AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ’: ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಶೋಷಣೆಯ ಆರೋಪ ಕೇಳಿಬಂದಿದೆ. ಮಠಕ್ಕೆ ಕರೆಸಿ, ಪ್ರಸಾದ ನೆಪದಲ್ಲಿ ವಿಶ್ವಾಸ ದುರುಪಯೋಗಪಡಿಸಿಕೊಂಡು ದೈಹಿಕವಾಗಿ ತಪ್ಪಾಗಿ ವರ್ತಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ವಿಡಿಯೋ ಬಳಸಿ ಬ್ಲಾಕ್‌ಮೇಲ್ ಮಾಡುತ್ತಿದ್ದು, ಬೆತ್ತಲೆ ವಿಡಿಯೋ ಕರೆಗೆ ಒತ್ತಾಯಿಸುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

'ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ': ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!
ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Apr 07, 2026 | 1:26 PM

Share

ಬೆಂಗಳೂರು, ಏಪ್ರಿಲ್ 07: ನಗರದಲ್ಲಿ ಧಾರ್ಮಿಕ ಮುಖಂಡರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತ್ಯಾಗರಾಜನಗರ ನಿವಾಸಿಯಾಗಿರುವ ಮಹಿಳೆಯೊಬ್ಬರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ (Harassment) ಹಾಗೂ ಮಾನಸಿಕ ಶೋಷಣೆಯ ಆರೋಪ ಮಾಡಿ ದೂರು ಸಲ್ಲಿಸಿದ್ದಾರೆ.

ಮಹಿಳೆಯ ದೂರಿನಲ್ಲೇನಿದೆ?

‘ನಾನು ಸ್ವಾಮಿಜಿ ಅವರ ಭಕ್ತೆಯಾಗಿದ್ದೆ. ಅವರು ನನ್ನನ್ನು ಮಠಕ್ಕೆ ಕರೆಸಿ ಪ್ರಸಾದ ಕೊಡುತ್ತೇನೆ ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದರು. ಆ ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದು, ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ ಎಂದು ಬೆದರಿಸುತ್ತಿದ್ದಾರೆ.ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ. ಆದ್ದರಿಂದ, ಈ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ FIR ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ’ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಾಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮುಖ್ಯಮಂತ್ರಿ, ಗೃಹ ಸಚಿವರಿಗೂ ದೂರು ಸಲ್ಲಿಕೆ

ಈ ಕುರಿತು ಮಹಿಳೆ ಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯ ಮಹಿಳಾ ಆಯೋಗ ಹಾಗೂ ಮಾನವ ಹಕ್ಕು ಆಯೋಗ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಪ್ರಸ್ತುತ ಈ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ, ಆರೋಪಗಳು ಸಾಬೀತಾಗುವವರೆಗೆ ಯಾರನ್ನೂ ತಪ್ಪಿತಸ್ಥರಾಗಿ ಪರಿಗಣಿಸಲಾಗುವುದಿಲ್ಲ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆಯ ವರದಿ ಹೊರಬರುವುದನ್ನು ಕಾದು ನೋಡಲಾಗುತ್ತಿದೆ.

ಸ್ವಾಮೀಜಿಯಿಂದಲೂ ದೂರು!

ಏಪ್ರಿಲ್ 4ರಂದು ಸ್ವಾಮೀಜಿಯವರು ಮಹಿಳೆ ಸೇರಿ ನಾಲ್ವರ ವಿರುದ್ಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆಬ್ರವರಿ 11ರಂದು ಕಗ್ಗೋಡ ಬಳಿ ತಮ್ಮ ವಾಹನವನ್ನು ಅಡ್ಡಗಟ್ಟಿ ಹಣಕ್ಕಾಗಿ ಬೆದರಿಸಿ ಹಲ್ಲೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರು ಮೂಲದ ಮಹಿಳೆ ಸೇರಿ ಪೃಥ್ವಿಗೌಡ, ಯಶವಂತ್ ಹಾಗೂ ಸ್ಪೀಡ್ ನ್ಯೂಸ್ ಎಂಡಿ ವೀರೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಹಿಳೆ  ಫೌಂಡೇಷನ್ ಹೆಸರಿನಲ್ಲಿ ಹಣ ಬೇಡಿಕೆ ಇಟ್ಟು, ನೀಡದಿದ್ದರೆ ಅಪಪ್ರಚಾರ ಹಾಗೂ ಸುಳ್ಳು ಆರೋಪ ಮಾಡುವುದಾಗಿ ಬೆದರಿಸಿದ್ದಾಳೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Tue, 7 April 26

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ