ಲವಂತೆ. ಸದ್ಯ  ಮಡಕಶಿರ ಪೋಲಿಸರು ಎಫ್ಐಆರ್ ದಾಖಲಿಸಿ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಮೈನಿಂಗ್ ಲಾರಿ ಡಿಕ್ಕಿ: ಬೈಕ್​ನಲ್ಲಿದ್ದ ಇಬ್ಬರು ಸಾವು

ಮೈನಿಂಗ್ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಸವಾರರಿಬ್ಬರು ಸಾವನ್ನಪ್ಪಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಶೀಲಾನಗರ ಬಳಿ ನಡೆದಿದೆ. ಆದಿಕೇಶ್ವರ(20), ಸಂತೋಷ್​​(22) ಮೃತರು. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಒಂದೇ ಬೈಕ್‌ನಲ್ಲಿ ನಾಲ್ವರು ಯುವಕರು ತೆರಳುತ್ತಿದ್ದರು. ಸಂಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Sun, 29 December 24