ವಾಹನ ಸವಾರರ ಗಮನಕ್ಕೆ: ಇಂದಿನಿಂದ ಬೆಂಗಳೂರಿನ ಈ ಫ್ಲೈ ಓವರ್ ಬಂದ್
NHAI ಕಾಮಗಾರಿ ಹಿನ್ನೆಲೆ ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 6 ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ.

ಬೆಂಗಳೂರು, ಮಾರ್ಚ್ 05: ಕಾಮಗಾರಿ ಹಿನ್ನೆಲೆ ಇಂದಿನಿಂದ ರಾತ್ರಿ ವೇಳೆ ಅಂದರೆ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ (Flyover) ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಈ ಕುರಿತಾಗಿ ಪತ್ರಿಕಾ ಪ್ರಕಟನೆ ಹೊರಡಿಸಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರದ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಫ್ಲೈಓವರ್ ಕ್ಲೋಸ್ ಆಗಲಿದ್ದು, ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ ಎಂದು ತಿಳಿಸಿದೆ.
ಪ್ರಕಟಣೆಯಲ್ಲಿ ಏನಿದೆ?
ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈಓವರ್ನಲ್ಲಿ NHAI ವತಿಯಿಂದ ಪ್ರಮುಖ ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದ್ದು ಹಾಗಾಗಿ ಮಾರ್ಚ್ 5ರಿಂದ ನಾಳೆ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಮತ್ತು ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಕಡೆಗೆ ಎಲಿವೇಟೆಡ್ ಫ್ಲೈಓವರ್ನಲ್ಲಿ ಎರಡೂ ಕಡೆಗಳಲ್ಲಿ ರಾತ್ರಿ 11-00 ಗಂಟೆಯಿಂದ ಮರುದಿನ ಬೆಳಿಗ್ಗೆ 06-00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು.
Please note that the e city flyover will be closed everyday night from 11pm to morninb 6 am from today onwards due to NHAI repairs work !! pic.twitter.com/ONs5rN1xLy
— DCP SOUTH TRAFFIC (@DCPSouthTrBCP) March 5, 2025
ಬೆಳಿಗ್ಗೆ ವೇಳೆಯಲ್ಲಿ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 11-00 ಗಂಟೆಯವರೆಗೆ ಇದು ಎಲ್ಲಾ ರೀತಿಯ ವಾಹನಗಳಿಗೆ ಸಂಚಾರಕ್ಕೆ ತೆರೆದಿರುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಸಂಚಾರ ಡಿಸಿಪಿ ಶಿವಪ್ರಕಾಶ್ ಡಿ ಹೇಳಿದ್ದಿಷ್ಟು
ದಕ್ಷಿಣ ವಿಭಾಗ ಸಂಚಾರ ಡಿಸಿಪಿ ಶಿವಪ್ರಕಾಶ್ ಡಿ ಪ್ರತಿಕ್ರಿಯಿಸಿದ್ದು, ಇಂದು ರಾತ್ರಿಯಿಂದ ಫ್ಲೈ ಓವರ್ ಬಂದ್ ಆಗಲಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ರವರೆಗೆ ಬಂದ್ ಆಗಿರಲಿದೆ. NHAI ಕಡೆಯಿಂದ ಕಾಮಗಾರಿ ಹಿನ್ನೆಲೆ ಬಂದ್ ಆಗಲಿದೆ. ಎಲ್ಲಾ ರೀತಿ ವಾಹನಕ್ಕೆ ನಿರ್ಬಂಧವಿದೆ, ಎಲ್ಲರು ಸಹಕರಿಸಿಬೇಕು. ಒಂದು ತಿಂಗಳ ತನಕ NHAI ಕೆಲಸ ನಡೆಯಬಹುದು. ಅದಕ್ಕಿಂತ ಮುಂಚೆ ಮುಗಿದರೆ ಫ್ಲೈ ಓವರ್ ಓಪನ್ ಮಾಡ್ತಿವಿ. ರಾತ್ರಿ ವೇಳೆ ಆಗಿರುವುದರಿಂದ ಹೆಚ್ಚು ಸಂಚಾರ ಸಮಸ್ಯೆ ಆಗಲ್ಲ ಎಂದಿದ್ದಾರೆ.
ಇದನ್ನೂ ಓದಿ: ನಮ್ಮ ಮೆಟ್ರೋ ದರ ಏರಿಕೆ ನಂತರ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ವರದಿ
ಇನ್ನು ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಾಕಷ್ಟು ಸರಣಿ ಅಪಘಾತಗಳು ಸಂಭವಿಸಿವೆ. ಅಲ್ಲದೇ ಸಾಕಷ್ಟು ಭಾರಿ ಟ್ರಾಫಿಕ್ ಜಾಮ್ ಕೂಡ ಉಂಟಾಗುತ್ತಿದ್ದವು. ಹೀಗಾಗಿ ಫ್ಲೈಓವರ್ ಮೇಲೆ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸುವ ಬಗ್ಗೆ ಕೂಡ ಚಿಂತನೆ ನಡೆದಿದೆ. ಈ ಬಗ್ಗೆ ಬೆಂಗಳೂರು ಎಲಿವೇಟೆಡ್ ಟೋಲ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿ ಸಂಚಾರ ಪೊಲೀಸರಿಗೆ ಪತ್ರ ಕೂಡ ಬರೆಯಲಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:48 pm, Wed, 5 March 25







