ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಸರ್ಕಾರದ ಯೋಜನೆಗಳು, ಕೆಲಸಗಳ ಬಗ್ಗೆ ಪ್ರಚಾರ ಮಾಡುವ ಕೆಲಸ ಮಾಡ್ತೀವಿ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ನೀಡುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ

ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಅರುಣ್ ಸಿಂಗ್ (ಸಂಗ್ರಹ ಚಿತ್ರ)
Updated By: preethi shettigar

Updated on: Oct 03, 2021 | 10:30 AM

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಜತೆಗೆ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಉಪ‌ ಚುನಾವಣೆಗೆ ಪ್ರಚಾರ ಮಾಡುತ್ತೇವೆ. ಉಪ‌ ಚುನಾವಣೆ ಜತೆಗೆ ಮುಂದಿನ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಇಂದು ( ಅಕ್ಟೋಬರ್ 3) ಬಿಜೆಪಿ ಕೋರ್ ಕಮಿಟಿ ಸಭೆ ಹಿನ್ನೆಲೆ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು, ಕೆಲಸಗಳ ಬಗ್ಗೆ ಪ್ರಚಾರ ಮಾಡುವ ಕೆಲಸ ಮಾಡ್ತೀವಿ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ನೀಡುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 30ರಂದು ಹಾನಗಲ್, ಸಿಂದಗಿ ಉಪಚುನಾವಣೆ ನಡೆಯುತ್ತಿದೆ. 2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಎರಡು ಕ್ಷೇತ್ರದಲ್ಲಿ ಉತ್ತಮ ವಾತಾವರಣ ಬಿಜೆಪಿಗೆ ಇದೆ. ಈಗಾಗಲೇ ಉಪ ಚುನಾವಣೆ ಬಗ್ಗೆ ಸಿದ್ದತೆಯನ್ನು ನಾವು ಪ್ರಾರಂಭ ಮಾಡಿದ್ದೇವೆ. ಇಂದು 2 ಗಂಟೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ:
ಕೊನೆಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​​ ಭೇಟಿ ಮಾಡಿದ ಶಾಸಕ ಅರವಿಂದ್ ಬೆಲ್ಲದ್

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳಿಗೆ ಬೈಎಲೆಕ್ಷನ್‌; ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರೆಡಿಯಾಗಲಿದೆ ಫೈನಲ್ ಲಿಸ್ಟ್

Published On - 10:23 am, Sun, 3 October 21