AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ರೂ ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ ದುರಂತ ಅಂತ್ಯಕಂಡ ಯುವಕ

ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ಶಾಕ್​​ ಹೊಡೆದು ಯುವಕ ದುರಂತ ಅಂತ್ಯಕಂಡ ಘಟನೆ ಬೆಂಗಳೂರಿನ ಗಿರಿನಗರದ ಖಾಸಗಿ ಪಾರ್ಟ್‌ಮೆಂಟ್​ನಲ್ಲಿ ನಡೆದಿದೆ. ಸುಮಾರು 2 ಲಕ್ಷ ರೂ ಬೆಲೆ ಬಾಳುವ ಫಾರಿನ್​​ ಗಿಳಿ ರಕ್ಷಿಸಲು ಹೋಗಿ ದುರಂತ ಸಂಭವಿಸಿದೆ. ಸ್ಥಳಕ್ಕೆ ಬೆಸ್ಕಾಂ ಮತ್ತು ಕೆಇಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಲಕ್ಷಾಂತರ ರೂ ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ ದುರಂತ ಅಂತ್ಯಕಂಡ ಯುವಕ
ಮೃತ ಯುವಕ, ಗಿಳಿ
ಗಂಗಾಧರ​ ಬ. ಸಾಬೋಜಿ
|

Updated on:Dec 12, 2025 | 6:01 PM

Share

ಬೆಂಗಳೂರು, ಡಿಸೆಂಬರ್​ 12: ಹೈಟೆನ್ಷನ್ ವೈರ್​ ಕಂಬದ ಮೇಲೆ ಕುಳಿತಿದ್ದ ಸುಮಾರು 2 ಲಕ್ಷ ರೂ ಬೆಲೆ ಬಾಳುವ ಫಾರಿನ್​​ ಗಿಳಿಯನ್ನು ರಕ್ಷಿಸಲು ಹೋಗಿ ವಿದ್ಯುತ್ ಶಾಕ್ (electric shock)​​ ಹೊಡೆದು ಯುವಕನೋರ್ವ ಸಾವನ್ನಪ್ಪಿರುವಂತಹ (death) ಘಟನೆ ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್​ನಲ್ಲಿ ನಡೆದಿದೆ. ಅರುಣ್ ಕುಮಾರ್ (32) ಮೃತ ದುರ್ದೈವಿ. ಸದ್ಯ ಗಿರಿನಗರ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸಿದ್ದಾರೆ.

ನಡೆದದ್ದೇನು?

ಗಿಳಿಯೊಂದು ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್​​​ ಒಳಭಾಗದಲ್ಲಿರುವ ಹೈಟೆನ್ಷನ್ ವೈರ್​ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಅರುಣ್​ ಕುಮಾರ್​, ಈ ವೇಳೆ ಗಿಳಿ ರಕ್ಷಣೆಗೆ ಮುಂದಾಗಿದ್ದಾರೆ. ಅಪಾರ್ಟ್‌ಮೆಂಟ್​ ಕಾಪೌಂಡ್ ಮೇಲೆ ನಿಂತು ಸ್ಟೀಲ್ ಪೈಪ್​​ಗೆ ಕಟ್ಟಿಗೆ ಸೇರಿಸಿ ಓಡಿಸಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಸಪೋರ್ಟ್ ಹೆಸರಲ್ಲಿ ಭಾರೀ ವಂಚನೆ: ಅಮೆರಿಕ, ಬ್ರಿಟನ್ ಪ್ರಜೆಗಳ ಕೋಟ್ಯಂತರ ರೂ. ದೋಚಿದ ಬೆಂಗಳೂರು ಗ್ಯಾಂಗ್!

ಅರುಣ್​ ಕುಮಾರ್​​ ಅವರ ಉದ್ದೇಶ ಸರಿಯಾಗಿದ್ದರೂ ವಿಧಿಯಾಟ ಬೇರೆಯೇ ಇತ್ತು. ಈ ವೇಳೆ 66 ಸಾವಿರ ಕೆವಿ ವಿದ್ಯುತ್ ವೈರ್​​ನಿಂದ ಹೊಡೆದ ಶಾಕ್​​ಗೆ ಅರುಣ್ ಕಾಪೌಂಡ್​​ ಮೇಲಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.

ಮೃತ ಅರುಣ್ ಕುಮಾರ್​ ಮೂಲತಃ ಮಂಡ್ಯದ ನಾಗಮಂಗಲದವರು. ಅರುಣ್​ ತಂದೆ ಕೂಡ ಮೃತರಾಗಿದ್ದು, ತಾಯಿಗೆ ಒಬ್ಬನೇ ಮಗನಾಗಿದ್ದರು. ತಮ್ಮ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ಳುತ್ತಿದ್ದರು. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಗಿರಿನಗರ ಠಾಣೆಯಲ್ಲಿ ಯುಡಿಆರ್​ ದಾಖಲಾಗಿದೆ.

ನಿವಾಸಿಗಳು ಆಕ್ರೋಶ

ಇನ್ನು ಸ್ಥಳಕ್ಕೆ ಬೆಸ್ಕಾಂ ಮತ್ತು ಕೆಇಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಅಪಾರ್ಟ್‌ಮೆಂಟ್ ಒಳಗೆ 65 ಸಾವಿರ ಕೆವಿ ಸಾಮರ್ಥ್ಯದ ವೈರ್​ಗಳು ಇರುವುದಕ್ಕೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೃದಯಾಘಾತದಿಂದ ಕೆಡಿಎಂ ಕಿಂಗ್​-108 ಹೆಸರಿನ ಕೊಬ್ಬರಿ ಹೋರಿ ಸಾವು

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ಹೃದಯಾಘಾತದಿಂದ ಕೆಡಿಎಂ ಕಿಂಗ್​-108 ಹೆಸರಿನ ಕೊಬ್ಬರಿ ಹೋರಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸದ್ಯ ಹಿಂದೂ ಸಂಪ್ರದಾಯದ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ಮಾಡಲಾಗಿದೆ.

ಇದನ್ನೂ ಓದಿ: ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್

ಸುಮಾರು 12 ವರ್ಷ ವಿವಿಧ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಬಹುಮಾನ ಗೆದ್ದಿತ್ತು. ಮಸಣದ ದೊರೆ, ಕಿಲ್ಲಿಂಗ್​ ಸ್ಟಾರ್​, ಮಲೆನಾಡ ಜನರ ಜೀವಾ, ಕಾಂತೇಶನ ವರಪ್ರಸಾದ ಎಂದು ಕೊಬ್ಬರಿ ಹೋರಿ ಬಿರುದು ಪಡೆದಿತ್ತು.   ಮನೆ ಮುಂಭಾಗ ಹೋರಿಯ ದೇವಸ್ಥಾನ ಕಟ್ಟಿಸಲು ಮಾಲೀಕ ಕಾಂತೇಶ ನಾಯಕ್ ನಿರ್ಧರಿಸಿದ್ದಾರೆ.

ವರದಿ: ಪ್ರದೀಪ್​​ ಚಿಕ್ಕಾಟೆ  

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:19 pm, Fri, 12 December 25

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ