ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರ ಬೃಹತ್ ಕಾರ್ಯಾಚರಣೆ: 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಆರೋಪಿಗಳ ಬಂಧನ

| Updated By: ವಿವೇಕ ಬಿರಾದಾರ

Updated on: Nov 16, 2022 | 8:20 PM

ಕಳೆದ ಒಂದು ತಿಂಗಳ ಅವಧಿಯಲ್ಲಿ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರ ಬೃಹತ್ ಕಾರ್ಯಾಚರಣೆ: 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು (Bangaluru South Division Police) ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 3 ಕೋಟಿ 93 ಲಕ್ಷ ರೂ ಮೌಲ್ಯದ ಕಳವು ಮಾಲನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಲೇಔಟ್​ ಪೊಲೀಸ್ ಠಾಣೆಯಲ್ಲಿ ಪ್ರಾಪರ್ಟಿ ಪರೇಡ್, ವಾರಸುದಾರರಿಗೆ ವಸ್ತುಗಳನ್ನು ಪೊಲೀಸ್ ಕಮಿಷನರ್​​ ಪ್ರತಾಪ್​ ರೆಡ್ಡಿ ಮರಳಿಸಿದ್ದಾರೆ.

ಕುತ್ತಿಗೆಗೆ ಚಾಕುವಿನಿಂದ ಇರಿದು ಹಣ, ಫೋನ್ ದರೋಡೆ

ಕುತ್ತಿಗೆಗೆ ಚಾಕುವಿನಿಂದ ಇರಿದು ಹಣ, ಮೊಬೈಲ್​ ಫೋನ್​ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಒಟ್ಟಪ್ಪನಪಾಳ್ಯ ರಸ್ತೆಯಲ್ಲಿ ನಡೆದಿದೆ. ದುಷ್ಕರ್ಮಿಗಳು ಮಾದನಾಯಕನಹಳ್ಳಿಯ ಶಿವಕುಮಾರ್ ಎಂಬುವರ ಕುತ್ತಿಗೆಗೆ ಚಾಕುವಿನಿಂದ ಇರಿದು 17 ಸಾವಿರ ನಗದು, ಮೊಬೈಲ್​ ಕಸಿದು ಪರಾರಿಯಾಗಿದ್ದಾರೆ. ಗಾಯಾಳು ಶಿವಕುಮಾರ್​ ಅವರನ್ನು ನೆಲಮಂಗಲ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Wed, 16 November 22