ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರ ಬೃಹತ್ ಕಾರ್ಯಾಚರಣೆ: 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಆರೋಪಿಗಳ ಬಂಧನ
ಕಳೆದ ಒಂದು ತಿಂಗಳ ಅವಧಿಯಲ್ಲಿ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು (Bangaluru South Division Police) ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 3 ಕೋಟಿ 93 ಲಕ್ಷ ರೂ ಮೌಲ್ಯದ ಕಳವು ಮಾಲನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಾಪರ್ಟಿ ಪರೇಡ್, ವಾರಸುದಾರರಿಗೆ ವಸ್ತುಗಳನ್ನು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಮರಳಿಸಿದ್ದಾರೆ.
ಕುತ್ತಿಗೆಗೆ ಚಾಕುವಿನಿಂದ ಇರಿದು ಹಣ, ಫೋನ್ ದರೋಡೆ
ಕುತ್ತಿಗೆಗೆ ಚಾಕುವಿನಿಂದ ಇರಿದು ಹಣ, ಮೊಬೈಲ್ ಫೋನ್ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಒಟ್ಟಪ್ಪನಪಾಳ್ಯ ರಸ್ತೆಯಲ್ಲಿ ನಡೆದಿದೆ. ದುಷ್ಕರ್ಮಿಗಳು ಮಾದನಾಯಕನಹಳ್ಳಿಯ ಶಿವಕುಮಾರ್ ಎಂಬುವರ ಕುತ್ತಿಗೆಗೆ ಚಾಕುವಿನಿಂದ ಇರಿದು 17 ಸಾವಿರ ನಗದು, ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಗಾಯಾಳು ಶಿವಕುಮಾರ್ ಅವರನ್ನು ನೆಲಮಂಗಲ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:48 pm, Wed, 16 November 22