Bengaluru News: 5 ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಬಂಧಿಸಿದ ಬೆಂಗಳೂರು ಪೊಲೀಸರು
Bengaluru Police: ಬೆಂಗಳೂರಿನ ಕಾಡುಗೋಡಿ ಸಮೀಪ ಐದು ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.
ಬೆಂಗಳೂರು: ಬಾಂಗ್ಲಾದೇಶದ ಸುಮಾರು ಐದು ಮಂದಿ ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ನೆಲೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಕಾಡುಗೋಡಿ ಸಮೀಪ ಐದು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಹಳ್ಳಿಯಲ್ಲಿ ಒಂಭತ್ತು ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಐವರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಮಾಹಿತಿಯ ಪ್ರಕಾರ, ಪೊಲೀಸರು ದಾಳಿ ನಡೆಸಿ ಮಹಾರಾಷ್ಟ್ರದ ಐದು ಮಂದಿಯನ್ನು ಬಂಧಿಸಿದ್ದರು. ಪೊಲೀಸರಿಗೆ ಲಭಿಸಿದ ಮಾಹಿತಿಯ ಮೇರೆಗೆ ಈ ದಾಳಿ ಸಂಘಟಿಸಲಾಗಿತ್ತು.
ಇದಕ್ಕೂ ಮೊದಲು ನಾಗ್ಪುರ್ದಲ್ಲಿ 11 ಮಂದಿ ಬಾಂಗ್ಲಾದೇಶಿ ವಲಸಿಗರನ್ನು ರಕ್ಷಿಸಲಾಗಿತ್ತು. ನಾಗ್ಪುರ್ ಪೊಲೀಸ್ ಹಾಗೂ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳದ ಮೂಲಕ 11 ಮಂದಿಯನ್ನು ರಕ್ಷಣೆ ಮಾಡಿದ್ದರು. ಅವರನ್ನು ಮಾನವ ಕಳ್ಳಸಾಗಣೆ ಮೂಲಕ ಗುಜರಾತ್ನಲ್ಲಿ ಕೂಲಿ ಕೆಲಸಕ್ಕೆ ಕರೆತರಲಾಗಿತ್ತು. ಅವರು ನಕಲಿ ದಾಖಲೆ ಪತ್ರಗಳೊಂದಿಗೆ ಭಾರತವನ್ನು ಪ್ರವೇಶ ಮಾಡಿದ್ದರು.
ಈ 11 ಮಂದಿಯಲ್ಲಿ ಒಂಭತ್ತು ಜನರು ಕೂಲಿ ಕೆಲಸಗಳಿಗೆ ಹಾಗೂ ಇಬ್ಬರು ಹುಡುಗಿಯರನ್ನು ವೇಶ್ಯಾವಾಟಿಕೆಗೆ ತಳ್ಳುವ ಉದ್ದೇಶ ಇತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್ಕಾನ್ಸ್ಟೇಬಲ್ ಸಮವಸ್ತ್ರ
ಇದನ್ನೂ ಓದಿ: ಅಕ್ರಮ ವಲಸಿಗರು ಬೇಕೆಂದೇ ಸಣ್ಣಪುಟ್ಟ ಕೇಸ್ ಹಾಕಿಸಿಕೊಳ್ತಾರೆ; ವಲಸಿಗರ ಅಕ್ರಮದ ಬಗ್ಗೆ ಆರಗ ಜ್ಞಾನೇಂದ್ರ ಹೇಳಿಕೆ
Published On - 3:34 pm, Fri, 26 November 21