ಬೆಂಗಳೂರು, ಜನವರಿ 17: ಕಬ್ಬನ್ ಪಾರ್ಕ್, ಎಂ.ಜಿ.ರೋಡ್ ನಡುವೆ ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆ ಜ.19ರಂದು ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಜ.19ರ ಬೆಳಗ್ಗೆ 7 ಗಂಟೆಯಿಂದ 10ರವರೆಗೆ ಮೆಟ್ರೋ ಸೇವೆ ಇರಲ್ಲ. ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣ ನಡುವೆ 3 ಗಂಟೆ ಮೆಟ್ರೋ ಸೇವೆ ಇರಲ್ಲ ಎಂದು ತಿಳಿಸಲಾಗಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ದಿನಂಕ 19 ರಂದು ಅಂದರೆ ಭಾನುವಾರ ದಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತು ಮೆಟ್ರೋ ನಿಲ್ದಾ ಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹಾಗಾಗಿ ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ರಿಂದ 10.00 ರ ವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೆೈಲು ಸೇವೆ ಇರುವುದಿಲ್ಲ.
ಇದನ್ನೂ ಓದಿ: BMRCL Ticket Hike: ಬಸ್ ಟಿಕೆಟ್ ಬೆನ್ನಲ್ಲೇ ಮತ್ತೊಂದು ದರ ಏರಿಕೆ ಶಾಕ್: ನಮ್ಮ ಮೆಟ್ರೋ ಪ್ರಯಾಣ ದುಬಾರಿ
ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಬರುವ, ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್ಫೈಲ್ಡ್ (ಕಾಡುಗೋಡಿ) ಮತ್ತು ಇಂದಿರಾನಗರ ಮೆಟ್ರೋ ನಿಲ್ದಾ ಣಗಳ ನಡುವೆ, ಮೇಲಿನ ಅವಧಿಯಲ್ಲಿ ನಿಗದಿತ ವೇಳೆಯಲ್ಲಿ ರೆೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 07:00 ಗಂಟೆಗೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಗಸಂದ್ರ ಮಾದಾವರ ಮಾರ್ಗ ಕೊನೆಗೂ ಕಾರ್ಯಾಚರಣೆಗೆ ಸಿದ್ಧ
ಇನ್ನು ಹಸಿರು ಮಾರ್ಗದ ರೆೈಲು ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಎಂದಿನಂತೆ ಮೆಟ್ರೋ ರೈಲುಗಳ ಸೇವೆ ಇರಲಿದೆ. ಹಾಗಾಗಿ ನಮ್ಮ ಮೆಟ್ರೋ ಪ್ರಯಾಣಿಕರು ಬದಲಾವಣೆಯನ್ನು ಗಮನಿಸಬೇಕೆಂದು ಕೋರಲಾಗಿದ್ದು, ಅನಾನುಕೂಲತೆಗೆ ಸಾರ್ವಜನಿಕರಿಗೆ ವಿಷಾದಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:02 pm, Fri, 17 January 25