ಕನಕಪುರದಲ್ಲಿ ದಾಳಿ ಭೀತಿ, ಅರ್ಜಿ ವರ್ಗಾವಣೆಗೆ ಯತ್ನಾಳ್ ಮನವಿ; ಡಿಕೆ ಶಿವಕುಮಾರ್​ಗೆ ಹೈಕೋರ್ಟ್ ನೋಟಿಸ್

| Updated By: Rakesh Nayak Manchi

Updated on: Mar 18, 2024 | 8:36 PM

ಆದಾಯ ತೆರಿಗೆ ಪ್ರಕರಣಗಳಿಂದ ರಕ್ಷಣೆ ಕೋರಿ ವಿವಿಧ ಮೂಲಗಳಿಂದ ಬಿಜೆಪಿ ವರಿಷ್ಠರಿಗೆ ಒತ್ತಡ ಹೇರಲು ಯತ್ನಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಯತ್ನಾಳ್ ಆರೋಪ ಮಾಡಿದ್ದರು. ಇದರಿಂದಾಗಿ ಘನತೆ ಮತ್ತು ಚರ್ಚಸ್ಸಿಗೆ ಹಾನಿಯಾಗಿದೆ ಎಂದು ಆರೋಪಿಸಿ ಯತ್ನಾಳ್ ವಿರುದ್ಧ ಕನಕಪುರ ಕೋರ್ಟ್​ನಲ್ಲಿ 204 ಕೋಟಿ ರೂಪಾಯಿಯ ಪರಿಹಾರದ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವರ್ಗಾಯಿಸುವಂತೆ ಯತ್ನಾಳ್ ಹೈಕೋರ್ಟ್​ ಮೊರೆ ಹೋಗಿದ್ದಾರೆ.

ಕನಕಪುರದಲ್ಲಿ ದಾಳಿ ಭೀತಿ, ಅರ್ಜಿ ವರ್ಗಾವಣೆಗೆ ಯತ್ನಾಳ್ ಮನವಿ; ಡಿಕೆ ಶಿವಕುಮಾರ್​ಗೆ ಹೈಕೋರ್ಟ್ ನೋಟಿಸ್
ಕನಕಪುರದಲ್ಲಿ ದಾಳಿ ಭೀತಿ ಹಿನ್ನೆಲೆ ಅರ್ಜಿ ವರ್ಗಾವಣೆಗೆ ಯತ್ನಾಳ್ ಮನವಿ; ಡಿಕೆ ಶಿವಕುಮಾರ್​ಗೆ ಹೈಕೋರ್ಟ್ ನೋಟಿಸ್
Follow us on

ಬೆಂಗಳೂರು, ಮಾ.18: ಆದಾಯ ತೆರಿಗೆ ಪ್ರಕರಣಗಳಿಂದ ರಕ್ಷಣೆ ಕೋರಿ ಬಿಜೆಪಿ ವರಿಷ್ಠರಿಗೆ ಒತ್ತಡ ಹೇರಲು ಯತ್ನಿಸಿದ್ದಾರೆ ಎಂಬ ಆರೋಪ ಸಂಬಂಧ ತನ್ನ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕನಕಪುರ (Kanakapura) ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವರ್ಗಾಯಿಸುವಂತೆ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೈಕೋರ್ಟ್​ಗೆ (High Court) ಮನವಿ ಮಾಡಿದ್ದಾರೆ. ಈ ಸಂಬಂಧ ಕೋರ್ಟ್​, ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

“ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಕನಕಪುರದಲ್ಲಿ ದಾವೆ ಹೋಡಲಾಗಿದೆ. ಕೋರ್ಟ್ ವಿಚಾರಣೆಗಾಗಿ ನಾನು ಕನಕಪುರಕ್ಕೆ ಭೇಟಿ ನೀಡಿದರೆ ನನ್ನ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ” ಎಂದು ಭೀತಿ ವ್ಯಕ್ತಪಡಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡುವಂತೆ ಹೈಕೋರ್ಟ್​ಗೆ ಯತ್ನಾಳ್ ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಡಿಕೆ ಶಿವಕುಮಾರ್​ಗೆ ನೋಟಿಸ್ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ಮಾರ್ಚ್ 20ಕ್ಕೆ ಮುಂದೂಡಿತು.

ಇದನ್ನೂ ಓದಿ: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ: ಸರ್ಕಾರದ ಮೇಲ್ಮನವಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಏನಿದು ಪ್ರಕರಣ?

ಇಡಿ ಪ್ರಕರಣಗಳಿಂದ ರಕ್ಷಣೆ ಕೋರಿ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಡಿಕೆ ಶಿವಕುಮಾರ್ ಅವರು ವಿವಿಧ ಮೂಲಗಳಿಂದ ಒತ್ತಡ ಹೇರಲು ಯತ್ನಿಸಿದ್ದಾರೆ. ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದರು. ಅಲ್ಲದೆ, ನನ್ನನು ವಿರುದ್ಧದ ಜಾರಿ ನಿರ್ದೇಶನಾಲಯದ (ಇಡಿ) ಪ್ರಕರಣಗಳಿಂದ ಮುಕ್ತಿಗೊಳಿಸಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ವಿರೋಧವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾಗಿ ವಿಜಯಪುರದಲ್ಲಿ 2019 ರ ಜೂನ್ 23 ರಂದು ಯತ್ನಾಳ್ ಆರೋಪಿಸಿದ್ದರು.

ಈ ಆರೋಪದಿಂದಾಗಿ ಘನತೆ, ವರ್ಚಸ್ಸಿಗೆ ಹಾನಿಯುಂಟಾಗಿದೆ ಎಂದು ಆರೋಪಿಸಿ ಯತ್ನಾಳ್ ವಿರುದ್ಧ ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯಕ್ಕೆ 204 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Mon, 18 March 24