ಪಿಎಸ್​ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ

ಬೇಗೂರು ಪೊಲೀಸ್ ಠಾಣೆಯ ಪಿಎಸ್​ಐ ಬಾಡಿಗೆದಾರನ ಮೇಲೆ ಹಲ್ಲೆ ಮಾಡಿದ ಪರಿಣಾಮ ಶಾಶ್ವತವಾಗಿ ಕಿವುಡನಾಗಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮನೆ ಮಾಲೀಕರ ನಡುವಿನ ಜಗಳದಲ್ಲಿ ಬಾಡಿಗೆದಾರನ ಮೇಲೆ ಪಿಎಸ್​ಐ ದರ್ಪ ತೋರಿದ್ದಾನೆ. ಸದ್ಯ ಘಟನೆ ಸಂಬಂಧ ನ್ಯಾಯಕ್ಕಾಗಿ ಬಾಡಿಗೆದಾರ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪಿಎಸ್​ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ
ಬಾಡಿಗೆದಾರ ಉದಯ ಕುಮಾರ್, PSI ಪುನೀತ್​
Updated By: ಗಂಗಾಧರ​ ಬ. ಸಾಬೋಜಿ

Updated on: Jul 26, 2025 | 2:41 PM

ಬೆಂಗಳೂರು, ಜುಲೈ 26: ಪಿಎಸ್​ಐನ ಹೊಡೆತಕ್ಕೆ ಮನೆ ಬಾಡಿಗೆದಾರ ಶಾಶ್ವತವಾಗಿ ಕಿವುಡನಾಗಿರುವಂತಹ ಘಟನೆಯೊಂದು ಬೆಂಗಳೂರಿನಲ್ಲಿ (bangaluru) ನಡೆದಿದೆ. ಬೇಗೂರು ಪೊಲೀಸ್ ಠಾಣೆ PSI ಪುನೀತ್​ನಿಂದ ಬಾಡಿಗೆದಾರ ಉದಯ ಕುಮಾರ್(26) ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇಬ್ಬರು ಮನೆ ಮಾಲೀಕರ ನಡುವಿನ ಜಗಳದಲ್ಲಿ ಬಾಡಿಗೆದಾರ ಬಲಿಪಶುವಾಗಿದ್ದು, ಸದ್ಯ ಘಟನೆ ಸಂಬಂಧ ಉದಯ ಕುಮಾರ್​ ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಬೇಗೂರು ಪೊಲೀಸ್ ಠಾಣೆ ಪಿಎಸ್ಐ ಪುನೀತ್​​ ಅನವಶ್ಯಕವಾಗಿ ಠಾಣೆಗೆ ಕರೆದೊಯ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕಾಲಿನಿಂದ ಒದ್ದು, ಕೈಯಿಂದ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿದ್ದಾರೆ. ಹಲ್ಲೆ ಪರಿಣಾಮ ಉದಯಗೆ ಎಡಕಿವಿ ಸಂಪೂರ್ಣ ಶ್ರವಣ ದೋಷವಾಗಿರುವುದು ವೈದ್ಯಕೀಯ ಪರೀಕ್ಷೆ ವೇಳೆ ಗೊತ್ತಾಗಿದೆ. ಸದ್ಯ ಉದಯ​ ಪರ ವಕೀಲರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಕುಡಿದ ಮತ್ತಲ್ಲಿ ದಲಿತ ಯುವಕನಿಗೆ ಮನಸೋ ಇಚ್ಛೆ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು

ಕುಡಿದ ಮತ್ತಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬ ದಲಿತ ಯುವಕನಿಗೆ ಮನಸೋ ಇಚ್ಛೆ ಥಳಿಸಿರುವಂತಹ ಘಟನೆ ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿತ್ತು. ಕಾನೂನು ಪಾಲನೆ ಮಾಡಬೇಕಾದ ಪೊಲೀಸಪ್ಪನೇ ತನ್ನ ಸ್ನೇಹಿತರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಲ್ಲದೇ ದಲಿತ ಯುವಕನೊಬ್ಬನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ ಆರೋಪ ಕೇಳಿಬಂದಿತ್ತು.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಠಾಣೆಯ ಪೊಲೀಸ್ ಸಿಬ್ಬಂದಿ ಸಿದ್ದೇಶ್ ತನ್ನ ಸ್ನೇಹಿತರೊಂದಿಗೆ ಸಂಸೆ ಗ್ರಾಮದ ಬಳಿ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು. ಇದೇ ಸಮಯದಲ್ಲಿ ಸ್ಥಳಕ್ಕೆ ಬಂದ ಡ್ರೈವರ್ ಕೆಲಸ ಮಾಡಿಕೊಂಡಿದ್ದ ನಾಗೇಶ್, ದಾರಿಯಲ್ಲಿ ಅಡ್ಡ ಇದ್ದ ವಾಹನವನ್ನು ತೆಗೆಯುವಂತೆ ಕೇಳಿಕೊಂಡಿದ್ದ.

ಇದನ್ನೂ ಓದಿ: 112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡು ಪೊಲೀಸಪ್ಪನ ಪೋಲಿ ಆಟ

ವಾಹನ ಸೈಡಿಗೆ ಹಾಕಿದ ಸಿದ್ದೇಶ್ ಮತ್ತೆ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮುಂದುವರಿಸಿದ್ದ. ಅಷ್ಟರಲ್ಲಿ ಕತ್ತಲೆಯಾಗಿದ್ದರಿಂದ ಚಾಲಕ ನಾಗೇಶ್ ಮೊಬೈಲ್​ನಲ್ಲಿ ಟಾರ್ಚ್ ಆನ್ ಮಾಡಿ ದಾರಿ ನೊಡಿದ್ದಾನೆ.‌ ಯಾವಾಗ ನಾಗೇಶ್ ಮೊಬೈಲ್​ನಲ್ಲಿ ಟಾರ್ಚ್ ಆನ್ ಆಯಿಯೋ ಕೋಪಗೊಂಡ ಪೊಲೀಸ್ ಸಿಬ್ಬಂದಿ ಸಿದ್ದೇಶ್ ತಾನು ಎಣ್ಣೆ ಕುಡಿಯುತ್ತಿರುವುದನ್ನು ವಿಡಿಯೋ ಮಾಡುತ್ತಿದ್ದಿಯಾ ಅಂತ ಅಟ್ಟಾಸಿಕೊಂಡು ಹೋಗಿ ಮೊಬೈಲ್ ಕಿತ್ತುಕೊಂಡು ಮನಸೋ ಇಚ್ಛೆ ಥಳಿಸಿ ಬೂಟ್ ಕಾಲಲ್ಲಿ ಒದ್ದಿದ್ದ ಆರೋಪ ಕೇಳಿಬಂದಿತ್ತು. ಬಳಿಕ ದಲಿತ ಯುವಕ ನ್ಯಾಯ ಬೇಕು ಎಂದು ಪಟ್ಟು ಹಿಡಿದು ಪ್ರತಿಭಟಿಸಿ ಬೆನ್ನಲ್ಲೇ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:25 pm, Sat, 26 July 25