ಕರ್ನಾಟಕದಲ್ಲಿ ಕಾನೂನು, ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ; ನಾವು ಶಾಂತಿ, ಭದ್ರತೆ, ಅಭಿವೃದ್ಧಿ ಸಿದ್ಧಾಂತ ನಂಬುತ್ತೇವೆ: ಸಿಎಂ ಬೊಮ್ಮಾಯಿ

ಸರ್ಕಾರದ ನಡೆ ಖಂಡಿಸಿ ಪ್ರಗತಿಪರರಿಂದ ಸಿಎಂ​ಗೆ ಪತ್ರದ ಬಗ್ಗೆ ಮಾತನಾಡಿದ ಅವರು ಪ್ರಗತಿಪರರ ಪತ್ರದ ವಾಸ್ತವಾಂಶ ಅರಿತು ನಿರ್ಧಾರ ಕೈಗೊಳ್ಳುತ್ತೇನೆ. ಯಾವೆಲ್ಲ ನಿರ್ಧಾರ ತೆಗೆದುಕೊಳ್ಳಬೇಕೆಂದು ಯೋಚಿಸುತ್ತೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾನೂನು, ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ; ನಾವು ಶಾಂತಿ, ಭದ್ರತೆ, ಅಭಿವೃದ್ಧಿ ಸಿದ್ಧಾಂತ ನಂಬುತ್ತೇವೆ: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Mar 30, 2022 | 12:40 PM

ಬೆಂಗಳೂರು: ಹಲಾಲ್ ಮಾಂಸ ನಿಷೇಧ ಮಾಡಲು ಅಭಿಯಾನ ವಿಚಾರವಾಗಿ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಇಂತಹ ಸನ್ನಿವೇಶ ಈಗಷ್ಟೇ ಆರಂಭವಾಗಿದೆ. ಇದರ ಸಮಗ್ರತೆಯನ್ನು ಗಮನಿಸಬೇಕಾಗುತ್ತದೆ. ಕೆಲವು ನಿಯಮಗಳು, ಆಚರಣೆಗಳು ಮೊದಲಿಂದಲೂ ಇವೆ. ನಿಯಮಗಳು, ಆಚರಣೆಗಳಂತೆ ನಡೆದುಕೊಂಡು ಹೋಗ್ತಿದೆ. ಧಾರ್ಮಿಕ ದತ್ತಿ ಕಾಯ್ದೆಯ ನಿಯಮದ ಬಗ್ಗೆ ಗಂಭೀರ ಆಕ್ಷೇಪ ಇದೆ. ಗಂಭೀರ ಆಕ್ಷೇಪಗಳ ಬಗ್ಗೆ ಅವಲೋಕನ ಮಾಡುತ್ತೇವೆ. ನಮ್ಮ ಸರ್ಕಾರ ಅಭಿವೃದ್ಧಿಯತ್ತ ಮಾತ್ರ ಗಮನ ಕೊಡುತ್ತೆ. ಬಲಪಂಥೀಯ ಎಡಪಂಥೀಯ ಅನ್ನೋದು ಇಲ್ಲ. ನಾವು ಶಾಂತಿ, ಜನರ ಭದ್ರತೆ, ಅಭಿವೃದ್ಧಿ ಸಿದ್ಧಾಂತ ನಂಬುತ್ತೇವೆ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ. ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನಡೆ ಖಂಡಿಸಿ ಪ್ರಗತಿಪರರಿಂದ ಸಿಎಂ​ಗೆ ಪತ್ರದ ಬಗ್ಗೆ ಮಾತನಾಡಿದ ಅವರು ಪ್ರಗತಿಪರರ ಪತ್ರದ ವಾಸ್ತವಾಂಶ ಅರಿತು ನಿರ್ಧಾರ ಕೈಗೊಳ್ಳುತ್ತೇನೆ. ಯಾವೆಲ್ಲ ನಿರ್ಧಾರ ತೆಗೆದುಕೊಳ್ಳಬೇಕೆಂದು ಯೋಚಿಸುತ್ತೇವೆ ಎಂದು ತಿಳಿಸಿದ್ದಾರೆ.

ಹಿಂದೂಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್​ಗೆ ಮನವಿ​

ಹಲಾಲ್ ಮಾಂಸ ನಿಷೇಧ ಮಾಡಲು ಅಭಿಯಾನ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ನೀಡಿದರೆ ಕ್ರಮ ಕೈಗೊಳ್ಳುತ್ತೇವೆ. ಯುಗಾದಿ‌ ಹಿನ್ನೆಲೆ ಹಲಾಲ್ ಮಾಂಸ ಖರೀದಿ ಬಗ್ಗೆ ಚರ್ಚೆ ಆಗುತ್ತಿದೆ. ಹಲಾಲ್ ನಮ್ಮ ದೇವರಿಗೆ ಆಗಲ್ಲ ಎಂದು ಚರ್ಚೆ ನಡೆದಿದೆ. ಹಲಾಲ್ ಮಾಂಸ ಖರೀದಿಸಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಚರ್ಚೆ ನಡೆಯುವುದರಲ್ಲಿ ತಪ್ಪೇನೂ ಇಲ್ಲ. ಇದು ವಿಕೋಪಕ್ಕೆ ಹೋಗಬಾರದು ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗೃಹ ಸಚಿವರನ್ನು ಹರ್ಷ ಮುತಾಲಿಕ್, ಕಾಳಿ ಸ್ವಾಮೀಜಿ ಭೇಟಿಯಾಗಿದ್ದಾರೆ. ಹಿಂದೂಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್​ಗೆ ಮನವಿ​ ಮಾಡಿದ್ದಾರೆ. 30 ದಿನದಲ್ಲಿ ಕೇಸ್ ವಾಪಸ್​ ಪಡೆಯಲು ಗೃಹ ಸಚಿವರಿಗೆ ಮನವಿ ಮಾಡಲಾಗಿದೆ. ಬೆಂಗಳೂರಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಹಿಂದೂ ಧರ್ಮ ಸರ್ವೇ ಜನಾಃ ಸುಖಿನೋ ಭವಂತು ಎನ್ನುತ್ತೆ: ಹೆಚ್​ಡಿ ಕುಮಾರಸ್ವಾಮಿ

ನನ್ನ ಮನೆಗೂ ಅರ್ಚಕರು ಭೇಟಿ ನೀಡಿದ್ದರು. ಧರ್ಮದ ಪ್ರಚಾರ ನೀವು ಮಾಡಿ ಎಂದು ಹೇಳಿದ್ದೇನೆ. ಹಿಂದೂ ಧರ್ಮ ಸರ್ವೇ ಜನಾಃ ಸುಖಿನೋ ಭವಂತು ಎನ್ನುತ್ತೆ. ಹಲಾಲ್ ಮಟನ್ ತಗೋಬೇಡಿ. ಮುಸ್ಲಿಮರ ಅಂಗಡಿಗೆ ಹೋಗಬೇಡಿ ಅಂತ ಹೇಳಬೇಡಿ. ಸ್ವಾಮೀಜಿಗಳು ಧರ್ಮ ಪ್ರಚಾರ ಮಾಡಬೇಕು ಅದನ್ನು ಮಾಡಲಿ ಎಂದು ಹಲಾಲ್ ಮಾಂಸ ನಿಷೇಧ ಮಾಡಲು ಅಭಿಯಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಕೋಲಾರದ ಶಿವಾರ ಪಟ್ಟಣದಲ್ಲಿ ಮೂರ್ತಿ ಕೆತ್ತನೆ ಮಾಡ್ತಾರೆ. 30 ವರ್ಷಗಳಿಂದ ಮುಸ್ಲಿಂ ಕುಟುಂಬವೇ ಮೂರ್ತಿ ಕೆತ್ತುತ್ತಿದೆ. 15 ಕುಟುಂಬಗಳು 30 ವರ್ಷದಿಂದ ಸೇವೆ ಮಾಡುತ್ತಿದ್ದಾರೆ. ಇವರನ್ನ ಯಾವಾಗ ಬಹಿಷ್ಕಾರ ಮಾಡ್ತೀರಾ? ನಮ್ಮ ಸ್ಪೀಕರ್ ಸದನದ ಪೀಠದಲ್ಲಿ ಹೇಳಿದ್ರು. ನಾವೆಲ್ಲರೂ ಆರ್‌ಎಸ್‌ಎಸ್‌ ಒಪ್ಪುತ್ತೇವೆ ಅಂತ ಹೇಳಿದ್ರು. ಪೀಠದಲ್ಲಿ ಕುಳಿತು ಹೀಗೆ ಹೇಳಲು ನಾಚಿಕೆ ಆಗಬೇಕು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲಾಲ್ ವಿಚಾರ ವಿಧಾನಸಭೆಯಲ್ಲಿ ಚರ್ಚೆಗೆ ಬಂದಿಲ್ಲ. ಬಂದರೆ ಚರ್ಚೆ ಮಾಡಬಹುದು. ಸಮಾಜದಲ್ಲಿ ಅಶಾಂತಿಗೆ ಎಡೆ ಮಾಡಿಕೊಟ್ಟ ವಿಚಾರಕ್ಕೆ ಸಲಹೆ ನೀಡಬೇಕು. ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಸಲಹೆ ಕೊಡುವೆ ಎಂದು ಬಳಿಕ ಅವರು ರಾಮನಗರದಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ವರ್ಷ ಪ್ರಾರಂಭವಾಗಿದೆ. ರಾಷ್ಟ್ರೀಯ ಪಕ್ಷಗಳ ನಾಯಕರು ಕರ್ನಾಟಕಕ್ಕೆ ಬರುತ್ತಾರೆ. ರಾಜ್ಯದ ನದಿ ನೀರಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ನದಿ ನೀರಿನ ಸಮಸ್ಯೆಗಳನ್ನು ಕಡೆಗಣಿಸಿದ್ದಾರೆ. ಅದನ್ನ ಸರಿಪಡಿಸಿಕೊಂಡು ಬಂದು ಮತ ಕೇಳುವುದು ಧರ್ಮ. 2 ರಾಷ್ಟ್ರೀಯ ಪಕ್ಷಗಳು ರಾಜ್ಯವನ್ನ ನಗಣ್ಯವಾಗಿ ಪರಿಗಣಿಸಿವೆ. ನಮ್ಮನ್ನ ನಿರ್ಲಕ್ಷ್ಯ ಭಾವನೆಯಿಂದ ಕಂಡಿದ್ದಾರೆ. ಈ ವಿಚಾರ ಇಟ್ಟುಕೊಂಡು ನಾವು ಜನರ ಬಳಿ ಹೋಗುತ್ತೇವೆ. ಗುಜರಾತ್ ಜತೆಯೇ ರಾಜ್ಯದ ಚುನಾವಣೆ ನಡೆಯಬಹುದು. ಚುನಾವಣೆ ಯಾವಾಗ ನಡೆದರೂ ನಾವು ರೆಡಿ ಇದ್ದೇವೆ ಎಂದು ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ- ಶಾದಿ ಮಹಲ್ ಮಾತ್ರ ನಿಲ್ಲಿಸ್ತೇವೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಇದನ್ನೂ ಓದಿ: ಹಲಾಲ್ VS ಜಟ್ಕಾ ಕಟ್: ಯುಗಾದಿಗೆ ಮೊದಲು ಭುಗಿಲೆದ್ದ ಮತ್ತೊಂದು ವಿವಾದ, ಎರಡೂ ಪ್ರಾಣಿವಧೆ ಪದ್ಧತಿಗಳ ವಿವರ ಇಲ್ಲಿದೆ

Published On - 12:38 pm, Wed, 30 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ