ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಅಸಮಾಧಾನ

| Updated By: ganapathi bhat

Updated on: Feb 22, 2022 | 8:00 PM

ರಾಜಕಾರಣದ ಮುಸುಕು ಕಾಂಗ್ರೆಸ್ ಪಕ್ಷದ ಮೇಲೆ ಬಿದ್ದಿದೆ. ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತಿರುಚಿ ಬಳಕೆ ಮಾಡಿಕೊಳ್ತಿದ್ದಾರೆ. ಕಾಂಗ್ರೆಸ್ ರಾಜಕಾರಣಕ್ಕಾಗಿ ಹೇಳಿಕೆ ತಿರುಚಿಕೊಂಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಅಸಮಾಧಾನ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಸದನ ಶುಕ್ರವಾರದ ವರೆಗೂ ನಡೆಯಬೇಕಿತ್ತು. ಆದರೆ ಬೇಸರದ ಸಂಗತಿ ಇವತ್ತೆ ಮೊಟಕುಗೊಳಿಸಬೇಕಾಯಿತು. ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ. ಇವತ್ತು ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ವಿಚಾರ ಎತ್ತಬಹುದಾಗಿತ್ತು. ಆದರೆ ಅದನ್ನು ಮಾಡಲಿಲ್ಲ. ಹೈಕೋರ್ಟ್ ನಲ್ಲಿ ಹಿಜಾಬ್ ವಿಚಾರ ವಿಚಾರಣೆ ನಡೆಯುತ್ತಿದೆ. ಮಧ್ಯಂತರ ಆದೇಶ ಮಾಡಿದೆ. ಅದನ್ನ ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಆದರೆ, ಕಾಂಗ್ರೆಸ್‌ನವರಿಗೆ ರಾಜಕಾರಣವೇ ಪ್ರಮುಖವಾಗಿತ್ತು ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಸದನದಲ್ಲಿ ಯಾವುದೇ ವಿಚಾರ ಚರ್ಚೆ ಮಾಡಲು ಬಿಡಲಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಹಳ ವರ್ಷದಿಂದ ರಾಜಕೀಯದಲ್ಲಿ ಇದ್ದಾರೆ. ಆದರೆ ಅವರ ಅನುಭವ ಈಗ ಎಲ್ಲಿ ಹೋಯಿತು. ಅನುಭವವನ್ನು ರಾಜ್ಯದ ಜನರ ಹಿತಕ್ಕೆ ಕೆಲಸ ಮಾಡಬೇಕಿತ್ತು. ರಾಜಕಾರಣದ ಮುಸುಕು ಕಾಂಗ್ರೆಸ್ ಪಕ್ಷದ ಮೇಲೆ ಬಿದ್ದಿದೆ. ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತಿರುಚಿ ಬಳಕೆ ಮಾಡಿಕೊಳ್ತಿದ್ದಾರೆ. ಕಾಂಗ್ರೆಸ್ ರಾಜಕಾರಣಕ್ಕಾಗಿ ಹೇಳಿಕೆ ತಿರುಚಿಕೊಂಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈಶ್ವರಪ್ಪ ಭಾಷಣವನ್ನು ಸೆಲೆಕ್ಟೀವ್ ಆಗಿ ತೆಗೆದುಕೊಂಡಿದ್ದಾರೆ. ಮಾರ್ಚ್ 4ರಂದು ಬಜೆಟ್ ಮಂಡನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗದಿಂದ ದೂರು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದವರಿಗೆ ಬೇರೆ ಇನ್ನೇನು ಕೆಲಸ ಇದೆ. ಪ್ರತಿಭಟನೆ, ಪಾದಯಾತ್ರೆ ಅಂತ ಮಾಡ್ತಾ ಇರಲಿ ಬಿಡಿ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ವ್ಯವಸ್ಥೆ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ: ಮೌನವಾಗಿ ನಿಂತು ಪ್ರತಿಭಟಿಸಿದ ಕಾಂಗ್ರೆಸ್ ಸದಸ್ಯರು

ಇದನ್ನೂ ಓದಿ: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಕಾಂಗ್ರೆಸ್​ ಗದ್ದಲವೇ ಕೊಲೆಗೆ ಕಾರಣ ಎಂದು ಆರೋಪಿಸಿದ ಸಿಎಂ ಬೊಮ್ಮಾಯಿ