Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಬತ್ತು ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಹಲವು ದಾಖಲೆಗಳು ಪತ್ತೆ

ಆದಾಯ, ಜಾತಿ ಪ್ರಮಾಣ ಪತ್ರ ಪಡೆಯಲು ಲಂಚಕ್ಕೆ ಬೇಡಿಕೆ ಆರೋಪ ಕೇಳಿಬಂದಿದೆ. ಕಂದಾಯ ಇಲಾಖೆ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಿಂದ ಬಂದ ದೂರು ಆಧರಿಸಿ  ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ನೇತೃತ್ವದಲ್ಲಿ 9 ತಂಡದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದ್ದರು. ದಾಳಿ ವೇಳೆ ಹಲವು ದಾಖಲೆಗಳು ಪತ್ತೆಯಾಗಿವೆ.

ಒಂಬತ್ತು ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಹಲವು ದಾಖಲೆಗಳು ಪತ್ತೆ
ಲೋಕಾಯುಕ್ತ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Jan 20, 2024 | 7:28 PM

ಬೆಂಗಳೂರು, ಜನವರಿ 20: ಆದಾಯ, ಜಾತಿ ಪ್ರಮಾಣ ಪತ್ರ ಪಡೆಯಲು ಲಂಚಕ್ಕೆ ಬೇಡಿಕೆ ಆರೋಪ ಕೇಳಿಬಂದಿದೆ. ಕಂದಾಯ ಇಲಾಖೆ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಿಂದ ಬಂದ ದೂರು ಆಧರಿಸಿ  ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ನೇತೃತ್ವದಲ್ಲಿ 9 ತಂಡದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ (Lokayukta raid) ಮಾಡಿದ್ದರು. ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಸೇರಿದಂತೆ ನಾಲ್ಕು ತಾಲೂಕು ಕಚೇರಿಗಳು ಮತ್ತು ಬೆಂಗಳೂರು ನಗರ ಜಿಲ್ಲೆಯ 5 ತಾಲೂಕು ಕಚೇರಿಗಳಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಕಛೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಲೋಕಾಯುಕ್ತ ನ್ಯಾಯಾಧೀಶ ಕೆ ಎನ್ ಪಣೀಂದ್ರರಿಂದ ಸಾರ್ವಜನಿಕರ ಸಮಸ್ಯೆ ಆಲಿಸಿದ್ದಾರೆ. ದಾಳಿ ವಿಚಾರ ತಿಳಿದು ಜನರು ಸಮಸ್ಯೆ ಪತ್ರಗಳನ್ನ ತಂದಿದ್ದರು.

ಇದನ್ನೂ ಓದಿ: ಜನವರಿ 23 ರಂದು 545 ಪಿಎಸ್​ಐ ಮರು ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ದೊಡ್ಡಬಳ್ಳಾಪುರ ತಾಲೂಕು ಕಚೇರಿ ಆವರಣದಲ್ಲಿ ಜನರ ಸಮಸ್ಯೆಯನ್ನು ನ್ಯಾಯಾಧೀಶರು ಆಲಿಸಿದ್ದಾರೆ. ಬೆಂಗಳೂರು ‌ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮೂಲಕ ಸ್ಥಳದಲ್ಲೇ ಸಮಸ್ಯೆ ಬಗೆ ಹರಿಸುವಂತೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳ ವಿರುದ್ದ ದಾಖಲೆ‌ ಸಮೇತ ನ್ಯಾಯಾಧೀಶರಿಗೆ ಜನರು ದೂರು ನೀಡಿದ್ದಾರೆ.

ತಹಶೀಲ್ದಾರ್​ ಕಚೇರಿಗಳ ವಿರುದ್ಧ 600 ದೂರುಗಳು: ಲೋಕಾಯುಕ್ತ ನ್ಯಾ.ಬಿ.ಎಸ್​.ಪಾಟೀಲ್

ಬೆಂಗಳೂರಿನಲ್ಲಿ ಲೋಕಾಯುಕ್ತ ನ್ಯಾ.ಬಿ.ಎಸ್​.ಪಾಟೀಲ್ ಹೇಳಿಕೆ ನೀಡಿದ್ದು, ತಹಶೀಲ್ದಾರ್​ ಕಚೇರಿಗಳ ವಿರುದ್ಧ 600 ದೂರುಗಳು ಬಂದಿವೆ. ಸುಮೊಟೋ ಕೇಸ್​ಗಳಿವೆ, ಅನಿಯಮಿತ ಕೇಸ್​ ದಾಖಲಾಗಿವೆ. ಏಜೆಂಟ್​​ ಹಾವಳಿ, ಹಣ ನೀಡದೆ ಕೆಲಸ ಆಗಲ್ಲ ಎಂಬ ದೂರು ಇದೆ. ಬೆಂಗಳೂರುನಗರ ಜಿಲ್ಲೆಯ 9 ತಹಶೀಲ್ದಾರ್​ ಕಚೇರಿಗಳಲ್ಲಿ ಪರಿಶೀಲನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಚಿಮುಲ್ ನೇಮಕಾತಿ ಹಗರಣಕ್ಕೆ ಮಂಗಳೂರು ವಿವಿ ಲಿಂಕ್! ಪರೀಕ್ಷಾಂಗ ಕುಲಸಚಿವರ ವಿಚಾರಣೆ

ತಹಶೀಲ್ದಾರ್​​ಗಳ ಮುಂದೆಯೇ ಫೈಲ್ ಪರಿಶೀಲನೆ ಮಾಡಿದ್ದೇವೆ. ಜನರಿಗೆ ಸೂಕ್ತ ನ್ಯಾಯ ಸಿಗಬೇಕು. ದೂರುಗಳು ನೀಡಿದರೆ ಕೆಲಸ ಆಗಲ್ಲ ಅಂತಾ ಜನ ಹೆದರುತ್ತಾರೆ. ಸಾರ್ವಜನಿಕರು ಈ ಬಗ್ಗೆ ಭಯಪಡುವುದು ಬೇಡ. ಲೋಕಾಯುಕ್ತ ಕಾಯ್ದೆಯಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

ದಾಳಿ ವೇಳೆ ಹಲವು ದಾಖಲೆಗಳು ಪತ್ತೆ

ಲೋಕಾ ದಾಳಿ ವೇಳೆ ಸಹಿ ಮಾಡದೆ ಬಾಕಿ ಇರುವ ದಾಖಲೆಗಳು, ವಿಲೇವಾರಿ ಮಾಡದೆ ಇಟ್ಟಿರುವ ಫೈಲ್​​ಗಳು, ಫೋರ್ಜರಿ ಫೈಲ್, ಹಲವು ವರ್ಷದಿಂದ ಮೂವ್​​​ ಆಗದೇ ಇರುವ ಫೈಲ್​ಗಳು​ ಪತ್ತೆ ಆಗಿವೆ. ದಕ್ಷಿಣ, ಉತ್ತರ ತಹಶೀಲ್ದಾರ್​​ ಕಚೇರಿಗೆ ಜನ ಅಲೆದು ಸುಸ್ತಾಗಿದ್ದಾರೆ. ಸಹಿ ಮಾಡದೆ ಜನರನ್ನು ಕಚೇರಿಗೆ ಅಲೆಸುತ್ತಿರುವುದು ಬೆಳಕಿಗೆ ಬಂದಿದ್ದು, ಹಣ ನೀಡದಿದ್ದರೆ ಸಹಿ ಹಾಕಲ್ಲ ಎಂದು ಜನ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು