AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇದೇ ತಿಂಗಳಲ್ಲಿ ಎರಡೆರಡು ಕಡಲೆಕಾಯಿ ಪರಿಷೆ: ಎಲ್ಲೆಲ್ಲಿ? ಯಾವಾಗ? ಏನು ವಿಶೇಷ?

ಅಭಿವೃದ್ಧಿ ಹಾಗೂ ನಗರೀಕರಣದಲ್ಲಿ ಮುಳುಗಿಹೋಗಿರುವ ಬೆಂಗಳೂರಿನಲ್ಲಿ ಗ್ರಾಮೀಣ ಸೊಗಡಿನ ಆಚರಣೆಗಳೆಂದರೆ ಬಹಳ ವಿಶೇಷ. ಅದೇ ರೀತಿಯ ಮಹತ್ವದ ಆಚರಣೆಗೆ ಬೆಂಗಳೂರು ಸಾಕ್ಷಿಯಾಗಲಿದೆ. ಇದೇ ನವೆಂಬರ್​ ತಿಂಗಳಲ್ಲಿ ಒಂದು ವಾರದ ಗ್ಯಾಪ್​ನಲ್ಲಿ ಎರಡು ಬೃಹತ್​​​ ಕಡಲೆಕಾಯಿ ಪರಿಷೆಗೆ ಬೆಂಗಳೂರಿಗರು ಸಜ್ಜಾಗುತ್ತಿದ್ದಾರೆ. ಹಾಗಾದ್ರೆ, ಎಲ್ಲೆಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ? ಯಾವಾಗ? ಏನೆಲ್ಲಾ ವಿಶೇಷ ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಇದೇ ತಿಂಗಳಲ್ಲಿ ಎರಡೆರಡು ಕಡಲೆಕಾಯಿ ಪರಿಷೆ: ಎಲ್ಲೆಲ್ಲಿ? ಯಾವಾಗ? ಏನು ವಿಶೇಷ?
Kadalekai Parishe
ರಮೇಶ್ ಬಿ. ಜವಳಗೇರಾ
|

Updated on: Nov 05, 2025 | 9:22 PM

Share

ಬೆಂಗಳೂರು, (ನವೆಂಬರ್ 05): ಈ ಬಾರಿ ಬೆಂಗಳೂರಿಗರಿಗೆ (bengaluru) ಒಂದೇ ತಿಂಗಳಲ್ಲಿ ಎರಡೆರಡು ಕಡಲೆಕಾಯಿ (kadalekai parishe) ಪರಿಷೆ ಬಂದಿವೆ. ಬಸವನಗುಡಿ ಕಡಲೆಕಾಯಿ ಪರಿಷೆ 2025ರ ಸಿದ್ಧತೆ ಆರಂಭವಾಗಿದ್ದು, ಐತಿಹಾಸಿಕವಾಗಿ ಮೊದಲ ಬಾರಿಗೆ 2 ದಿನಗಳಿಂದ 5 ದಿನಗಳಿಗೆ ವಿಸ್ತರಿಸಲಾಗಿದೆ. ಇದೇ ನವೆಂಬರ್ 17 ರಿಂದ 21 ರವರೆಗೆ ನಡೆಯುವ ಈ ಪರಿಷೆಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಪ್ಲಾಸ್ಟಿಕ್ ಮುಕ್ತ ಪರಿಷೆಯಾಗಿದ್ದು, ಈ ಬಾರಿಯೂ ಅದೇ ಮಾದರಿಯಲ್ಲಿ ಆಚರಣೆ ಮಾಡಲಾಗುವುದು. ಇದಕ್ಕೂ ಮೊದಲೇ ಮಲ್ಲೇಶ್ವರ ಕಡಲೆಕಾಯಿ ಪರಿಷೆ ನಡೆಯಲಿದೆ. ಹೌದು.. ಕಾಡುಮಲ್ಲೇಶ್ವರ ಗೆಳಯರ ಬಳಗದ ಶ್ರೀ ಭ್ರಮರಂಭ ಸಮೇತ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ನವೆಂಬರ್ 8ರಿಂದ 9,10ರಂದು ಮೂರು ದಿನಗಳ 9ನೇ ವರ್ಷದ ರೈತ ಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ ನಡೆಯಲಿದೆ.

ರೈತ ಸ್ನೇಹಿ ಕಡಲೆಕಾಯಿ ಪರಿಷೆಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರ ಮೂಲಕ ರೈತರಿಗೆ ಬೀದಿ ಬದಿಯ ವ್ಯಾಪಾರಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ನವೆಂಬರ್ 8ರಂದು ಸಂಜೆ 5ಗಂಟೆಗೆ ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿರವರು, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿ ಹಲವು ಗಣ್ಯರು ಹಾಗೂ ಕಲಾವಿದರು ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಕುರಿತು ಕಾಡುಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷರಾದ ಬಿ.ಕೆ.ಶಿವರಾಂರವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.

ನ.17 ಬಸವನಗುಡಿ ಕಡಲೆಕಾಯಿ ಪರಿಷೆ

ಬಹು ನಿರೀಕ್ಷಿತ ಐತಿಹಾಸಿಕ ಹಾಗೂ ಲಕ್ಷಾಂತರ ಮಂದಿ ಸಾಕ್ಷಿಯಾಗುವ ಬಸವನಗುಡಿ ಕಡಲೆಕಾಯಿ ಪರಿಷೆಗೆ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು, ಕಡೆಯ ಕಾರ್ತಿಕ ಮಾಸ ನವೆಂಬರ್ 17 ರಿಂದ 5 ದಿನಗಳ ಕಾಲ ನಡೆಯಲಿದೆ. 21 ಬಸವಣ್ಣಗಳನ್ನು ದೇವಸ್ಥಾನಕ್ಕೆ ಆಹ್ವಾನಿಸಿ‌ ವಿಶೇಷ ಪೂಜೆ ಸಲ್ಲಿಸುವ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಸೇರಿ ಹಲವು ಮಂದಿ ಉಪಸ್ಥಿತರಿರಲಿದ್ದಾರೆ. ಕಳೆದ ವರ್ಷ ಪರಿಷೆಗೆ ಸುಮಾರು 5 ಲಕ್ಷ ಮಂದಿ ಭಾಗಿ ಆಗಿದ್ದು, ಈ ಬಾರಿ ಇನ್ನೂ ಹೆಚ್ಚಿನ ಜನಸಾಗರ ಸೇರುವ ನಿರೀಕ್ಷೆ ಇದೆ.

ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆಯ ಸಹಕಾರ ಕೋರಲಾಗಿದೆ. ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ. ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಅಳವಡಿಸಲಾಗುತ್ತಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಇದೇ ನವೆಂಬರ್​ 8ರಿಂದ ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಚಾಲನೆ ಸಿಗಲಿದ್ದು, ನವೆಂಬರ್​ 17ರಿಂದ ಬಸವನಗುಡಿ ಪರಿಷೆ ಕೂಡ ಎದುರಾಗಲಿದೆ.

ಕಡಲೆಕಾಯಿ ಪರಿಷೆ ದಿನಗಳಂದು ಆರೋಗ್ಯ ಸ್ವಚ್ಛತೆ ನೈರ್ಮಲ್ಯಕ್ಕೆ‌ ಒತ್ತು ಮತ್ತು ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಗತ್ಯ ವ್ಯವಸ್ಥೆ ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಕೆ,‌ ಅಗ್ನಿ ಶಾಮಕ ವಾಹನ ನಿಯೋಜನೆ. ತುರ್ತು ಚಿಕಿತ್ಸೆ ವಾಹನದ ವ್ಯವಸ್ಥೆ, ಮಾರ್ಷಲ್ ಗಳ ನಿಯೋಜನೆ ಮಾಡಲಾಗುತ್ತಿದೆ.