AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್‌ ಕಾಯಿನ್ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬಸವರಾಜ ಬೊಮ್ಮಾಯಿ ಚರ್ಚೆ

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜೊತೆ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ.

ಬಿಟ್‌ ಕಾಯಿನ್ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬಸವರಾಜ ಬೊಮ್ಮಾಯಿ ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Nov 13, 2021 | 6:32 PM

Share

ಬೆಂಗಳೂರು: ಬಿಟ್‌ ಕಾಯಿನ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಚರ್ಚೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬೊಮ್ಮಾಯಿ ಇಂದು (ನವೆಂಬರ್ 13) ಚರ್ಚೆ ಮಾಡಿದ್ದಾರೆ. ಬೆಳಗ್ಗೆ, ಮಧ್ಯಾಹ್ನ 2 ಸಲ ಅಧಿಕಾರಿಗಳನ್ನು ಕರೆಸಿ ಚರ್ಚೆ ನಡೆಸಲಾಗಿದೆ. ತನಿಖೆಯ ಪ್ರಗತಿ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜೊತೆ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ.

ಅನುಗ್ರಹ ಯೋಜನೆ ಮುಂದುವರಿಸಿದ್ದಕ್ಕೆ ಸಿಎಂಗೆ ಸನ್ಮಾನ ಮಾಡಲಾಗಿದೆ. ಕುರಿ, ಮೇಕೆ ಆಕಸ್ಮಿಕ ಮರಣಕ್ಕೆ ಪರಿಹಾರ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದುವರಿಸಿದ್ದಕ್ಕೆ ಸನ್ಮಾನ ಮಾಡಲಾಗಿದೆ. ಗೃಹಕಚೇರಿ ಕೃಷ್ಣಾದಲ್ಲಿ ಶರಣು ತಳ್ಳಿಕೇರಿಯಿಂದ ಸಿಎಂಗೆ ಸನ್ಮಾನ ಮಾಡಲಾಗಿದೆ. ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮನವಳ್ಳಿ, ಬಸವರಾಜ್ ದಡೇಸುಗೂರು ಕಾರ್ಯಕ್ರಮದಲ್ಲಿ ಉಪಸ್ಥಿತಿ ವಹಿಸಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ ಆಗಿದೆ. ಎನ್​ಇಪಿಯಲ್ಲಿ ಸಾಂಸ್ಕೃತಿಕ ಶಿಕ್ಷಣ, ದೈಹಿಕ ಶಿಕ್ಷಣ, ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ ಇಂದು (ನವೆಂಬರ್ 13) ಹೇಳಿಕೆ ನೀಡಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿರುವ ವ್ಯವಸ್ಥೆ ಖಾಸಗಿ ವಿವಿಗಳಲ್ಲೂ ಇಲ್ಲ. ಇಡೀ ಭಾರತ ದೇಶವೇ ಬೆಂಗಳೂರಿನಲ್ಲಿ ತಿರುಗಿ ನೋಡುತ್ತಿದೆ. ತಂತ್ರಜ್ಞಾನ, ಆವಿಷ್ಕಾರ ಕ್ಷೇತ್ರದಲ್ಲಿ ಬೆಂಗಳೂರು 23ನೇ ಸ್ಥಾನದಲ್ಲಿ ಇದೆ ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು. ವಿಶ್ವದ ಮೂಲೆಮೂಲೆಗಳಲ್ಲೂ ಕನ್ನಡಿಗ ಸಾಧಕರಿದ್ದಾರೆ. ವಿದ್ಯಾರ್ಥಿಗಳು ಇಂಥವರನ್ನು ನೋಡಿ ಪ್ರೇರೇಪಿತರಾಗಬೇಕು. ನಾಡು ನುಡಿ ಚೆನ್ನಾಗಿರಬೇಕೆಂದರೆ ಸದೃಢವಾಗಿ ಬೆಳೆಯಬೇಕು ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಟ್​ಕಾಯಿನ್ ಪ್ರಕರಣ ತನಿಖೆ ಬಗ್ಗೆ ಪ್ರಧಾನಿ ಮೋದಿ ಮೇಲೆ ನಂಬಿಕೆ ಇಡೋಣ: ಹೆಚ್​ಡಿ ಕುಮಾರಸ್ವಾಮಿ

ಇದನ್ನೂ ಓದಿ: ಹೋಟೆಲ್, ಆಲ್ಕೋಹಾಲ್​ಗೆ ದಿನಕ್ಕೆ 3 ಲಕ್ಷ ಖರ್ಚು ಮಾಡುತ್ತಿದ್ದ ಶ್ರೀಕಿಯ ಮೊದಲ ದೊಡ್ಡ ಬಿಟ್​ಕಾಯಿನ್ ಕನ್ನ ನೆದರ್​ಲೆಂಡ್ಸ್​ನಲ್ಲಿ

Published On - 6:12 pm, Sat, 13 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ