AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಹಾಸ್ಟೆಲ್‌ನ ಕೊಠಡಿಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಡೆದಿದೆ. ಮಧ್ಯಾಹ್ನ ರೂಮ್‌ಮೇಟ್‌ ಹೋಗಿ ಬಾಗಿಲು ಬಡಿದಾಗ ತೆಗೆದಿರಲಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ರಂಗನಾಥ್ ನಾಯಕ್
Shivaprasad B
| Updated By: ಗಂಗಾಧರ​ ಬ. ಸಾಬೋಜಿ|

Updated on:May 01, 2024 | 11:08 PM

Share

ಬೆಂಗಳೂರು, ಮೇ 1: ಬೆಂಗಳೂರು ವಿವಿ (Bangaluru University) ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟೆಲ್‌ ಕೊಠಡಿಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ (student) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಂಗನಾಥ್ ನಾಯಕ್(27) ಆತ್ಮಹತ್ಯೆ ಮಾಡಿಕೊಂಡ ಪಿಹೆಚ್‌ಡಿ ವಿದ್ಯಾರ್ಥಿ. ಬೆಳಗ್ಗೆ ಕ್ಯಾಂಟೀನ್‌ಗೆ ಹೋಗಿ ತಿಂಡಿ ತಿಂದು ಹಾಸ್ಟೆಲ್​ಗೆ ಹೋಗಿದ್ದ. ನಂತರ ರೂಮ್‌ನ ಲಾಕ್ ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ. ಮಧ್ಯಾಹ್ನ ರೂಮ್‌ಮೇಟ್‌ ಹೋಗಿ ಬಾಗಿಲು ಬಡಿದಾಗ ತೆಗೆದಿರಲಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಮಿಕ ದಿನಾಚರಣೆಯ ದಿನವೇ ಕಾರ್ಮಿಕ ಸಾವು

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ನಗರದ ಬಿಎಂಟಿಸಿ ಬಸ್ ಡಿಪೋ ಬಳಿ ವಿದ್ಯುತ್ ತಂತಿ ತಗುಲಿ ಕೇರಳ ಮೂಲದ ಅಶ್ರಫ್(23) ಎಂಬ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೇಕರಿಯಲ್ಲಿ ಅಶ್ರಫ್ ಕೆಲಸ ಮಾಡುತ್ತಿದ್ದ. ರಾತ್ರಿ 12 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮಹಡಿ ಮೇಲೆ ತೆರಳಿದ್ದ. ಈ ವೇಳೆ ಮಹಡಿ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ದುರ್ಘಟ‌ನೆ ಸಂಭವಿಸಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಶಿಶು ಸಾವು ಆರೋಪ: ಪ್ರತಿಭಟನೆ 

ಕೊಪ್ಪಳ: ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಶಿಶು ಸಾವು ಆರೋಪ ಕೇಳಿಬಂದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಕುಟುಂಬದವರಿಂದ ಪ್ರತಿಭಟನೆ ಮಾಡಲಾಗಿದೆ. ಹೆರಿಗೆ ಸಮಯದಲ್ಲಿ ವಿಠಲಾಪುರದ ಲಕ್ಷ್ಮೀ(20) ಮೃತಪಟ್ಟಿದ್ದಾಳೆ.

ಇದನ್ನೂ ಓದಿ: ಅಪ್ರಾಪ್ತ ವಯಸ್ಸಿನಲ್ಲಿ ಪ್ರೀತಿ ಬಲೆಗೆ ಬಿದ್ದ ಯುವತಿ ಊರ ಹಬ್ಬದ ದಿನ ಗಂಡನ ಕೈಯಲ್ಲಿ ಹತ್ಯೆ!

ನಿನ್ನೆ ಮುಂಜಾನೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಲಕ್ಷ್ಮೀ. ಆದ್ರೆ, ಹೆರಿಗೆಗೂ ಮೊದಲೇ ಲಕ್ಷ್ಮೀ ಹಾಗೂ ಶಿಶು ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷದಿಂದ ಸಾವು ಅಂತ ಆರೋಪಿಸಿ ಧರಣಿ ಮಾಡಲಾಗಿದೆ.

ಕ್ಯಾಂಟರ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಆನೇಕಲ್ ತಾಲೂಕಿನ ಬಾಗಲೂರು ಮುಖ್ಯರಸ್ತೆಯಲ್ಲಿ ಕ್ಯಾಂಟರ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೈಕ್​ಗೆ ಡಿಕ್ಕಿಯಾಗಿ ನಂತರ ನಿಯಂತ್ರಣ ತಪ್ಪಿ ಕ್ಯಾಂಟರ್​ ವಾಹನ ಕೂಡ ಪಲ್ಟಿಯಾಗಿದ್ದು, ಕ್ಯಾಂಟರ್ ಚಾಲಕನಿಗೂ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹಿನ್ನೆಲೆ ಕಿಲೋಮೀಟರ್​ವರೆಗೆ ಟ್ರಾಫಿಕ್​ಜಾಮ್ ಆಗಿದ್ದು, ಸ್ಥಳಕ್ಕೆ ಸರ್ಜಾಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Wed, 1 May 24