ಬೆಂಗಳೂರು: ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಮುಂದಿನ ಬಜೆಟ್ನಲ್ಲಿ ಆದ್ಯತೆ ಕೊಡುವುದಾಗಿ ಭರವಸೆ ನೀಡಿದ್ದಾರೆ. ರಾಯಚೂರು ಜಿಲ್ಲೆ, ಯಾದಗಿರಿ ಜಿಲ್ಲೆ, ಕಲಬುರಗಿ ಜಿಲ್ಲೆ, ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅನುದಾನ ನೀಡಲಾಗುವುದು. ಆರೋಗ್ಯ, ಶಿಕ್ಷಣ, ಜೀವನದ ಗುಣಮಟ್ಟ ಸುಧಾರಣೆಗೆ ಅನುದಾನ ಕೊಡಲಾಗುವುದು. ಬಜೆಟ್ನಲ್ಲಿ ಅಗತ್ಯ ಅನುದಾನ ಮೀಸಲಿಡುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದಿಷ್ಟ ಕ್ರಮಗಳ ಭರವಸೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಮುಂದಿನ ಬಜೆಟ್ನಲ್ಲಿ ಆದ್ಯತೆ ಕೊಡುವ ಭರವಸೆ ನೀಡಿದ್ದಾರೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿಯ ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ನಿರ್ದಿಷ್ಟ ಕ್ರಮಗಳನ್ನು ಜರುಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಹಾಗೂ ಈ ಸಲದ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿರಿಸುವ ಬಗ್ಗೆ ತಿಳಿಸಿದ್ದಾರೆ.
ನೀತಿ ಆಯೋಗದ (ಎಸ್.ಜಿ.ಡಿ) ಸಲಹೆಗಾರರಾದ ಸನ್ಯುಕ್ತ ಸಮದ್ದಾರ್ ಅವರೊಂದಿಗೆ ಇಂದು ನಡೆದ ಸಭೆಯಲ್ಲಿ ಸಿಎಂ ಈ ಬಗ್ಗೆ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಆರೋಗ್ಯ, ಶಿಕ್ಷಣ ಹಾಗೂ ಜೀವನದ ಗುಣಮಟ್ಟದ ಸುಧಾರಣೆಗೆ ಅಗತ್ಯ ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಮೀಸಲಿರಿಸುವ ಭರವಸೆ ಕೊಟ್ಟಿದ್ದಾರೆ. ಬಡತನವನ್ನು ಕೇವಲ ಆದಾಯದ ಮೇಲೆ ಅವಲಂಬಿಸದೆ, ಆರೋಗ್ಯ, ಶಿಕ್ಷಣ ಹಾಗೂ ಜೀವನ ಗುಣಮಟ್ಟದಂತಹ ಬಹು ಆಯಾಮಗಳನ್ನು ಆಧರಿಸಿ, ಬಡತನದ ಗುಣಮಟ್ಟ ಹಾಗೂ ಪರಿಮಾಣವನ್ನು ನಿರ್ಧರಿಸಲಾಗುತ್ತದೆ ಎಂದು ನೀತಿ ಆಯೋಗದ ಸಲಹೆಗಾರರು ವಿವರಿಸಿದ್ದಾರೆ.
2019ರಲ್ಲಿ 66 ಇದ್ದ ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕ ಪ್ರಸ್ತುತ 72ಕ್ಕೆ ಏರಿಕೆ ಕಂಡಿದೆ. ಆರೋಗ್ಯ ವಿಮೆ, ಹದಿಹರೆಯದ ಹೆಣ್ಣುಮಕ್ಕಳಲ್ಲಿ ಅಪೌಷ್ಟಿಕತೆ, ಗರ್ಭಿಣಿ ಮಹಿಳೆಯರಲ್ಲಿ ಅಪೌಷ್ಟಿಕತೆ, ಗ್ರಾಮೀಣ ಮನೆಗಳಿಗೆ ಕುಡಿಯುವ ನೀರು ಸರಬರಾಜು ಸಮಸ್ಯೆ ಇದೆ. ಸ್ವಚ್ಛ ಅಡುಗೆ ಅನಿಲ ಪೂರೈಕೆಯಲ್ಲಿ ಕರ್ನಾಟಕ ರಾಜ್ಯ ಸುಧಾರಣೆ ಕಾಣಬೇಕಿದೆ. ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಇವುಗಳ ಬಗ್ಗೆ ಕೇಂದ್ರೀಕೃತವಾಗಿ ಕೆಲಸ ಮಾಡಲು ಬಹು ಆಯಾಮ ಬಡತನ ಸೂಚಕಗಳು (ಎಂ.ಪಿ.ಐ) ಸಹಾಯಕವಾಗಿವೆ ಎಂದು ನೀತಿ ಆಯೋಗದ ಸಲಹೆಗಾರರು ತಿಳಿಸಿದ್ದಾರೆ.
ಈ ಕಾರ್ಯಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಸಹಕಾರವನ್ನು ಪಡೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ಸಚಿವ ಮುನಿರತ್ನ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಅಮಿತಾ ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ
ಇದನ್ನೂ ಓದಿ: ಕೊರೊನಾ ಎಲ್ಲರಿಗೂ ಒಂದೇ ಅಲ್ವಾ: ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆ ಸಿದ್ಧತೆ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ