AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವ ಮಂಟಪ ಕೃತಿ ವಿವಾದ: ಶಂಕರ ಬಿದರಿ ವಿರುದ್ಧ ಮಹಾಸಭಾದಲ್ಲಿ ತೀವ್ರ ಅಸಮಾಧಾನ; ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಕ್ಕೆ ಆಗ್ರಹ

ಬಸವ ಮಂಟಪ ಪುಸ್ತಕದಲ್ಲಿ ಬಸವಣ್ಣನವರ ಬಗ್ಗೆ ಅವಹೇಳನ ಆರೋಪದ ಕುರಿತು ವೀರಶೈವ ಮಹಾಸಭಾದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ವಿರುದ್ಧ ರಾಷ್ಟ್ರೀಯ ಅಧ್ಯಕ್ಷರಿಗೆ ದೂರು ನೀಡಲಾಗಿದ್ದು, ಅವರನ್ನು ವಜಾಕ್ಕೆ ಆಗ್ರಹಿಸಲಾಗಿದೆ. ಬಿದರಿ ನಡೆ ಸಂಘಟನೆಯ ಘನತೆ ಮತ್ತು ತತ್ವಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬಸವ ಮಂಟಪ ಕೃತಿ ವಿವಾದ: ಶಂಕರ ಬಿದರಿ ವಿರುದ್ಧ ಮಹಾಸಭಾದಲ್ಲಿ ತೀವ್ರ ಅಸಮಾಧಾನ; ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಕ್ಕೆ ಆಗ್ರಹ
ಶಂಕರ ಬಿದರಿImage Credit source: facebook.com/iamshankarbidari
ಪ್ರಸನ್ನ ಗಾಂವ್ಕರ್​
| Edited By: |

Updated on: Nov 20, 2026 | 3:18 PM

Share

ಮುಖ್ಯಾಂಶಗಳು

  • ಬಸವ ಮಂಟಪ ಪುಸ್ತಕದಲ್ಲಿ ಬಸವಣ್ಣನವರ ಬಗ್ಗೆ ಅವಹೇಳನ ಆರೋಪ
  • ಶಂಕರ ಬಿದರಿ ವಿರುದ್ಧ ಮಹಾಸಭಾದಲ್ಲಿ ತೀವ್ರ ಅಸಮಾಧಾನ
  • ಮಹಾಸಭಾ ರಾಜ್ಯಾಧ್ಯಕ್ಷ ಸ್ಥಾನದಿಂದ ಶಂಕರ ಬಿದರಿ ವಜಾಕ್ಕೆ ಆಗ್ರಹ

ಬೆಂಗಳೂರು, ನವೆಂಬರ್​​ 20: ರಾಜ್ಯಾದ್ಯಂತ ಲೇಖಕ ರವಿ ಹಂಜ್ ಬರೆದಿರುವ ಬಸವ ಮಂಟಪ ಬುಕ್ ಲಿಂಗಾಯತರನ್ನ ಕೆರಳಿಸಿದೆ. ಪುಸ್ತಕದಲ್ಲಿ ಬಸವಣ್ಣ ಬಗ್ಗೆ ಅಪಮಾನ ಮಾಡಲಾಗಿದೆ ಅಂತಾ ರೊಚ್ಚಿಗೆದ್ದಿದ್ದಾರೆ. ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಲೇಖಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಪುಟ ಸಮ್ಮತಿ ನೀಡಿದೆ. ಇದೆಲ್ಲದರ ಬೆನ್ನಲ್ಲೇ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಹಾಸಭಾದ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡ ಆರೋಪ ಹಿನ್ನೆಲೆ ಮಹಾಸಭೆಯ ರಾಜ್ಯಾಧ್ಯಕ್ಷ ಸ್ಥಾನದಿಂದ ಶಂಕರ ಬಿದರಿ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ದೂರು ಸಲ್ಲಿಸಲಾಗಿದೆ.

ರಾಷ್ಟ್ರೀಯ ಅಧ್ಯಕ್ಷರಿಗೆ ಬಿಎಂ ಸುಭಾಷ್‌ಚಂದ್ರ ಪತ್ರ

ಶಂಕರ ಬಿದರಿ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಿಗೆ ಬಿ.ಎಂ. ಸುಭಾಷ್‌ಚಂದ್ರ ಪತ್ರ ಬರೆದಿದ್ದಾರೆ. ಬಸವ ಮಂಟಪ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಶಂಕರ ಬಿದರಿ ನಡೆದುಕೊಂಡ ರೀತಿಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಮಹಾಸಭೆಯ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಘಟನೆಯ ನಿಯಮ ಮತ್ತು ತತ್ವಗಳಿಗೆ ವಿರುದ್ಧವಾಗಿ ವರ್ತನೆ

ಸಂಘಟನೆಯ ನಿಯಮಗಳು ಮತ್ತು ತತ್ವಗಳಿಗೆ ವಿರುದ್ಧವಾಗಿ ಶಂಕರ ಬಿದರಿ ನಡೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ. ರಾಜಕೀಯ ವಿಚಾರಗಳಲ್ಲಿ ಮಹಾಸಭೆಯ ಹೆಸರಿಗೆ ಮಸಿ ಬಳಿದಿದ್ದು, ಅವರ ನಡೆ ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿದೆ. ಹೀಗಾಗಿ ಅವರನ್ನು ಮಹಾಸಭೆಯ ರಾಜ್ಯಾಧ್ಯಕ್ಷ ಸ್ಥಾನದಿಂದ ತಕ್ಷಣವೇ ವಜಾಗೊಳಿಸುವಂತೆ ಬಿಎಂ ಸುಭಾಷ್‌ಚಂದ್ರ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

LIVE TV

ಸಚಿವ ಎಂಬಿ ಪಾಟೀಲ್ ವಿರುದ್ಧ ಶಂಕರ್ ಬಿದರಿ ಗರಂ 

ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಸಚಿವ ಎಂಬಿ ಪಾಟೀಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನನ್ನ ವಿರುದ್ಧ ಸಚಿವ ಎಂಬಿ ಪಾಟೀಲ್ ಅವರು ಹೇಳಿಕೆ ನೀಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಎಂಬಿ ಪಾಟೀಲ್​ ನನ್ನ ವಿರುದ್ಧ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ನಾನು ಈಗ ಬೆಂಗಳೂರಿನಿಂದ ಹೊರಗಿದ್ದೇನೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನನ್ನ ಭಾಗವಹಿಸುವಿಕೆಗೆ ಸಂಬಂಧಿಸಿದ ಪ್ರಕರಣದ ಪೂರ್ಣ ಸತ್ಯಾಸತ್ಯತೆಗಳನ್ನು ತಿಳಿಯದೆ ಅವರು ನನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ‘ಬಸವ ಮಂಟಪ’ ಕೃತಿ ವಿವಾದ:ಲೇಖಕ ರವಿ ಹಂಜ್, ವಿಶ್ವೇಶ್ವರ್ ಭಟ್ ವಿರುದ್ಧ ಎಫ್​ಐಆರ್

‘ಎಂಬಿ ಪಾಟೀಲ್ ಅವರ ತಂದೆ ದಿವಂಗತ ಬಿ.ಎಂ. ಪಾಟೀಲ್ ಅವರು 1970ರ ದಶಕದಲ್ಲಿ ನನ್ನ ಮೇಲೆ ಅಪಾರ ಪ್ರೀತಿ ತೋರಿದ್ದರು. ಅಲ್ಲದೆ, ಕಳೆದ 30 ವರ್ಷಗಳಿಂದ ಎಂ.ಬಿ. ಪಾಟೀಲ್ ಮತ್ತು ನಮ್ಮ ನಡುವೆ ಸೌಹಾರ್ದಯುತ ಸಂಬಂಧವಿದೆ. ಯಾವುದೇ ಹೇಳಿಕೆ ನೀಡುವ ಮೊದಲು ಸಚಿವರು ಸತ್ಯಾಂಶಗಳನ್ನು ಪರಿಶೀಲಿಸಬೇಕಿತ್ತು. ನಾನು ಅವರಂತೆ ಬೇಜವಾಬ್ದಾರಿಯುತವಾಗಿ ವರ್ತಿಸಲು ಅಥವಾ ಅವರ ವಿರುದ್ಧ ಪ್ರತಿಯಾಗಿ ಹೇಳಿಕೆ ನೀಡಲು ಬಯಸುವುದಿಲ್ಲ. ನವೆಂಬರ್ 22ರಂದು ಬೆಂಗಳೂರಿಗೆ ಆಗಮಿಸಲಿದ್ದು, ಅದಕ್ಕೂ ಮೊದಲು ನನ್ನ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಸಚಿವರು ಹಿಂಪಡೆದು ವಿಷಾದ ವ್ಯಕ್ತಪಡಿಸಬೇಕೆಂದು ನಾನು ನಿರೀಕ್ಷಿಸುತ್ತೇನೆ. ಈ ಕುರಿತು ನವೆಂಬರ್ 23ರಂದು ಪ್ರತಿಕ್ರಿಯೆ ನೀಡುವುದಾಗಿ’ ಶಂಕರ್ ಬಿದರಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ರಂಭಾಪುರಿ ಪೀಠದ  ಬಗ್ಗೆಯೂ ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಉಲ್ಲೇಖ!
ರಂಭಾಪುರಿ ಪೀಠದ  ಬಗ್ಗೆಯೂ ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಉಲ್ಲೇಖ!
ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ
ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ
ಕ್ಯಾಪ್ಟನ್ ಆದ ಮೊದಲ ಹೆಜ್ಜೆಯಲ್ಲೇ ಎಡವಿದ ಗಾನವಿ: ವಿಡಿಯೋ
ಕ್ಯಾಪ್ಟನ್ ಆದ ಮೊದಲ ಹೆಜ್ಜೆಯಲ್ಲೇ ಎಡವಿದ ಗಾನವಿ: ವಿಡಿಯೋ
‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್ ಕ್ಷಮೆಯಾಚನೆ
‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್ ಕ್ಷಮೆಯಾಚನೆ
ಸಿಎಂ ಸಂಧಾನದ ನಂತರವೂ 4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ!
ಸಿಎಂ ಸಂಧಾನದ ನಂತರವೂ 4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ!
ಹಿರಿಯೂರು ಉಪಚುನಾವಣೆ: ಕುಮಾರಸ್ವಾಮಿ ಬಳಿ ಅಮಿತ್​ ಶಾ ಚರ್ಚೆ
ಹಿರಿಯೂರು ಉಪಚುನಾವಣೆ: ಕುಮಾರಸ್ವಾಮಿ ಬಳಿ ಅಮಿತ್​ ಶಾ ಚರ್ಚೆ