AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ರಾಯಚೂರು, ಯಾದಗಿರಿ ಹಾಗೂ ಕಲಬುರಗಿಯ ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ನಿರ್ದಿಷ್ಟ ಕ್ರಮಗಳನ್ನು ಜರುಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಹಾಗೂ ಈ ಸಲದ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿರಿಸುವ ಬಗ್ಗೆ ತಿಳಿಸಿದ್ದಾರೆ.

ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Jan 07, 2022 | 9:03 PM

Share

ಬೆಂಗಳೂರು: ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಬಜೆಟ್​​ನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಮುಂದಿನ ಬಜೆಟ್​ನಲ್ಲಿ ಆದ್ಯತೆ ಕೊಡುವುದಾಗಿ ಭರವಸೆ ನೀಡಿದ್ದಾರೆ. ರಾಯಚೂರು ಜಿಲ್ಲೆ, ಯಾದಗಿರಿ ಜಿಲ್ಲೆ, ಕಲಬುರಗಿ ಜಿಲ್ಲೆ, ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅನುದಾನ ನೀಡಲಾಗುವುದು. ಆರೋಗ್ಯ, ಶಿಕ್ಷಣ, ಜೀವನದ ಗುಣಮಟ್ಟ ಸುಧಾರಣೆಗೆ ಅನುದಾನ ಕೊಡಲಾಗುವುದು. ಬಜೆಟ್​ನಲ್ಲಿ ಅಗತ್ಯ ಅನುದಾನ ಮೀಸಲಿಡುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದಿಷ್ಟ ಕ್ರಮಗಳ ಭರವಸೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಮುಂದಿನ ಬಜೆಟ್​ನಲ್ಲಿ ಆದ್ಯತೆ ಕೊಡುವ ಭರವಸೆ ನೀಡಿದ್ದಾರೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿಯ ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ನಿರ್ದಿಷ್ಟ ಕ್ರಮಗಳನ್ನು ಜರುಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಹಾಗೂ ಈ ಸಲದ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿರಿಸುವ ಬಗ್ಗೆ ತಿಳಿಸಿದ್ದಾರೆ.

ನೀತಿ ಆಯೋಗದ (ಎಸ್.ಜಿ.ಡಿ) ಸಲಹೆಗಾರರಾದ ಸನ್ಯುಕ್ತ ಸಮದ್ದಾರ್ ಅವರೊಂದಿಗೆ ಇಂದು ನಡೆದ ಸಭೆಯಲ್ಲಿ ಸಿಎಂ ಈ ಬಗ್ಗೆ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಆರೋಗ್ಯ, ಶಿಕ್ಷಣ ಹಾಗೂ ಜೀವನದ ಗುಣಮಟ್ಟದ ಸುಧಾರಣೆಗೆ ಅಗತ್ಯ ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಮೀಸಲಿರಿಸುವ ಭರವಸೆ ಕೊಟ್ಟಿದ್ದಾರೆ. ಬಡತನವನ್ನು ಕೇವಲ ಆದಾಯದ ಮೇಲೆ ಅವಲಂಬಿಸದೆ, ಆರೋಗ್ಯ, ಶಿಕ್ಷಣ ಹಾಗೂ ಜೀವನ ಗುಣಮಟ್ಟದಂತಹ ಬಹು ಆಯಾಮಗಳನ್ನು ಆಧರಿಸಿ, ಬಡತನದ ಗುಣಮಟ್ಟ ಹಾಗೂ ಪರಿಮಾಣವನ್ನು ನಿರ್ಧರಿಸಲಾಗುತ್ತದೆ ಎಂದು ನೀತಿ ಆಯೋಗದ ಸಲಹೆಗಾರರು ವಿವರಿಸಿದ್ದಾರೆ.

2019ರಲ್ಲಿ 66 ಇದ್ದ ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕ ಪ್ರಸ್ತುತ 72ಕ್ಕೆ ಏರಿಕೆ ಕಂಡಿದೆ. ಆರೋಗ್ಯ ವಿಮೆ, ಹದಿಹರೆಯದ ಹೆಣ್ಣುಮಕ್ಕಳಲ್ಲಿ ಅಪೌಷ್ಟಿಕತೆ, ಗರ್ಭಿಣಿ ಮಹಿಳೆಯರಲ್ಲಿ ಅಪೌಷ್ಟಿಕತೆ, ಗ್ರಾಮೀಣ ಮನೆಗಳಿಗೆ ಕುಡಿಯುವ ನೀರು ಸರಬರಾಜು ಸಮಸ್ಯೆ ಇದೆ. ಸ್ವಚ್ಛ ಅಡುಗೆ ಅನಿಲ ಪೂರೈಕೆಯಲ್ಲಿ ಕರ್ನಾಟಕ ರಾಜ್ಯ ಸುಧಾರಣೆ ಕಾಣಬೇಕಿದೆ. ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಇವುಗಳ ಬಗ್ಗೆ ಕೇಂದ್ರೀಕೃತವಾಗಿ ಕೆಲಸ ಮಾಡಲು ಬಹು ಆಯಾಮ ಬಡತನ ಸೂಚಕಗಳು (ಎಂ.ಪಿ.ಐ) ಸಹಾಯಕವಾಗಿವೆ ಎಂದು ನೀತಿ ಆಯೋಗದ ಸಲಹೆಗಾರರು ತಿಳಿಸಿದ್ದಾರೆ.

ಈ ಕಾರ್ಯಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಸಹಕಾರವನ್ನು ಪಡೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ಸಚಿವ ಮುನಿರತ್ನ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಅಮಿತಾ ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಕೊರೊನಾ ಎಲ್ಲರಿಗೂ ಒಂದೇ ಅಲ್ವಾ: ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆ ಸಿದ್ಧತೆ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್