AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಾಳೆ ಬನ್ನೇರುಘಟ್ಟ ಉದ್ಯಾನವನ ಓಪನ್, ಬುಧವಾರ ರಜೆ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಹಿನ್ನೆಲೆ ಆಗಸ್ಟ್ 15 ರಂದು ಬನ್ನೇರುಘಟ್ಟ ಉದ್ಯಾನ ತೆರೆದಿರಲು ನಿರ್ಧರಿಸಲಾಗಿದೆ. ಅಲ್ಲದೆ, ಬುಧವಾರ ಉದ್ಯಾನವನಕ್ಕೆ ರಜೆ ಇರಲಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಾಳೆ ಬನ್ನೇರುಘಟ್ಟ ಉದ್ಯಾನವನ ಓಪನ್, ಬುಧವಾರ ರಜೆ
ಬನ್ನೇರುಘಟ್ಟ ಜೈವಿನ ಉದ್ಯಾನವನ (Photo: Lookerala.com)
ರಾಮು, ಆನೇಕಲ್​
| Edited By: |

Updated on:Aug 14, 2023 | 10:14 PM

Share

ಆನೇಕಲ್, ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆ (Independence Day) ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆ ನಾಳೆ (ಆಗಸ್ಟ್ 15) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ (Bannerghatta National Park) ವೀಕ್ಷಣೆಗೆ ಅವಕಾಶ ಇರಲಿದೆ. ಆದರೆ, ಬುಧವಾರದಂದು ಜೈವಿಕ ಉದ್ಯಾನವನಕ್ಕೆ ಭೇಟಿ ನೀಡಿದರೆ, ಒಳಗೆ ಪ್ರವೇಶ ಇರುವುದಿಲ್ಲ. ಏಕೆಂದರೆ, ಅಂದು ರಜೆ ಇರಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಉದ್ಯಾನವನದ ಅಧಿಕಾರಿಗಳು, ಪ್ರತಿ ಮಂಗಳವಾರ ಬನ್ನೇರುಘಟ್ಟ ಝೂ ವೀಕ್ಷಣೆ ಹಾಗೂ ಸಫಾರಿಗೆ ರಜೆ ಇರುತ್ತದೆ. ಆದರೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಂಗಳವಾರ ರಜೆ ದಿನವೂ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬರುವ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ: Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ

ಮಂಗಳವಾರ ಪಾರ್ಕ್ ಓಪನ್ ಮಾಡಿ ಬುಧವಾರದಂದು ಸಿಬ್ಬಂದಿ ವರ್ಗಕ್ಕೆ ರಜೆ ಮಾಡಲು ನಿರ್ಧಾರ ಮಾಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಬುಧವಾರದಂದು ಬನ್ನೇರುಘಟ್ಟ ಜೈವಿಕ ಉದ್ಯಾನವನ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 pm, Mon, 14 August 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ