ಬೆಂಗಳೂರು: ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಜನೆ ಮಾಡಲಿಲ್ಲ. ಈಗ ಪಾದಯಾತ್ರೆ ಮಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ರಾಜ್ಯ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇಂದು (ಮಾರ್ಚ್ 1) ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ರಾಜಕೀಯ ಹಿತಾಸಕ್ತಿಗಾಗಿ ಜನರಿಗೆ ಸಂಕಷ್ಟ ತಂದೊಡ್ಡಿದೆ. ಕಾಂಗ್ರೆಸ್ ಪಾದಯಾತ್ರೆಯಿಂದ ಬೆಂಗಳೂರಿಗರಿಗೆ ಸಂಕಷ್ಟ ಎದುರಾಗಿದೆ. ಅದು ಬಿಟ್ಟು ಬೇರೆ ಯಾವುದೇ ಉಪಯೋಗವಿಲ್ಲ. ಬೆಂಗಳೂರಿನ ಜನ ಟ್ರಾಫಿಕ್‌ನಿಂದ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉಕ್ರೇನ್‌ನಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬಸವರಾಜ ಬೊಮ್ಮಾಯಿ ಈ ವೇಳೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವರ ಜತೆ ಚರ್ಚಿಸಿದ್ದೇನೆ. ಆಹಾರ, ನೀರು ಒದಗಿಸುವಂತೆ ಮನವಿ ಮಾಡಿದ್ದೇನೆ. ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಮನವಿ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಏರ್‌ಲಿಫ್ಟ್‌ಗೆ ಸ್ವಲ್ಪ ಸಮಸ್ಯೆಯಾಗಿದೆ. ಸಮಯ ನೋಡಿಕೊಂಡು ಕರೆತರಲಾಗುವುದು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್ಸಿಗರು ತೂಕ ಕಡಿಮೆ ಮಾಡಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ 2.O ನಡೆಸುತ್ತಿದೆ. ಇನ್ನೊಂದು ವರ್ಷದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮಾಡುತ್ತಿರುವ ಪಾದಯಾತ್ರೆ ಚುನಾವಣಾ ಗಿಮಿಕ್ ಎಂದು ಇತ್ತ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಐವತ್ತು ವರ್ಷ ಕೇಂದ್ರದಲ್ಲಿ ಆಡಳಿತ ಮಾಡಿದೆ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಕೆಲಸ ಮಾಡಿದ್ದಾರೆ. ಅಧಿಕಾರದಲ್ಲಿ ಇದ್ದಾಗ ನೆನಪಾಗದೆ ಈಗ ನೆನಪಾಗಿದೆ. ಮೋಜು ಮಸ್ತಿ ಮಾಡಲು ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಯಲ್ಲಿ ಗಂಭೀರತೆ ಇಲ್ಲ ಎಂದು ಯತ್ನಾಳ್ ಟೀಕಿಸಿದ್ದಾರೆ.
ಕಾಂಗ್ರೆಸ್ಸಿಗರು ತೂಕ ಕಡಿಮೆ ಮಾಡಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ರಾಜ್ಯ, ದೇಶದ ಆರೋಗ್ಯಕ್ಕೆ ಕೆಲಸ ಮಾಡಿಲ್ಲ. ಮುಂದಿನ ವರ್ಷದ ಚುನಾವಣೆ ದಿಡೀರ್ ಎಂದು ಬಂದರೆ . ಕಾಂಗ್ರೆಸ್ಸಿಗರಿಗೆ ನಡೆಯಲೂ ಆಗಲ್ಲ ಎಂದು ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ಜನರನ್ನು ಸುರಕ್ಷಿತವಾಗಿ ಕರೆತರಲಾಗುತ್ತದೆ: ಸಿಎಂ ಬೊಮ್ಮಾಯಿ ಭರವಸೆ
ಇದನ್ನೂ ಓದಿ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ವಿವಾದ; ಕಾಲೇಜು ನಡೆ ವಿರೋಧಿಸಿ ಸಿಎಂ ಬೊಮ್ಮಾಯಿಗೆ ಶಿರೋಮಣಿ ಗುರುದ್ವಾರ ಸಮಿತಿ ಪತ್ರ
Published On - 12:00 pm, Tue, 1 March 22