Bengaluru News: 5 ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಬಂಧಿಸಿದ ಬೆಂಗಳೂರು ಪೊಲೀಸರು

| Updated By: ganapathi bhat

Updated on: Nov 26, 2021 | 3:34 PM

Bengaluru Police: ಬೆಂಗಳೂರಿನ ಕಾಡುಗೋಡಿ ಸಮೀಪ ಐದು ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.

Bengaluru News: 5 ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಬಂಧಿಸಿದ ಬೆಂಗಳೂರು ಪೊಲೀಸರು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಬಾಂಗ್ಲಾದೇಶದ ಸುಮಾರು ಐದು ಮಂದಿ ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ನೆಲೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಕಾಡುಗೋಡಿ ಸಮೀಪ ಐದು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಹಳ್ಳಿಯಲ್ಲಿ ಒಂಭತ್ತು ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಐವರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಮಾಹಿತಿಯ ಪ್ರಕಾರ, ಪೊಲೀಸರು ದಾಳಿ ನಡೆಸಿ ಮಹಾರಾಷ್ಟ್ರದ ಐದು ಮಂದಿಯನ್ನು ಬಂಧಿಸಿದ್ದರು. ಪೊಲೀಸರಿಗೆ ಲಭಿಸಿದ ಮಾಹಿತಿಯ ಮೇರೆಗೆ ಈ ದಾಳಿ ಸಂಘಟಿಸಲಾಗಿತ್ತು.

ಇದಕ್ಕೂ ಮೊದಲು ನಾಗ್ಪುರ್​ದಲ್ಲಿ 11 ಮಂದಿ ಬಾಂಗ್ಲಾದೇಶಿ ವಲಸಿಗರನ್ನು ರಕ್ಷಿಸಲಾಗಿತ್ತು. ನಾಗ್ಪುರ್ ಪೊಲೀಸ್ ಹಾಗೂ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳದ ಮೂಲಕ 11 ಮಂದಿಯನ್ನು ರಕ್ಷಣೆ ಮಾಡಿದ್ದರು. ಅವರನ್ನು ಮಾನವ ಕಳ್ಳಸಾಗಣೆ ಮೂಲಕ ಗುಜರಾತ್​ನಲ್ಲಿ ಕೂಲಿ ಕೆಲಸಕ್ಕೆ ಕರೆತರಲಾಗಿತ್ತು. ಅವರು ನಕಲಿ ದಾಖಲೆ ಪತ್ರಗಳೊಂದಿಗೆ ಭಾರತವನ್ನು ಪ್ರವೇಶ ಮಾಡಿದ್ದರು.

ಈ 11 ಮಂದಿಯಲ್ಲಿ ಒಂಭತ್ತು ಜನರು ಕೂಲಿ ಕೆಲಸಗಳಿಗೆ ಹಾಗೂ ಇಬ್ಬರು ಹುಡುಗಿಯರನ್ನು ವೇಶ್ಯಾವಾಟಿಕೆಗೆ ತಳ್ಳುವ ಉದ್ದೇಶ ಇತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ

ಇದನ್ನೂ ಓದಿ: ಅಕ್ರಮ ವಲಸಿಗರು ಬೇಕೆಂದೇ ಸಣ್ಣಪುಟ್ಟ ಕೇಸ್ ಹಾಕಿಸಿಕೊಳ್ತಾರೆ; ವಲಸಿಗರ ಅಕ್ರಮದ ಬಗ್ಗೆ ಆರಗ ಜ್ಞಾನೇಂದ್ರ ಹೇಳಿಕೆ

Published On - 3:34 pm, Fri, 26 November 21