ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡಲು ಮಾನದಂಡ ನಿಗದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

| Updated By: ganapathi bhat

Updated on: Jan 10, 2022 | 10:57 PM

ಪುನರಾವರ್ತಿತ ಕಾಯ್ದೆಗಳನ್ನು ಗುರುತಿಸುವ ಕೆಲಸ ಆಗಬೇಕು. ವಿವಿಧ ಯೋಜನೆಗಳಿಗೆ ಬಿಡುಗಡೆಯಾಗಿ ಉಳಿದಿರುವ ಮೊತ್ತ, ಬ್ಯಾಂಕ್ ಖಾತೆಗಳಲ್ಲಿ ಉಳಿದಿರುವ ಮೊತ್ತ ಕ್ಲಿಯರ್​ ಆಗಬೇಕು ಎಂದು ಆಡಳಿತ ಸುಧಾರಣಾ ಸಭೆಯಲ್ಲಿ ಸಿಎಂ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡಲು ಮಾನದಂಡ ನಿಗದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ಇಲಾಖೆ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡಲು ಮಾನದಂಡ ನಿಗದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸೂಚನೆ ನೀಡಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ಸೂಚನೆ ಕೊಡಲಾಗಿದೆ. ಆಡಳಿತ ಸುಧಾರಣೆ ಕುರಿತು ಸಭೆಯಲ್ಲಿ ಬೊಮ್ಮಾಯಿ ಸೂಚಿಸಿದ್ದಾರೆ. ವಿಳಂಬವಿಲ್ಲದೆ ಸುಲಭವಾಗಿ ಸೌಲಭ್ಯಗಳು ಸಿಗುವಂತಾಗಬೇಕು. ಜನರ ಅರ್ಜಿಗಳಿಗೆ ಕೆಲವೇ ಗಂಟೆಗಳಲ್ಲಿ ಉತ್ತರಿಸುವಂತಿರಬೇಕು. ಮೇಲ್ಮಟ್ಟ, ಕೆಳಮಟ್ಟದಲ್ಲಿ ಜವಾಬ್ದಾರಿಗಳನ್ನು ನಿಗದಿಪಡಿಸಬೇಕು ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತ್​​ಗಳಿಗೆ ಕಂದಾಯ ಇಲಾಖೆ ಕೆಲ ಹೊಣೆ ವಹಿಸಬೇಕು. ಪ್ರಾದೇಶಿಕ ಆಯುಕ್ತರು ಬೃಹತ್ ನೀರಾವರಿ, ಭೂಸ್ವಾಧೀನ ಮುಂತಾದ ವಿಷಯ ನಿರ್ವಹಿಸಬೇಕು. ಕಂದಾಯ ಇಲಾಖೆ ಸುಧಾರಣೆಯಾದರೆ ಕೆಲಸ ಕಡಿಮೆ ಆಗುತ್ತದೆ. ಶೇಕಡಾ 40ರಷ್ಟು ಸರ್ಕಾರಿ ಕೆಲಸ ಕಡಿಮೆಯಾದಂತಾಗುತ್ತದೆ. ನೀರಾವರಿ, PWD ಮುಂತಾದ ಅಭಿವೃದ್ಧಿ ಯೋಜನೆ ಪೂರ್ಣಗೊಳಿಸಬೇಕು. ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ. ಪುನರಾವರ್ತಿತ ಕಾಯ್ದೆಗಳನ್ನು ಗುರುತಿಸುವ ಕೆಲಸ ಆಗಬೇಕು. ವಿವಿಧ ಯೋಜನೆಗಳಿಗೆ ಬಿಡುಗಡೆಯಾಗಿ ಉಳಿದಿರುವ ಮೊತ್ತ, ಬ್ಯಾಂಕ್ ಖಾತೆಗಳಲ್ಲಿ ಉಳಿದಿರುವ ಮೊತ್ತ ಕ್ಲಿಯರ್​ ಆಗಬೇಕು ಎಂದು ಆಡಳಿತ ಸುಧಾರಣಾ ಸಭೆಯಲ್ಲಿ ಸಿಎಂ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

ಲಾಲ್​ ಬಹದ್ದೂರ್​ ಶಾಸ್ತ್ರಿ ಪುಣ್ಯತಿಥಿ ಪ್ರಯುಕ್ತ ಮಾಲಾರ್ಪಣೆ ಮಾಡಲಿರುವ ಸಚಿವ ಅಶ್ವತ್ಥ್ ನಾರಾಯಣ

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ದೃಢ ಹಿನ್ನೆಲೆ ನಾಳೆ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಸಚಿವ ಅಶ್ವತ್ಥ್ ನಾರಾಯಣ ಮಾಲಾರ್ಪಣೆ ಮಾಡಲಿದ್ದಾರೆ. ಲಾಲ್​ ಬಹದ್ದೂರ್​ ಶಾಸ್ತ್ರಿ ಪುಣ್ಯತಿಥಿ ಪ್ರಯುಕ್ತ ಮಾಲಾರ್ಪಣೆ ಮಾಡಲಾಗುವುದು. ಸಿಎಂ ಸೂಚನೆ ಮೇರೆಗೆ ನಾಳೆ ಸಚಿವ ಅಶ್ವತ್ಥ್​ರಿಂದ ಮಾಲಾರ್ಪಣೆ ಮಾಡಲಾಗುವುದು.

ಬಸವರಾಜ ಬೊಮ್ಮಾಯಿಗೆ ಕೊರೊನಾ ದೃಢ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ (Basavaraj Bommai) ಕೊರೊನಾ ಸೋಂಕು ದೃಢವಾಗಿದೆ (Covid19 Positive). ಹೋಮ್​ ಕ್ವಾರಂಟೈನ್​ನಲ್ಲಿರುವ ಬಸವರಾಜ ಬೊಮ್ಮಾಯಿ, ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ (Coronavirus) ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್​ ಮೂಲಕ ಮಾಹಿತಿ ನೀಡಿ ಮನವಿ ಮಾಡಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ‌ ಕೊವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆ ಸಿಎಂ ಅಧಿಕೃತ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ನಿಗದಿಯಾಗಿದ್ದ ಕಾವೇರಿ ಕಾಮಗಾರಿ ಪರಿಶೀಲನಾ ಸಭೆಗಳು ಕೂಡಾ ರದ್ದುಗೊಂಡಿವೆ

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್​ ದೃಢವಾಗಿದೆ. ಇಂದು (ಜನವರಿ 10) ಸಿಎಂ ಬೊಮ್ಮಾಯಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಸಾಹಿತಿ ಡಾ. ಚಂದ್ರಶೇಖರ ಪಾಟೀಲ ಅಂತ್ಯಕ್ರಿಯೆಯಲ್ಲಿ ಭಾಗಿ ಆಗಿದ್ದರು. ಬೂಸ್ಟರ್​ ಡೋಸ್ ಕೊರೊನಾ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿದ್ದರು. ಆಡಳಿತ ಸುಧಾರಣೆ ಕುರಿತು ಸಭೆ ನಡೆಸಿದ್ದರು. ವಿಶ್ರಾಂತ ಕುಲಪತಿಗಳ ನಿಯೋಗದ ಜತೆ ಸಭೆಯಲ್ಲಿ ಭಾಗಿಯಾಗಿದ್ದರು. ಈ ಮಧ್ಯೆ, ಬಸವರಾಜ ಬೊಮ್ಮಾಯಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಈಗಾಗಲೇ ಕರ್ನಾಟಕ ಬಿಜೆಪಿಯ ಆರ್. ಅಶೋಕ್, ಬಿ.ಸಿ. ನಾಗೇಶ್​, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೊವಿಡ್19 ಸೋಂಕಿತರಾಗಿದ್ದಾರೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 11,698 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಇದನ್ನೂ ಓದಿ: ಆರೋಗ್ಯ ಸಚಿವರ ಬಾಮೈದನಿಂದಲೇ ಕೊರೊನಾ ನಿಯಮ ಉಲ್ಲಂಘನೆ; 500 ಮಹಿಳೆಯರನ್ನು ಸೇರಿಸಿ ಓಂಶಕ್ತಿ ಯಾತ್ರೆ ಆಯೋಜನೆ

Published On - 10:54 pm, Mon, 10 January 22